ಟೊಯೊಟಾ ಬಿಡದಿ ಕಾರು ಉತ್ಪಾದನಾ ಘಟಕದ ಮೂವರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್

ದೇಶಾದ್ಯಂತ ಕರೋನಾ ವೈರಸ್ ಸೋಂಕಿತರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಬಿಡದಿಯಲ್ಲಿರುವ ಟೊಯೊಟಾ ಕೀರ್ಲೋಸ್ಕರ್ ಮೋಟಾರ್ಸ್ ಕಾರು ಉತ್ಪಾದನಾ ಘಟಕದಲ್ಲೂ ಮತ್ತೆ ಮೂವರು ಸಿಬ್ಬಂದಿಯಲ್ಲಿ ಸೋಂಕು ದೃಡವಾಗಿದೆ.

ಕಾರು ಉತ್ಪಾದನಾ ಘಟಕದ ಮೂವರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್

ಕೇಂದ್ರ ಸರ್ಕಾರ ಹೊಸ ಸುರಕ್ಷಾ ಮಾರ್ಗಸೂಚಿ ನಡುವೆಯೂ ವಾಹನ ಉತ್ಪಾದನಾ ಘಟಕಗಳಲ್ಲಿ ವೈರಸ್ ಪರಿಣಾಮ ಹೆಚ್ಚುತ್ತಲೇ ಇದ್ದು, ಸೋಂಕು ಭೀತಿ ಹಿನ್ನಲೆಯಲ್ಲಿ ಗರಿಷ್ಠ ಸುರಕ್ಷಾ ಕ್ರಮಗಳೊಂದಿಗೆ ವಾಹನ ಉತ್ಪಾದನೆ ಮಾಡಲಾಗುತ್ತಿದೆ. ಹೀಗಿದ್ದರೂ ಬಿಡದಿಯಲ್ಲಿರುವ ಟೊಯೊಟಾ ಕಾರು ಉತ್ಪಾದನಾ ಘಟಕದಲ್ಲಿ ಇದುವರೆಗೆ ಬರೋಬ್ಬರಿ 23 ಸಿಬ್ಬಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಬಹುತೇಕ ಸಿಬ್ಬಂದಿ ಗುಣಮುಖರಾಗಿದ್ದಾರೆ.

ಕಾರು ಉತ್ಪಾದನಾ ಘಟಕದ ಮೂವರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್

ಇದೀಗ ಮತ್ತೆ ಮೂವರು ಸಿಬ್ಬಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಪ್ರಾಥಮಿಕ ಹಂತದಲ್ಲೇ ವೈರಸ್ ಪತ್ತೆಯಾಗಿರುವುದರಿಂದ ಮುಂದಿನ ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಗುಣಮುಖರಾಗಿ ಬರುವ ವಿಶ್ವಾಸದಲ್ಲಿದ್ದಾರೆ.

ಕಾರು ಉತ್ಪಾದನಾ ಘಟಕದ ಮೂವರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್

ಕಾರು ಉತ್ಪಾದನಾ ಘಟಕದಲ್ಲಿನ ಸಿಬ್ಬಂದಿಯಲ್ಲಿ ವೈರಸ್ ಪತ್ತೆಯಾಗಿರುವ ಬಗ್ಗೆ ಟೊಯೊಟಾ ಕಂಪನಿಯೇ ಮಾಹಿತಿ ಹಂಚಿಕೊಂಡಿದ್ದು, ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿ ನೀಡಿದೆ.

ಕಾರು ಉತ್ಪಾದನಾ ಘಟಕದ ಮೂವರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್

ವೈರಸ್ ಪತ್ತೆಯಾದ ನಂತರ ನಿಯಮಗಳ ಪ್ರಕಾರ ಉತ್ಪಾದನಾ ಘಟಕವನ್ನು ಸಂಪೂರ್ಣ ಸ್ಯಾನಿಟೈಜ್ ಮಾಡಲಾಗಿದ್ದು, ವೈರಸ್ ಪತ್ತೆಯಾದ ಸಿಬ್ಬಂದಿಯ ಜೊತೆ ನೇರ ಸಂಪರ್ಕದಲ್ಲಿದ್ದ ಹಲವು ಸಿಬ್ಬಂದಿಯನ್ನ ನಿಯಮ ಅನುಸಾರವಾಗಿ ಕ್ವಾರಂಟೈನ್ ಮಾಡಲಾಗಿದೆ.

ಕಾರು ಉತ್ಪಾದನಾ ಘಟಕದ ಮೂವರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್

ವೈರಸ್ ಪತ್ತೆಯಾಗಿರುವ ಸಿಬ್ಬಂದಿ ಮತ್ತು ಕ್ವಾರಂಟೈನ್‌ನಲ್ಲಿ ಸಿಬ್ಬಂದಿಗೆ ಧೈರ್ಯ ತುಂಬಿರುವ ಟೊಯೊಟಾ ಕಂಪನಿಯು ಅವರ ಕುಟುಂಬಗಳಿಗೆ ಆರ್ಥಿಕ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿರುವಾಗಿ ಸ್ವಷ್ಟಪಡಿಸಿದ್ದು, ಸೋಂಕು ಭೀತಿ ಹಿನ್ನಲೆಯಲ್ಲಿ ರ‍್ಯಾಂಡಮ್ ಟೆಸ್ಟ್ ನಡೆಸುತ್ತಿರುವುದರಿಂದ ವೈರಸ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಗ್ಗಿಸಲಾಗಿದೆ.

ಕಾರು ಉತ್ಪಾದನಾ ಘಟಕದ ಮೂವರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್

ಇನ್ನು ಲಾಕ್‌ಡೌನ್ ಸಂಕಷ್ಟದಲ್ಲೂ ಕರೋನಾ ವೈರಸ್ ವಿರುದ್ಧ ಹೋರಾಟದಲ್ಲಿ ಕೈಜೋಡಿಸಿರುವ ಟೊಯೊಟಾ ಕಂಪನಿಯು ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಧನ ಸಹಾಯದ ಜೊತೆ ವೈದ್ಯಕೀಯ ಉಪಕರಣಗಳ ಸಹಾಯಹಸ್ತ ಚಾಚಿದ್ದು, ತ್ವರಿತ ಗತಿಯಲ್ಲಿ ವೈರಸ್ ಪತ್ತೆಗಾಗಿ ಮೊಬೈಲ್ ಮೆಡಿಕಲ್ ಯುನಿಟ್ ಅನ್ನು ದೇಣಿಯಾಗಿ ನೀಡಿದೆ.

MOST READ: ಕರೋನಾ ವೈರಸ್ ಎಫೆಕ್ಟ್: ಕಾರಿಗೂ ಬಂತು ಪೋರ್ಟಬಲ್ ಟಾಯ್ಲೆಟ್‌

ಕಾರು ಉತ್ಪಾದನಾ ಘಟಕದ ಮೂವರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಗೆ(ಐಐಎಸ್ಸಿ) ಮೊಬೈಲ್ ಮೆಡಿಕಲ್ ಯುನಿಟ್ ಅನ್ನು ದೇಣಿಯಾಗಿರುವ ನೀಡಿರುವ ಟೊಯೊಟಾ ಕಂಪನಿಯು ಟೆಸ್ಟಿಂಗ್ ಸಂಖ್ಯೆಯನ್ನು ಹೆಚ್ಚಿಸಲು ನೆರವಾಗಿದ್ದು, ತ್ವರಿತಗತಿಯಲ್ಲಿ ಟೆಸ್ಟಿಂಗ್ ಮೂಲಕ ವೈರಸ್ ಹರಡುವಿಕೆಯನ್ನು ಪರಿಣಾಮಕಾರಿ ತಗ್ಗಿಸಲು ನೆರವಾಗಿದೆ.

ಕಾರು ಉತ್ಪಾದನಾ ಘಟಕದ ಮೂವರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್

ವೈದ್ಯಕೀಯ ಅಗತ್ಯಗಳಿಗೆ ಅನುಗುಣವಾಗಿ ಫೋರ್ಸ್ ಟ್ರಾವೆಲರ್ ಅನ್ನು ಮಾಡಿಫೈಗೊಳಿಸಿರುವ ಟೊಯೊಟಾ ಕಂಪನಿಯು ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಜೋಡಣೆ ಮಾಡಿದ್ದು, ವೈರಸ್ ಹೆಚ್ಚಿರುವ ಪ್ರದೇಶಗಳಲ್ಲಿ ನಿಯೋಜನೆ ಮಾಡಲು ಅನುಕೂಲಕರವಾಗಿದೆ.

MOST READ: ಕೋವಿಡ್ 19: ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಕಾರು ಉತ್ಪಾದನಾ ಘಟಕದ ಮೂವರು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್

ಇದರೊಂದಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ತುರ್ತು ಪರಿಹಾರ ನಿಧಿಗೂ ದೇಣಿಗೆ ನೀಡಿದ್ದು, ಕರ್ನಾಟಕ ಸರ್ಕಾರಕ್ಕೆ ಪ್ರತ್ಯೇಕವಾಗಿ ರೂ.2 ಕೋಟಿ ಹಣಕಾಸಿನ ನೆರವು ನೀಡಿತ್ತು. ಜೊತೆಗೆ ತನ್ನ ಪಾಲುದಾರ ಕಂಪನಿಗಳ ಜೊತೆಗೂಡಿ ಲಾಕ್‌ಡೌನ್ ವೇಳೆ ಹಸಿದವರಿಗೆ ಊಟ ಮತ್ತು ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಗೊಳಿಸಿ ವಿತರಣೆ ಮಾಡಿದೆ.

Most Read Articles

Kannada
Read more on ಟೊಯೊಟಾ toyota
English summary
COVID-19 Pandemic: Toyota Registers Three New Positive Cases At Its Plant In Bidadi.
Story first published: Saturday, July 25, 2020, 19:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more