Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರಾಟದಲ್ಲಿ ಭಾರಿ ಪ್ರಮಾಣದ ಕುಸಿತ ಕಂಡ ಟೊಯೊಟಾ
ಜಪಾನ್ ಮೂಲದ ಕಾರು ತಯಾರಕ ಕಂಪನಿಯಾ ಟೊಯೊಟಾ ತನ್ನ 2020ರ ಆಗಸ್ಟ್ ತಿಂಗಳ ಮಾರಾಟ ವರದಿಯನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ, ಟೊಯೊಟಾ ಕಂಪನಿಯು ಮಾರಾಟದಲ್ಲಿ ಶೇ.48.08 ರಷ್ಟು ಕುಸಿತವನ್ನು ಕಂಡಿದೆ.

2020ರ ಆಗಸ್ಟ್ ತಿಂಗಳಲ್ಲಿ ಟೊಯೊಟಾ ಕಂಪನಿಯು ಒಟ್ಟು 5555 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಇದೇ ಆಗಸ್ಟ್ ತಿಂಗಳಲ್ಲಿ ಒಟ್ಟು 10,701 ಯುನಿಟ್‌ಗಳನ್ನು ಮಾರಾಟ ಮಾಡಿದ್ದರು. ಕಳೆದ ವರ್ಷದ ಆಗಸ್ಟ್ ತಿಂಗಳ ಮಾರಾಟವನ್ನು ಈ ವರ್ಷದ ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಶೇ.ಶೇ.48.08 ರಷ್ಟು ಕುಸಿತವನ್ನು ದಾಖಲಿಸಿದೆ. ಇನ್ನು 2020ರ ಜುಲೈ ತಿಂಗಳಲ್ಲಿ ಟೊಯೊಟಾ ಕಂಪನಿಯು 5386 ಯುನಿಟ್‌ಗಳನ್ನು ಮಾರಾಟ ಮಾಡಿದ್ದರು.

2020ರ ಜುಲೈ ತಿಂಗಳ ಮಾರಾಟವನ್ನು ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಶೇ.3.13 ರಷ್ಟು ಏರಿಕೆಯಾಗಿದೆ. ಟೊಯೊಟಾ ಕಂಪನಿಯು ಕಳೆದ ತಿಂಗಳು ಎಟಿಯೋಸ್‌ನ 843 ಯುನಿಟ್‌ಗಳನ್ನು ರಫ್ತು ಮಾಡಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಟೊಯೊಟಾ ಇಂಡಿಯಾ ಸೇಲ್ಸ್ & ಸರ್ವಿಸ್ ವಿಭಾಗದ ಹಿರಿಯ ಉಪಾಧ್ಯಕ್ಷ ನವೀನ್ ಸೋನಿ ಅವರು ಮಾತನಾಡಿ, ಕರ್ನಾಟಕ ರಾಜ್ಯ ಮತ್ತು ದೇಶಾದ್ಯಂತ ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ನಾವು ತಡವಾಗಿ ಉತ್ಪಾದನೆಯನ್ನು ಪ್ರಾರಂಭಿಸಿದ್ದೇವೆ. ಇದು ಬೇಡಿಕೆಯ ಮೇಲೆ ಪಾರಿಣಾಮವನ್ನು ಬೀರಿದೆ ಎಂದರು.

ನಮ್ಮ ಹೆಚ್ಚಿನ ಉದ್ಯೋಗಿಗಳು ವಾಸಿಸುವ ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡಲು ನಾವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಆದರೆ ಇದು ಉತ್ಪಾದನೆಯ ಮೇಲೆ ಪರಿಣಾಮವನ್ನು ಬೀರುತ್ತಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಇನ್ನು ನಮ್ಮ ಸಿಬ್ಬಂದಿಗಳು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯವು ನಿಗದಿಪಡಿಸಿದಂತೆ ಅಗತ್ಯವಿರುವ ಎಲ್ಲಾ ಪ್ರೋಟೋಕಾಲ್ ಗಳನ್ನು ಪೂರ್ಣಗೊಳಿಸಿದ ನಂತರ ಅವರು ಮತ್ತೆ ಕೆಲಸಕ್ಕೆ ಮರಳುತ್ತಿದ್ದಾರೆ ಎಂದು ಹೇಳಿದರು.

ಟೊಯೊಟಾ ದೇಶಿಯ ಕಾರು ಮಾರುಕಟ್ಟೆಯಲ್ಲಿರುವ ಅತ್ಯಂತ ವಿಶ್ವಾಸಾರ್ಹ ಕಂಪನಿಗಳಲ್ಲಿ ಒಂದಾಗಿದೆ. ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ಟೊಯೊಟಾ ಕಂಪನಿಯ ಜನಪ್ರಿಯ ವಾಹನಗಳಾಗಿವೆ. ಇದೀಗ ಟೊಯೊಟಾ ಕಂಪನಿಯು ತನ್ನ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸಲು ಬಯಸಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಎಲ್ಲಾ ರೂಪಾಂತರಗಳಲ್ಲಿಯೂ ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಮೂಲಕ ಮಾರುಕಟ್ಟೆಯನ್ನು ಮತ್ತಷ್ಟು ಬಲಪಡಿಸುವ ಯೋಜನೆಯಲ್ಲಿದೆ. ಟೊಯೊಟಾ ಕಂಪನಿಯು ಸದ್ಯಕ್ಕೆ ಭಾರತದಲ್ಲಿ 7 ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದೆ.

2023ರ ವೇಳೆಗೆ ಟೊಯೊಟಾ ಕಂಪನಿಯು 9 ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲಿದೆ ಎಂದು ವರದಿಗಳಾಗಿದೆ. ಟೊಯೊಟಾ ಕಂಪನಿಯು ಮುಂಬರುವ ದಿನಗಳಲ್ಲಿ ಮಾರುತಿ ಸುಜುಕಿ ಕಂಪನಿಯ ಸಹಭಾಗಿತ್ವದಲ್ಲಿ ಸಿಯಾಜ್ ಕಾರಿನ ರೀಬ್ರಾಂಡೆಡ್ ಮಾದರಿ ಹಾಗೂ ಹ್ಯುಂಡೈ ಕ್ರೆಟಾದಂತಹ ಹೊಸ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ.