ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲಿರುವ ನಿಸ್ಸಾನ್ ಮ್ಯಾಗ್ನೈಟ್ ವಿಶೇಷತೆಗಳಿವು..
ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಅತ್ಯುತ್ತಮ ಬೇಡಕೆಯ ನೀರಿಕ್ಷೆಯಲ್ಲಿರುವ ನಿಸ್ಸಾನ್ ಇಂಡಿಯಾ ಕಂಪನಿಯು ಹೊಚ್ಚ ಹೊಸ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂದ ಹೇಗೆ ಭಿನ್ನವಾಗಿದೆ ಮತ್ತು ಖರೀದಿಗೆ ಪೂರಕವಾದ ಅಂಶಗಳು ಯಾವವು ಎಂಬುವುದನ್ನು ಇಲ್ಲಿ ಚರ್ಚಿಸಲಾಗಿದೆ.

ನಿಸ್ಸಾನ್ ಕಂಪನಿಯು ತನ್ನ ಹೊಚ್ಚ ಹೊಸ ಕಾರು ಮಾದರಿಯಾದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಇದೇ ವರ್ಷಾಂತ್ಯದೊಳಗೆ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರಿನ ಉತ್ಪಾದನೆಗಾಗಿ ಈಗಾಗಲೇ ಅಧಿಕೃತವಾಗಿ ಚಾಲನೆ ನೀಡಿದೆ. ಸಬ್ ಫೋರ್ ಮೀಟರ್ ವಿನ್ಯಾಸ ಹೊಂದಿರುವ ಹೊಸ ಕಾರು ಪ್ರಮುಖ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ಸಿದ್ದತೆಯಲ್ಲಿದ್ದು, ಸೆಗ್ಮೆಂಟ್ ಇನ್ ಬೆಸ್ಟ್ ಫೀಚರ್ಸ್‌ಗಳನ್ನು ಪಡೆದುಕೊಂಡಿರಲಿದೆ.

ಬಿ-ಸೆಗ್ಮೆಂಟ್‌ನಲ್ಲಿರುವ ಪ್ರಮುಖ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿರುವ ಹೊಸ ಮ್ಯಾಗ್ನೈಟ್ ಕಾರು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರು ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದೆ.

ಹೊಸ ಕಾರು ಬಿಡುಗಡೆಗೆ ಅಂತಿಮ ಹಂತದ ಸಿದ್ದತೆಯಲ್ಲಿರುವ ನಿಸ್ಸಾನ್ ಕಂಪನಿಯು ಕಾರಿನ ಬೆಲೆ ಮಾಹಿತಿಯನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ತಾಂತ್ರಿಕ ಮಾಹಿತಿಗಳನ್ನು ಹಂಚಿಕೊಂಡಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್‌ನೊಂದಿಗೆ ರಸ್ತೆಗಿಳಿಯುತ್ತಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಕಾರಿನ ಅಧಿಕೃತ ಎಂಜಿನ್ ಮಾಹಿತಿಯನ್ನು ಸಹ ಹಂಚಿಕೊಂಡಿದ್ದು, ಹೊಸ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಬಳಕೆ ಮಾಡಿದೆ. ಆರಂಭದ ಮೊದಲೆರಡು ವೆರಿಯೆಂಟ್‌ಗಳಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಈ ಮೂಲಕ ಹೊಸ ಕಾರಿನಲ್ಲಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ ಗರಿಷ್ಠ 18.75 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದರೆ ಟರ್ಬೋ ಪೆಟ್ರೋಲ್ ಮಾದರಿಯು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಪ್ರತಿಲೀಟರ್‍ಗೆ 17.7 ಕಿ.ಮೀ ನಿಂದ 20 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 40 ಲೀಟರ್ ಸಾಮರ್ಥ್ಯದ ಫ್ಯೂಲ್ ಟ್ಯಾಂಕ್ ಅನ್ನು ಒಂದು ಬಾರಿ ಪೂರ್ತಿಯಾಗಿ ತುಂಬಿಸಿದರೆ ಗರಿಷ್ಠ 800 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಇನ್ನು ಹೊಸ ಕಾರು ಸ್ಪೋರ್ಟಿ ಲುಕ್‌ನೊಂದಿಗೆ ಕಟಿಂಗ್ ಎಡ್ಜ್ ವಿನ್ಯಾಸಗಳನ್ನು ಪಡೆದುಕೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎಂಬ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಹೊಸ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಆಕರ್ಷಕವಾದ ಗ್ರಿಲ್, ಕ್ರೋಮ್ ಸ್ಟ್ರೀಪ್, ಎಲ್ಇಡಿ ಬಿ-ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ ವಿನ್ಯಾಸದ ಎಲ್ಇಡಿ ಡಿಆರ್‌ಎಲ್‌ಗಳು, ಫ್ರಂಟ್ ಬಂಪರ್, ಫಾಗ್ ಲ್ಯಾಂಪ್, ಸೆಂಟ್ರಲ್ ಏರ್ ಇನ್‌ಟೆಕ್, ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್ ಸೌಲಭ್ಯಗಳಿವೆ. ಹಾಗೆಯೇ ಹೊಸ ಕಾರಿನ ಸೈಡ್ ಪ್ರೋಫೈಲ್ ಕೂಡಾ ಆಕರ್ಷಕವಾಗಿದ್ದು, 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಟೈಲ್‌ಲೈಟ್ ಸೌಲಭ್ಯದೊಂದಿಗೆ ಕಾರಿನ ಡೋರ್ ತಳಭಾಗದಲ್ಲಿ ಮತ್ತು ರಿಯರ್ ಬಂಪರ್ ಬಳಿ ಸಿಲ್ವರ್ ಕೊಟಿಂಗ್ ಹೊಂದಿರುವ ಆಕ್ಸೆಂಟ್ ನೀಡಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮ್ಯಾಗ್ನೈಟ್ ಕಾರಿನಲ್ಲಿ ಕಪ್ಪು ಬಣ್ಣದ ವೀಲ್ಹ್ ಆರ್ಚ್, ವೀಲ್ಹ್ ಆರ್ಚ್‌ಗೆ ಹೊಂದಿಕೊಂಡಿರುವ ಬ್ಲ್ಯಾಕ್ ಕ್ಲಾಡಿಂಗ್, ಬೂಟ್ ಲಿಡ್, ಕಾರಿನ ಹಿಂಭಾಗದ ಮಧ್ಯದಲ್ಲಿ ನಿಸ್ಸಾನ್ ಲೊಗೊ ಜೊತೆಗೆ ಮ್ಯಾಗ್ನೈಟ್ ಲೊಗೊ ನೀಡಲಾಗಿದ್ದು, ಕಾರಿನ ಹೊರ ನೋಟಕ್ಕೆ ಮತ್ತಷ್ಟು ಆಕರ್ಷಣೆ ನೀಡಲಿವೆ.

ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಆಕರ್ಷಕ ವಿನ್ಯಾಸವನ್ನು ನೀಡಿದ್ದು, ಸಂಪೂರ್ಣವಾಗಿ ಕಪ್ಪು ಬಣ್ಣದ ಕ್ಯಾಬಿನ್ ಪ್ರೀಮಿಯಂ ಅನುಭವ ನೀಡುತ್ತದೆ. ಆಸನಗಳಲ್ಲಿ ಮಾತ್ರ ಗ್ರೇ ಬಣ್ಣವನ್ನು ಬಣ್ಣವನ್ನು ಬಳಕೆ ಮಾಡಲಾಗಿದ್ದು, ಫ್ಲ್ಯಾಟ್ ಬಾಟಮ್ ಸ್ಪೀರಿಂಗ್ ವೀಲ್ಹ್, ಮೌಂಟೆಡ್ ಕಂಟ್ರೋಲ್ಸ್, 7-ಇಂಚಿನ ಫುಲ್ ಡಿಜಿಟಲ್ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 8-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಕ್ಲಸ್ಟರ್, ಕ್ರೂಸ್ ಕಂಟ್ರೊಲ್, 360 ಡಿಗ್ರಿ ವ್ಯೂವ್ ಕ್ಯಾಮೆರಾ, ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ ಹೊಂದಿದೆ.
MOST READ: ಹೊಚ್ಚ ಹೊಸ ಹ್ಯುಂಡೈ ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಬಿಡುಗಡೆ

ಹಿಂಬದಿಯಲ್ಲಿ ಆರಾಮದಾಯಕ ಆಸನಗಳೊಂದಿಗೆ ಸೆಂಟರ್ ಆರ್ಮ್ ರೆಸ್ಟ್, ರಿಯರ್ ಎಸಿ ವೆಂಟ್ಸ್, 60:40 ಅನುಪಾತದಲ್ಲಿ ಮಡಿಕೆ ಮಾಡಬಹುದಾದ ಆಸನಗಳು, 334-ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ನೀಡಲಾಗಿದ್ದು, ಹೆಚ್ಚುವರಿ ಬೂಟ್ ಸ್ಪೆಸ್ ಅವಶ್ಯವಿದ್ದಲ್ಲಿ ಹಿಂಬದಿಯ ಆಸನಗಳನ್ನು ಮಡಿಕೆ ಮಾಡಿಕೊಳ್ಳಬಹುದಾಗಿದೆ.

ಮೊದಲ ಎರಡು ವೆರಿಯೆಂಟ್‌ಗಳಿಂತ ಟಾಪ್ ಎಂಡ್ ವೆರಿಯೆಂಟ್‌ಗಳು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರಲಿದ್ದು, ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ ಹೆಚ್ಚುವರಿಯಾಗಿ ವೈರ್‌ಲೆಸ್ ಚಾರ್ಜರ್, ಪೆಡಲ್ ಲ್ಯಾಂಪ್ಸ್, ಏರ್ ಪ್ಯೂರಿಫೈರ್, ಜೆಬಿಎಲ್ ಸೌಂಡ್ ಸಿಸ್ಟಂ, ಆ್ಯಂಬಿಯೆಂಟ್ ಲೈಟಿಂಗ್ಸ್ ಸೌಲಭ್ಯ ಹೊಂದಿರಲಿದ್ದು, ಹೊಸ ಕಾರಿನ ಎಂಜಿನ್ ಆಯ್ಕೆಗಳು ಕೂಡಾ ಆಕರ್ಷಕವಾಗಿದೆ.

ಬೆಲೆ ಮತ್ತು ಬಿಡುಗಡೆ ಅವಧಿ(ಅಂದಾಜು)
ಸದ್ಯ ಮಾರುಕಟ್ಟೆಯಲ್ಲಿ ಬಹುತೇಕ ಸಬ್ ಫೋರ್ ಮೀಟರ್ ವಿನ್ಯಾಸದ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳು ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 6.50 ಲಕ್ಷದಿಂದ ರೂ. 12.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದ್ದು, ಹೊಸ ಮ್ಯಾಗ್ನೈಟ್ ಕಾರು ಆರಂಭಿಕವಾಗಿ ರೂ. 5.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.


Click it and Unblock the Notifications








