ಭಾರತದಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್

ಟೊಯೊಟಾ ಕಂಪನಿಯು ತನ್ನ ಐಷಾರಾಮಿ ಫೀಚರ್ಸ್‌ವುಳ್ಳ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್ ಟ್ರಕ್ ಮಾದರಿಯನ್ನು ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದ್ದು, ಹೊಸ ವಾಹನ ಮಾದರಿಯನ್ನು ಭಾರತದಲ್ಲೂ ಬಿಡುಗಡೆಯ ಸುಳಿವು ನೀಡಿದೆ.

ಭಾರತದಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್

ಇನೋವಾ ಕ್ರಿಸ್ಟಾ ಮತ್ತು ಫಾರ್ಚೂನರ್ ನಡುವೆ ಸ್ಥಾನದಲ್ಲಿರುವ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಎಸ್‌ಯುವಿ ಮಾದರಿಯು ಆಫ್-ರೋಡ್ ಕೌಶಲ್ಯ ಪ್ರದರ್ಶನದಲ್ಲಿ ಮುಂಚೂಣಿಯಲ್ಲಿದ್ದು, ಭಾರತದಲ್ಲೂ ಕೂಡಾ ಇದೀಗ ವಿವಿಧ ಮಾದರಿಯ ಲೈಫ್‌ಸ್ಪೈಲ್ ವಾಹನಗಳ ಬೇಡಿಕೆ ಹೆಚ್ಚುತ್ತಿರುವುದರಿಂದ ಟೊಯೊಟಾ ಕಂಪನಿಯು ಹೊಸ ಪಿಕ್ಅಪ್ ಮಾದರಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ಇರಾದೆಯಲ್ಲಿದೆ.

ಭಾರತದಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹಿಲುಕ್ಸ್ ಪಿಕ್ಅಪ್ ಮಾದರಿಯು ಫಾರ್ಚೂನರ್ ಮಾದರಿಯಲ್ಲಿನ ತಾಂತ್ರಿಕ ಅಂಶಗಳನ್ನು ಮತ್ತು ಇನೋನಾ ಕ್ರಿಸ್ಟಾ ಮಾದರಿಯಲ್ಲಿ ಎಂಜಿನ್, ಗೇರ್‌ಬಾಕ್ಸ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಭಾರತದಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್

ಹೀಗಾಗಿ ಇನೋವಾ ಕ್ರಿಸ್ಟಾ ಮತ್ತು ಫಾರ್ಚೂನರ್ ಕಾರುಗಳ ಮಧ್ಯದ ಸ್ಥಾನದಲ್ಲಿರುವ ಹಿಲುಕ್ಸ್ ಪಿಕ್ಅಪ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬೇಡಿಕೆ ಪಡೆದುಕೊಳ್ಳಬಹುದಾದ ಎಲ್ಲಾ ಸಾಧ್ಯತೆಗಳ ಬಗೆಗೆ ಮಾರುಕಟ್ಟೆ ಅಧ್ಯಯನ ಮಾಡಿರುವ ಟೊಯೊಟಾ ಕಂಪನಿಯು ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್ ಮಾದರಿಗೆ ಪೈಪೋಟಿಯಾಗಿ ಹೊಸ ವಾಹನವನ್ನು ಬಿಡುಗಡೆ ಮಾಡುತ್ತಿದೆ.

ಭಾರತದಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹಿಲುಕ್ಸ್ ವಾಹನ ಮಾದರಿಯು ಭಾರತದಲ್ಲಿ ಎರಡು ಮಾದರಿಯ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಭಾರತದಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್

ಮಾಹಿತಿಗಳ ಪ್ರಕಾರ, ಹೊಸ ಪಿಕ್ಅಪ್ ವಾಹನದಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 2.4-ಲೀಟರ್ ಡೀಸೆಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದ್ದು, ಕಡಿಮೆ ಎಂಜಿನ್ ವೇಗದಲ್ಲೂ ಅತಿಹೆಚ್ಚು ಟಾರ್ಕ್ ಉತ್ಪಾದನಾ ಗುಣಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಭಾರತದಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್

2.8-ಲೀಟರ್ ಡೀಸೆಲ್ ಮಾದರಿಯು 500-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಇದು ಲೋಡಿಂಗ್ ವೇಳೆಯೂ ಅತಿ ಸುಲಭವಾಗಿ ಮುನ್ನುಗ್ಗುವ ಶಕ್ತಿ ಹೊಂದುವ ಮೂಲಕ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಬಲಶಾಲಿ ವಾಹನ ಮಾದರಿಯಾಗಿದೆ.

ಭಾರತದಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್

ಜೊತೆಗೆ ಹೊಸ ಹಿಲುಕ್ಸ್ ಪಿಕ್‌ಅಪ್ ವಾಹನ ಉತ್ತಮವಾದ ಒಳಾಂಗಣದೊಂದಿಗೆ ಒಟ್ಟು 5,285-ಎಂಎಂ ಉದ್ದ ಹೊಂದಿದ್ದು, 3,085-ಎಂಎಂ ವೀಲ್ಹ್ ಬೆಸ್‌ನೊಂದಿಗೆ 4x4 ಆಲ್‌ವೀಲ್ಹ್ ಡ್ರೈವ್ ಟೆಕ್ನಾಲಜಿಯೊಂದಿಗೆ ಲೋಡಿಂಗ್ ಸಾಮಾರ್ಥ್ಯವು ಕೂಡಾ ಆಕರ್ಷಕವಾಗಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಭಾರತದಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್

ಬಿಡುಗಡೆ ಮತ್ತು ಬೆಲೆ(ಅಂದಾಜು)

ಜಾಗತಿಕ ಮಾರುಕಟ್ಟೆಯಲ್ಲಿ ವಿವಿಧ ವೆರಿಯೆಂಟ್‌ಗಳೊಂದಿಗೆ ಭಾರತೀಯ ರೂಪಾಯಿ ಲೆಕ್ಕಾಚಾರದಲ್ಲಿ ಆರಂಭಿಕವಾಗಿ ರೂ.17 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.45 ಲಕ್ಷ ಬೆಲೆಯೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯು ರೂ.18 ಲಕ್ಷದಿಂದ ರೂ.23 ಲಕ್ಷ ಬೆಲೆ ಅಂತರದಲ್ಲಿನ ವೆರಿಯೆಂಟ್‌ಗಳು ಮಾತ್ರವೇ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.

Article Published On: Tuesday, August 18, 2020, 15:12 [IST]
English summary
Toyota Considering The Hilux Pick-up Truck For The Indian Market. Read in kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+