ಲಾಕ್‌ಡೌನ್ ವಿನಾಯ್ತಿ ನಂತರ 1,639 ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಲಾಕ್‌ಡೌನ್ ವಿನಾಯ್ತಿ ನಂತರ ಬಹುತೇಕ ಆಟೋ ಕಂಪನಿಗಳು ಹೊಸ ವಾಹನ ಉತ್ಪಾದನೆ ಮತ್ತು ಮಾರಾಟಕ್ಕೆ ಚಾಲನೆ ನೀಡಿದ್ದು, ಟೊಯೊಟಾ ಕೂಡಾ ಹೊಸ ಸುರಕ್ಷಾ ಮಾರ್ಗಸೂಚಿ ಅನುಸಾರವಾಗಿ ವ್ಯಾಪಾರ ವಹಿವಾಟು ಕೈಗೊಂಡಿದೆ.

ಲಾಕ್‌ಡೌನ್ ವಿನಾಯ್ತಿ ನಂತರ 1,639 ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಮೇ 4ರಿಂದ 31ರ ತನಕ 1,639 ಕಾರುಗಳನ್ನು ಮಾರಾಟ ಮಾಡಿರುವ ಟೊಯೊಟಾ ಕಂಪನಿಯು ಹೊಸ ಸುರಕ್ಷಾ ಮಾರ್ಗಸೂಚಿ ಅನುಸಾರವಾಗಿ ವಾಹನ ಉತ್ಪಾದನೆಯನ್ನು ಕೈಗೊಂಡಿದ್ದು, ಕಳೆದ ವರ್ಷ ಮೇ ಅವಧಿಯಲ್ಲಿ 13,066 ಯುನಿಟ್ ಮಾರಾಟ ಮಾಡಿತ್ತು. ಆದರೆ ಲಾಕ್‌ಡೌನ್ ಸಂಕಷ್ಟದಿಂದಾಗಿ ಹೊಸ ಮಾರಾಟದಲ್ಲಿ ಭಾರೀ ಕುಸಿತ ಕಂಡಿದ್ದು, ಮುಂಬರುವ ದಿನಗಳಲ್ಲಿ ಕಾರು ಮಾರಾಟವು ಸುಧಾರಿಸುವ ವಿಶ್ವಾಸದಲ್ಲಿದೆ.

ಲಾಕ್‌ಡೌನ್ ವಿನಾಯ್ತಿ ನಂತರ 1,639 ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಕರೋನಾ ವೈರಸ್ ತಗ್ಗಿಸಲು ಕೇಂದ್ರ ಸರ್ಕಾರವು ಸದ್ಯ 5ನೇ ಹಂತದ ಲಾಕ್‌ಡೌನ್ ಅನ್ನು ಮುಂದುವರಿಸಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಉದ್ಯಮಕ್ಕೆ ಹಲವಾರು ವಿನಾಯ್ತಿಗಳನ್ನು ಘೋಷಣೆ ಮಾಡಿದ್ದು, ಟೊಯೊಟಾ ಕಿರ್ಲೋಸ್ಕರ್ ಕಂಪನಿಯು ಕೂಡಾ ಹೊಸ ಮಾರ್ಗಸೂಚಿ ಅನುಸಾರವಾಗಿ ವಾಹನಗಳ ಉತ್ಪಾದನೆಯನ್ನು ಅಧಿಕೃತವಾಗಿ ಪುನಾರಂಭಿಸಿದೆ.

ಲಾಕ್‌ಡೌನ್ ವಿನಾಯ್ತಿ ನಂತರ 1,639 ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಲಾಕ್‌ಡೌನ್ ಅನ್ನು ಮುಂದುವರಿಸಿಕೊಂಡೆ ಎಲ್ಲಾ ವಲಯಗಳಲ್ಲೂ ಕೈಗಾರಿಕೆಗಳ ಉತ್ಪಾದನಾ ಚಟುವಟಿಕೆಗಳಿಗೆ ಷರತ್ತುಬದ್ಧ ಅವಕಾಶ ನೀಡಲಾಗಿದ್ದು, ಸೋಂಕು ಹರಡದಂತೆ ಹಲವಾರು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಲಾಕ್‌ಡೌನ್ ವಿನಾಯ್ತಿ ನಂತರ 1,639 ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಬೆಂಗಳೂರಿನ ಹೊರವಲಯದಲ್ಲಿರುವ ಬಿಡದಿ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಕಾರುಗಳ ಉತ್ಪಾದನೆ ಪುನಾರಂಭಿಸಿರುವ ಟೊಯೊಟಾ ಕಂಪನಿಯು ಶೇ.50ಕ್ಕಿಂತಲೂ ಕಡಿಮೆ ಉದ್ಯೋಗಿಗಳೊಂದಿಗೆ ಉತ್ಪಾದನಾ ಪ್ರಕ್ರಿಯೆಯನ್ನು ಕೈಗೊಳ್ಳುತ್ತಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಲಾಕ್‌ಡೌನ್ ವಿನಾಯ್ತಿ ನಂತರ 1,639 ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಕೇಂದ್ರ ಸರ್ಕಾರ ನೀಡಿರುವ ಹೊಸ ಗೈಡ್‌ಲೆನ್ಸ್ ಪ್ರಕಾರ, ಹಸಿರು ಮತ್ತು ಕಿತ್ತಳೆ ವಲಯದಲ್ಲಿರುವ ಮುನ್ಸಿಪಲ್ ಕಾರ್ಪೊರೇಶನ್ ಮಿತಿ ಹೊರಗಿನ ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದ್ದು, ಗರಿಷ್ಠ ಪ್ರಮಾಣದ ಸುರಕ್ಷಾ ಸಾಧನಗಳನ್ನು ಬಳಕೆ ಮಾಡುವುದು ಕಡ್ಡಾಯವಾಗಿದೆ.

ಲಾಕ್‌ಡೌನ್ ವಿನಾಯ್ತಿ ನಂತರ 1,639 ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಇನ್ನು ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡುತ್ತಿವೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಲಾಕ್‌ಡೌನ್ ವಿನಾಯ್ತಿ ನಂತರ 1,639 ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ

ಲಾಕ್‌ಡೌನ್ ವೇಳೆ ಆಟೋ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆ ಹೆಚ್ಚಿನ ಒತ್ತುನೀಡಿದ್ದ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ದೇಣಿಗೆ ಜೊತೆಗೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ‍್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೇಟರ್ ಉತ್ಪನ್ನಗಳನ್ನು ತಯಾರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಂಚಿಕೆ ಮಾಡಿವೆ.

More from DriveSpark

Article Published On: Tuesday, June 2, 2020, 21:29 [IST]
English summary
Toyota Registers 1,639 Units Of Sales Since Resuming Operations. Read in Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+