ಅರ್ಬನ್ ಕ್ರೂಸರ್ ಕಾರು ಮಾದರಿಗೆ ನಟ ಆಯುಷ್ಮಾನ್‌ ಖುರಾನಾ ಬ್ರಾಂಡ್ ಅಂಬಾಸಿಡರ್

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ಇದೇ ತಿಂಗಳು 23ಕ್ಕೆ ತನ್ನ ಹೊಸ ರೀಬ್ಯಾಡ್ಜ್ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆ ಮುನ್ನ ಬಾಲಿವುಡ್ ನಟನ್ನು ಬ್ರಾಂಡ್ ಅಂಬಾಸಿಡರ್ ಆಯ್ಕೆ ಮಾಡಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗೆ ನಟ ಆಯುಷ್ಮಾನ್‌ ಖುರಾನಾ ಬ್ರಾಂಡ್ ಅಂಬಾಸಿಡರ್

ಬಾಲಿವುಡ್‌ನ ಜನಪ್ರಿಯ ನಟ, ಗಾಯಕ ಆಯುಷ್ಮಾನ್‌ ಖುರಾನಾ ಅವರನ್ನು ಟೊಯೊಟಾ ಕಂಪನಿಯು ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗೆ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಿದ್ದು, ಯುವ ಸಮುದಾಯವನ್ನು ಸೆಳೆಯುವ ತವಕದಲ್ಲಿದೆ. ಹೊಸ ಕಾರು ಬಿಡುಗಡೆಗೂ ಮುನ್ನವೇ ಆಟೋ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಬೆಸ್ಟ್ ಇನ್ ಫೀಚರ್ಸ್‌ನೊಂದಿಗೆ ಖರೀದಿಗೆ ಲಭ್ಯವಾಗಲಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗೆ ನಟ ಆಯುಷ್ಮಾನ್‌ ಖುರಾನಾ ಬ್ರಾಂಡ್ ಅಂಬಾಸಿಡರ್

ಹೊಸ ಅರ್ಬನ್ ಕ್ರೂಸರ್ ಕಾರು ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಎಡ್ಎಕ್ಸ್ಐ ಪ್ಲಸ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, 1.5 ಪೆಟ್ರೋಲ್ ಹೈಬ್ರಿಡ್ ಮಾದರಿಯನ್ನು ಹೊಂದಿರುವ ಹೊಸ ಕಾರು ಮೂಲ ಕಾರಿನ ಬೆಲೆಗಿಂತಲೂ ತುಸು ದುಬಾರಿಯಾಗಲಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗೆ ನಟ ಆಯುಷ್ಮಾನ್‌ ಖುರಾನಾ ಬ್ರಾಂಡ್ ಅಂಬಾಸಿಡರ್

ಮೂಲ ಕಾರು ಮಾದರಿಯಾದ ವಿಟಾರಾ ಬ್ರೆಝಾಗಿಂತಲೂ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಕಾರು ಕ್ರೆಟಾ ಮತ್ತು ಸೆಲ್ಟೊಸ್ ಕಾರಿಗೆ ಪೈಪೋಟಿ ನೀಡುವ ತವಕದಲ್ಲಿದ್ದು, ರೈಜ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಿಂದಲೂ ಕೆಲವು ವಿನ್ಯಾಸಗಳನ್ನು ಸಹ ಎರವಲು ಪಡೆದುಕೊಂಡಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗೆ ನಟ ಆಯುಷ್ಮಾನ್‌ ಖುರಾನಾ ಬ್ರಾಂಡ್ ಅಂಬಾಸಿಡರ್

ಹೊಸ ರೀಬ್ಯಾಡ್ಜ್ ಕಾರಿನಲ್ಲಿ ಟೊಯೊಟಾ ಬ್ಯಾಡ್ಜ್‌ನೊಂದಿಗೆ ಟ್ವಿನ್ ಸ್ಲಾಟ್ ಬೋಲ್ಡ್ ಡೈನಾಮಿಕ್ ಗ್ರೀಲ್, ಆಕರ್ಷಕ ಫ್ರಂಟ್ ಬಂಪರ್, ಇನ್ ಬಿಲ್ಟ್ ಫ್ಲಕ್ಸ್ ಬುಲ್ ಬಾರ್, ಫ್ಲಕ್ಸ್ ಸ್ಕೀಡ್ ಪ್ಲೇಟ್ ಜೋಡಣೆ ಮಾಡಲಾಗಿದ್ದು, ಕಾರಿನ ಒಳಭಾಗದಲ್ಲೂ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗೆ ನಟ ಆಯುಷ್ಮಾನ್‌ ಖುರಾನಾ ಬ್ರಾಂಡ್ ಅಂಬಾಸಿಡರ್

ಹಾಗೆಯೇ ಎಲ್ಇಡಿ ಪ್ರೋಜೆಕ್ಟರ್ ಯನಿಟ್‌ನಲ್ಲಿ ಎಲ್ಇಡಿ ಡಿಆರ್‌ಎಲ್ಎಸ್, ಟರ್ನ್ ಇಂಡಿಕೇಟರ್, 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ರೂಫ್ ಸ್ಪಾಯ್ಲರ್, ಹೈ ಮೌಂಟೆಡ್ ಸ್ಟಾಪ್ ಲ್ಯಾಂಪ್ ನೀಡಲಾಗಿದ್ದು, ಒಳಭಾಗದಲ್ಲಿ 7-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಡ್ಯುಯಲ್ ಟೋನ್ ಇಂಟಿರಿಯರ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ರೈನ್ ಸೆನ್ಸಿಂಗ್ ವೈಪರ್, ಕೀ ಲೆಸ್ ಎಂಟ್ರಿ ನೀಡಲಾಗಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗೆ ನಟ ಆಯುಷ್ಮಾನ್‌ ಖುರಾನಾ ಬ್ರಾಂಡ್ ಅಂಬಾಸಿಡರ್

ಪ್ರಯಾಣಿಕ ಸುರಕ್ಷತೆಗಾಗಿ ವಿಟಾರಾ ಬ್ರೆಝಾ ಮಾದರಿಯಲ್ಲೇ ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಲೋಡ್ ಲಿಮಿಟ್ ಅಲರ್ಟ್, ಓವರ್ ಸ್ಪೀಡ್ ವಾರ್ನಿಂಗ್ ಸಿಸ್ಟಂ ನೀಡಲಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಒಟ್ಟು ಒಂಬತ್ತು ಬಣ್ಣಗಳ ಆಯ್ಕೆ(6 ಸಿಂಗಲ್ ಟೋನ್ ಮತ್ತು 3 ಡ್ಯುಯಲ್ ಟೋನ್) ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಅರ್ಬನ್ ಕ್ರೂಸರ್ ಕಾರು ಮಾದರಿಗೆ ನಟ ಆಯುಷ್ಮಾನ್‌ ಖುರಾನಾ ಬ್ರಾಂಡ್ ಅಂಬಾಸಿಡರ್

ಎಂಜಿನ್ ವೈಶಿಷ್ಟ್ಯತೆ ಮತ್ತು ವಾರಂಟಿ

ಹೊಸ ಅರ್ಬನ್ ಕ್ರೂಸರ್ ಕಾರು ವಿಟಾರಾ ಬ್ರೆಝಾದಲ್ಲಿ ಜೋಡಣೆ ಮಾಡಲಾಗಿರುವ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಹೈಬ್ರಿಡ್ ತಂತ್ರಜ್ಞಾನವನ್ನು ಪಡೆದುಕೊಳ್ಳಲಿದ್ದು, ಪರ್ಫಾಮೆನ್ಸ್ ಜೊತೆಗೆ ಉತ್ತಮ ಇಂಧನ ದಕ್ಷತೆಯನ್ನು ಹೊಂದಿರಲಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗೆ ನಟ ಆಯುಷ್ಮಾನ್‌ ಖುರಾನಾ ಬ್ರಾಂಡ್ ಅಂಬಾಸಿಡರ್

ಟೊಯೊಟಾ ಕಂಪನಿಯು ಹೊಸ ಅರ್ಬನ್ ಕ್ರೂಸರ್ ಕಾರಿನ ಮೇಲೆ ಗರಿಷ್ಠ ಮೂರು ವರ್ಷಗಳ ವಾರಂಟಿ ನೀಡಲಿದ್ದು, ಗ್ರಾಹಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಮೂರು ವರ್ಷ ಅಥವಾ 1 ಲಕ್ಷ ಕಿ.ಮೀ ಮೇಲೆ ವಾರಂಟಿ ಆಯ್ಕೆ ಮಾಡಬಹುದಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಅರ್ಬನ್ ಕ್ರೂಸರ್ ಕಾರು ಮಾದರಿಗೆ ನಟ ಆಯುಷ್ಮಾನ್‌ ಖುರಾನಾ ಬ್ರಾಂಡ್ ಅಂಬಾಸಿಡರ್

ಇದರ ಜೊತೆಗೆ ಹೊಸ ಕಾರು ಬಿಡುಗಡೆಗೂ ಮುನ್ನ ಬುಕ್ಕಿಂಗ್ ಸಲ್ಲಿಸುವ ಗ್ರಾಹಕರಿಗೆ ಹೆಚ್ಚುವರಿಯಾಗಿ 2 ವರ್ಷಗಳ ಹೆಚ್ಚುವರಿ ವಾರಂಟಿ ದೊರೆಯಲಿದ್ದು, ಕಾರು ಬಿಡುಗಡೆಗೂ ಮುನ್ನವೇ ಗ್ರಾಹಕರನ್ನು ಸೆಳೆಯಲು ಹೊಸ ರೆಸ್ಪೆಕ್ಟ್ ಪ್ಯಾಕೇಜ್ ಪ್ರಮುಖ ಆಕರ್ಷಣೆಯಾಗಿದೆ.

Article Published On: Wednesday, September 16, 2020, 22:01 [IST]
English summary
Toyota Appoints Ayushmann Khurrana As Brand Ambassador For Urban Cruiser. Read in Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+