Just In
- 30 min ago
ರೋಡ್ ಟೆಸ್ಟಿಂಗ್ನಲ್ಲಿ ಕಂಡುಬಂದ ಹ್ಯುಂಡೈ ಕ್ರೆಟಾ 7 ಸೀಟರ್ ವರ್ಷನ್
- 12 hrs ago
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- 12 hrs ago
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಫೋರ್ಸ್ ನ್ಯೂ ಜನರೇಷನ್ ಗೂರ್ಖಾ
- 12 hrs ago
ಸೀಮನ್ಸ್ ಕಂಪನಿಯ ಜೊತೆಗೂಡಿ ಆಧುನಿಕ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ಅಭಿವೃದ್ದಿಪಡಿಸಲಿದೆ ಓಲಾ
Don't Miss!
- News
ಚಿನ್ನ ಕಳ್ಳಸಾಗಣೆ: 28 ಕೋಟಿ ರೂಪಾಯಿ ಮೌಲ್ಯದ 55.61 ಕೆಜಿ ಚಿನ್ನ ವಶಪಡಿಸಿಕೊಂಡ DRI
- Movies
ಸ್ಯಾಂಡಲ್ ವುಡ್ ಸುಂದರಿಯರು; ಅಪರೂಪದ ಫೋಟೋ ಹಂಚಿಕೊಂಡ ಮಾಲಾಶ್ರೀ, ಶ್ರುತಿ
- Lifestyle
ಶುಕ್ರವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್
- Sports
ಐಎಸ್ಎಲ್: ಈಸ್ಟ್ ಬೆಂಗಾಲ್ ಅಜೇಯ ನಡೆಗೆ ಬೆಸ್ಟ್ ಮುಂಬೈ ಸವಾಲು
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೆಪ್ಟೆಂಬರ್‌ನಲ್ಲಿ ಮಾರಾಟವಾದ ಟಾಪ್ 10 ಎಸ್‌ಯುವಿ ಕಾರುಗಳಿವು..!
ಕರೋನಾ ವೈರಸ್ ಪರಿಣಾಮ ತೀವ್ರವಾಗಿ ಕುಸಿತ ಕಂಡಿದ್ದ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಳ್ಳುತ್ತಿದ್ದು, ಹಲವಾರು ಆಟೋ ಕಂಪನಿಗಳ ಹೊಸ ವಾಹನಗಳ ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

2020ರ ಸೆಪ್ಟೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.31 ರಷ್ಟು ಬೆಳವಣಿಗೆ ಕಂಡುಬಂದಿದ್ದು, ಕಿಯಾ ಮೋಟಾರ್ಸ್, ಮಾರುತಿ ಸುಜುಕಿ, ಟಾಟಾ ಮೋಟಾರ್ಸ್ ಮತ್ತು ಹ್ಯುಂಡೈ ಸೇರಿದಂತೆ ವಿವಿಧ ಕಾರು ಕಂಪನಿಗಳು ಒಟ್ಟು 2,92,894 ಯನಿಟ್ ಕಾರುಗಳನ್ನು ಮಾರಾಟ ಮಾಡಿವೆ. ಇದರಲ್ಲಿ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಿಗೆ ಹೆಚ್ಚಿನ ಬೇಡಿಕೆ ಹರಿದುಬಂದಿದ್ದು, ಬೇಡಿಕೆಯಲ್ಲಿರುವ ಮುಂಚೂಣಿಯಲ್ಲಿ ಟಾಪ್ 10 ಕಾರುಗಳ ಮಾಹಿತಿ ಇಲ್ಲಿ ನೀಡಲಾಗಿದೆ.

ಹ್ಯುಂಡೈ ಕ್ರೆಟಾ
ಕ್ರೆಟಾ ನ್ಯೂ ಜನರೇಷನ್ ಮಾದರಿಯು ಬಿಡುಗಡೆಯ ನಂತರ ಹಲವು ಹೊಸ ದಾಖಲೆಗಳೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಲಾಕ್ ಡೌನ್ ಸಂದರ್ಭದಲ್ಲೂ ಕ್ರೆಟಾ ಕಾರು ಮಾದರಿಯು ಭರ್ಜರಿಯಾಗಿ ಮಾರಾಟಗೊಂಡಿತ್ತು. ಸೆಪ್ಟೆಂಬರ್ ಅವಧಿಯಲ್ಲಿ ಕ್ರೆಟಾ ಕಾರು 12,325 ಯುನಿಟ್ ಮಾರಾಟಗೊಂದಿಗೆ ಕಳೆದ ವರ್ಷಕ್ಕಿಂತಲೂ ಶೇ.86ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಕಿಯಾ ಸೆಲ್ಟೊಸ್
ಕಿಯಾ ಮೋಟಾರ್ಸ್ ಕಂಪನಿಯು ಸೆಪ್ಟೆಂಬರ್ ಅವಧಿಯಲ್ಲಿ ಶೇ. 141ರಷ್ಟು ಬೆಳವಣಿಗೆಯೊಂದಿಗೆ ಒಟ್ಟು 18,676 ಯುನಿಟ್ ಮಾರಾಟ ಮಾಡಿದ್ದು, ಕಳೆದ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ 7,754 ಯುನಿಟ್ ಮಾರಾಟ ಮಾಡಿತ್ತು. ಇದರಲ್ಲಿ ಸೆಲ್ಟೊಸ್ ಮಾದರಿಯು 9,079 ಯುನಿಟ್ ಮಾರಾಟಗೊಂಡಿದ್ದು, ಕಳೆದ ವರ್ಷಕ್ಕಿಂತಲೂ ಶೇ. 17ರಷ್ಟು ಬೆಳವಣಿಗೆ ಸಾಧಿಸಿದೆ.

ಮಹೀಂದ್ರಾ ಸ್ಕಾರ್ಪಿಯೋ
ಮಹೀಂದ್ರಾ ಕಂಪನಿಯು ಕೂಡಾ ಕಳೆದ ಐದು ತಿಂಗಳಿನಿಂದ ಕಾರು ಮಾರಾಟದಲ್ಲಿ ಸತತ ಕುಸಿತ ಅನುಭವಿಸಿದ್ದು, ಇದೀಗ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದೆ. ಇದರಲ್ಲಿ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯು 3,527 ಯನಿಟ್ ಮಾರಾಟಗೊಂಡಿದ್ದು, ಕಳೆದ ವರ್ಷಕ್ಕಿಂತ ಶೇ. 2ರಷ್ಟು ಹಿನ್ನಡೆಯಾಗಿದೆ. ಆದರೂ ಕಳೆದ ಐದು ತಿಂಗಳಿನಲ್ಲಿ ಇದು ಉತ್ತಮ ಮಾರಾಟ ಸಂಖ್ಯೆಯಾಗಿದ್ದು, ಮುಂಬರುವ ದಿನಗಳಲ್ಲಿ ಚೇತರಿಕೆ ಕಾಣುವ ವಿಶ್ವಾಸದಲ್ಲಿದೆ.

ಎಂಜಿ ಹೆಕ್ಟರ್
ಎಂಜಿ ಮೋಟಾರ್ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಕಾರು ಮಾದರಿಗಳನ್ನು ಪರಿಚಯಿಸುತ್ತಿದ್ದು, ಹೆಕ್ಟರ್ ಕಾರು ಮಾರಾಟದಲ್ಲಿ ತುಸು ಹಿನ್ನಡೆ ಅನುಭವಿಸಿದರೂ ವಿವಿಧ ಕಾರು ಮಾದರಿಗಳ ಮೂಲಕ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಕಾಯ್ದುಕೊಂಡಿದೆ. ಹೆಕ್ಟರ್ ಕಾರು ಮಾದರಿಯು ಸೆಪ್ಟೆಂಬರ್ ಅವಧಿಯಲ್ಲಿ 2,410 ಯುನಿಟ್ ಮಾರಾಟಗೊಂಡಿದ್ದು, ಕಳೆದ ವರ್ಷಕ್ಕಿಂತ ಶೇ.8 ರಷ್ಟು ಕುಸಿತ ಕಂಡಿದೆ.

ಮಾರುತಿ ಎಸ್-ಕ್ರಾಸ್
ಮಾರುತಿ ಸುಜುಕಿ ಕಂಪನಿಯು ಕಳೆದ ತಿಂಗಳ ಹಿಂದಷ್ಟೇ ಎಸ್-ಕ್ರಾಸ್ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿರುವ ಎಸ್-ಕ್ರಾಸ್ ಕಾರು ಸೆಪ್ಟೆಂಬರ್ ಅವಧಿಯಲ್ಲಿ 2,098 ಯನಿಟ್ ಮಾರಾಟಗೊಳ್ಳುವ ಮೂಲಕ ಕಳೆದ ವರ್ಷಕ್ಕಿಂತ ಶೇ.102 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಟಾಟಾ ಹ್ಯಾರಿಯರ್
ಹ್ಯಾರಿಯರ್ ಕಾರು ಮಾದರಿಯು ಮೊದಲ ಬಾರಿಗೆ ಬಿಡುಗಡೆಯಾದ ಸಂದರ್ಭದಲ್ಲಿ ಡೀಸೆಲ್ ಮ್ಯಾನುವಲ್ ಆವೃತ್ತಿಯನ್ನು ಮಾತ್ರ ಪಡೆದುಕೊಂಡಿತ್ತು. ಇದೀಗ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯಿಂದಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಸೆಪ್ಟೆಂಬರ್ ಅವಧಿಯಲ್ಲಿ 1,755 ಯನಿಟ್ ಮಾರಾಟದೊಂದಿಗೆ ಶೇ.87 ರಷ್ಟು ಬೆಳವಣಿಗೆ ಸಾಧಿಸಿದೆ.

ಮಹೀಂದ್ರಾ ಎಕ್ಸ್‌ಯುವಿ500
ಎಕ್ಸ್‌ಯುವಿ500 ಕಾರು ಮಾದರಿಯಲ್ಲಿ ಶೀಘ್ರದಲ್ಲೇ ನ್ಯೂ ಜನರೇಷನ್ ಮಾದರಿಯನ್ನು ಬಿಡುಗಡೆ ಮಾಡುತ್ತಿರುವ ಹಿನ್ನಲೆ ಹಳೆಯ ಆವೃತ್ತಿಯ ಮಾರಾಟವು ಮಂದಗತಿಯಲ್ಲಿ ಸಾಗಿದೆ. ಸೆಪ್ಟೆಂಬರ್ ಅವಧಿಯಲ್ಲಿ 595 ಯನಿಟ್ ಮಾರಾಟದೊಂದಿಗೆ ಕಳೆದ ವರ್ಷಕ್ಕಿಂತ ಶೇ. 47ರಷ್ಟು ನಷ್ಟ ಅನುಭವಿಸಿದ್ದು, ನ್ಯೂ ಜನರೇಷನ್ ಮಾದರಿಯು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಜೀಪ್ ಕಂಪಾಸ್
ಎಕ್ಸ್‌ಯುವಿ500, ಹ್ಯಾರಿಯರ್ ಮತ್ತು ಹೆಕ್ಟರ್ ಕಾರುಗಳ ನಡುವಿನ ತೀವ್ರ ನಡುವೆಯೂ ಜೀಪ್ ಕಂಪನಿಯು ಕಂಪಾಸ್ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಕಾಯ್ದಕೊಂಡಿದ್ದು, ಸೆಪ್ಟೆಂಬರ್ ಅವಧಿಯಲ್ಲಿ ಕಳೆದ ವರ್ಷಕ್ಕಿಂತಲೂ ಶೇ. 8 ರಷ್ಟು ನಷ್ಟ ಅನುಭವಿಸಿದರೂ 554 ಯನಿಟ್ ಮಾರಾಟಗೊಳಿಸಿದೆ.

ಫೋಕ್ಸ್‌ವ್ಯಾಗನ್ ಟಿ-ರಾಕ್
ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ತುಸು ದುಬಾರಿ ಬೆಲೆ ಹೊಂದಿರುವ ಫೋಕ್ಸ್‌ವ್ಯಾಗನ್ ಟಿ-ರಾಕ್ ಕಾರು ಮಾದರಿಯು ಪ್ರಮುಖ ಕಾರುಗಳಿಗೆ ಪೈಪೋಟಿ ನೀಡುವ ಮೂಲಕ ಸೆಪ್ಟೆಂಬರ್ ಅವಧಿಯಲ್ಲಿ 233 ಯನಿಟ್ ಮಾರಾಟಗೊಂಡಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ರೆನಾಲ್ಟ್ ಡಸ್ಟರ್
ಡಸ್ಟರ್ ಮಾದರಿಯಲ್ಲಿ ಡೀಸೆಲ್ ಎಂಜಿನ್ ಸ್ಥಗಿತದ ನಂತರ ಗ್ರಾಹಕರ ಬೇಡಿಕೆಯಲ್ಲಿ ಸಾಕಷ್ಟು ಕುಸಿತ ಕಂಡಿದ್ದು, ಇದೀಗ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಂಡಿರುವುದು ಮುಂಬರುವ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ. ಸೆಪ್ಟೆಂಬರ್ ಅವಧಿಯಲ್ಲಿ ಶೇ. 76 ರಷ್ಟು ನಷ್ಟದೊಂದಿಗೆ 133 ಯುನಿಟ್ ಮಾತ್ರವೇ ಮಾರಾಟಗೊಂಡಿದ್ದು, ಟರ್ಬೋ ಪೆಟ್ರೋಲ್ ಮಾದರಿಯು ಇದೀಗ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.