ಭಾರತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆಗಳೇನು?

ದೇಶಿಯ ಮಾರುಕಟ್ಟೆಯಲ್ಲಿ ಹೊಸ ನೀರಿಕ್ಷೆಯೊಂದಿಗೆ ಕಾರು ಮಾರಾಟ ಆರಂಭಿಸುತ್ತಿರುವ ಫ್ರೆಂಚ್ ಆಟೋ ಉತ್ಪಾದನೆ ಕಂಪನಿಯಾದ ಸಿಟ್ರನ್ ತನ್ನ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಸಿಟ್ರನ್ ಕಾರುಗಳಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಪ್ರಮುಖ ಆಕರ್ಷಣೆಯಾಗಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆಗಳೇನು?

ಪಿಎಸ್ಎ ಗ್ರೂಪ್‌ನ ಪ್ರಮುಖ ಅಂಗಸಂಸ್ಥೆಯಾಗಿರುವ ಸಿಟ್ರನ್ ಕಂಪನಿಯು ಭಾರತದಲ್ಲಿ 2021ಕ್ಕೆ ಹೊಸ ಕಾರು ಮಾರಾಟವನ್ನು ಅಧಿಕೃತವಾಗಿ ಆರಂಭಿಸಲು ಸಿದ್ದತೆ ನಡೆಸಿದ್ದು, ಹೊಸ ಕಾರು ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಹ್ಯಾಚ್‌ಬ್ಯಾಕ್, ಸೆಡಾನ್, ಎಸ್‌‌ಯುವಿ ಮತ್ತು ಎಂಪಿವಿ ಕಾರುಗಳನ್ನು ಬಿಡುಗಡೆ ಮಾಡಲಿದೆ. ಸಿಟ್ರನ್ ಕಂಪನಿಯು ಮೊದಲ ಹಂತದಲ್ಲಿ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲಿದ್ದು, ತದನಂತರದಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಬಿಡುಗಡೆ ಮಾಡಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆಗಳೇನು?

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಸದ್ಯಕ್ಕೆ ಭಾರತದಲ್ಲಿ ಸಿ21 ಎನ್ನುವ ಕೋಡ್‌ನೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಕಿಯಾ ಸೊನೆಟ್, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಟಾಟಾ ನೆಕ್ಸಾನ್ ಕಾರು ಮಾದರಿಗಳಿಗೆ ಪೈಪೋಟಿ ನೀಡಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆಗಳೇನು?

ಯುರೋಪ್ ಮತ್ತು ಆಫ್ರಿಕಾದ ವಿವಿಧ ರಾಷ್ಟ್ರಗಳಲ್ಲಿ ಈಗಾಗಲೇ ಬೇರೆ ಬೇರೆ ಹೆಸರಿನೊಂದಿಗೆ ಮಾರಾಟವಾಗುತ್ತಿರುವ ಸಿಟ್ರನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಇದೀಗ ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಅಭಿವೃದ್ದಿಗೊಳ್ಳುತ್ತಿದ್ದು, ಹೊಸ ಕಾರು ಪ್ರಮುಖ ರಾಷ್ಟ್ರಗಳಲ್ಲಿ ಎಲೆಕ್ಟ್ರಿಕ್ ಆವೃತ್ತಿಯನ್ನು ಸಹ ಪಡೆದುಕೊಳ್ಳುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆಗಳೇನು?

ಸದ್ಯಕ್ಕೆ ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ಆವೃತ್ತಿಯು ಸಹ ಬಿಡುಗಡೆಯಾಗಲಿದೆ. ಸಿ21 ಕಾರು ಮಾದರಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆಗಳೇನು?

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಹುತೇಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಆರಂಭಿಕವಾಗಿ ರೂ. 6.70 ಲಕ್ಷದಿಂದ ಟಾಪ್ ಮಾದರಿಗಳು ರೂ. 13 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಸಿ21 ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 7 ಲಕ್ಷದಿಂದ ರೂ. 12 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಭಾರತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆಗಳೇನು?

ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಸಿಟ್ರನ್ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಳ್ಳಲಿದ್ದು, ಸಿ5 ಏರ್‌ಕ್ರಾಸ್ ಕಾರು ಕಿಯಾ ಸೆಲ್ಟೊಸ್, ಟಾಟಾ ಹ್ಯಾರಿಯರ್, ಜೀಪ್ ಕಂಪಾಸ್ ಕಾರುಗಳಿಗೆ ಸರಿಸಮನಾದ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗಲಿದ್ದರೆ ಸಿ3 ಏರ್‌ಕ್ರಾಸ್ ಕಾರು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಪೈಪೋಟಿ ನೀಡಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆಗಳೇನು?

ತಮಿಳುನಾಡಿನ ತಿರುವಲ್ಲೂರ್‌ನಲ್ಲಿ ಹೊಸ ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಪಿಎಸ್ಎ ಗ್ರೂಪ್ ಕಂಪನಿಯು ತನ್ನ ಅಂಗಸಂಸ್ಥೆಯಾದ ಸಿಟ್ರನ್ ಸೇರಿದಂತೆ ವಿವಿಧ ಬ್ರಾಂಡ್ ಕಾರುಗಳ ಮಾರಾಟವನ್ನು ಭಾರತದಲ್ಲಿ ಹೊಸದಾಗಿ ಆರಂಭಿಸುತ್ತಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ವಿಶೇಷತೆಗಳೇನು?

ಸಿಟ್ರನ್ ಹೊಸ ಕಾರುಗಳು ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಬೆಲೆ ವಿಚಾರದಲ್ಲೂ ಗಮನಸೆಳೆಯಲಿದೆ. ಸಿಟ್ರನ್ ಕಂಪನಿಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

More from DriveSpark

Article Published On: Saturday, November 14, 2020, 13:56 [IST]
English summary
Top Things To Know About Upcoming Citroen C21 Compact SUV. Read in Kanada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+