ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೊಯೊಟಾ ಫಾರ್ಚೂನರ್

ಟೊಯೊಟಾ ಕಂಪನಿಯು ಬಿಎಸ್-6 ಎಂಜಿನ್ ಹೊಂದಿರುವ ಹೊಸ ಫಾರ್ಚೂನರ್ ಎಸ್‍‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಬಿಎಸ್-6 ಆವೃತ್ತಿಯ ಫಾರ್ಚೂನರ್ ಬೆಲೆಯನ್ನು ಹೆಚ್ಚಿಸಿಲ್ಲ ಎಂಬುವುದು ಆಶ್ಚರ್ಯಕರ ಸಂಗತಿಯಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೊಯೊಟಾ ಫಾರ್ಚೂನರ್

ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿಯ ಟಾಪ್ ಎಂಡ್ ಪೆಟ್ರೋಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.28.18 ಲಕ್ಷಗಳಾಗಿದೆ. ಇನ್ನು ಡೀಸೆಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.34.10 ಲಕ್ಷಗಳಾಗಿದೆ. ಡೀಸೆಲ್ ಎಂಜಿನ್ ಅನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದರೂ ಬೆಲೆಯನ್ನು ಹೆಚ್ಚಿಸದೆ ಇರುವುದು ಅಚ್ಚರಿಯಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೊಯೊಟಾ ಫಾರ್ಚೂನರ್

ಹೊಸ ಟೊಯೊಟಾ ಫಾರ್ಚೂನರ್ ಎಸ್‍‍ಯುವಿಯಲ್ಲಿ ಅದೇ 2.7 ಲೀಟರ್ ಪೆಟ್ರೋಲ್ ಮತ್ತು 2.8 ಲೀಟರ್ ಡೀಸೆಲ್ ಎಂಜಿನ್‍‍ಗಳನ್ನು ಅಳವಡಿಸಿದೆ. ಹೊಸ ಟೊಯೊಟಾ ಫಾರ್ಚೂನರ್ ಎಸ್‍‍ಯುವಿಯಲ್ಲಿ ಎಂಜಿನ್‍ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸವುದರ ಹೊರತಾಗಿ ಇತರ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೊಯೊಟಾ ಫಾರ್ಚೂನರ್

ಬಿಎಸ್-6 ಫಾರ್ಚೂನರ್ ಎಸ್‍‍ಯುವಿನಲ್ಲಿ ಅಳವಡಿಸಿರುವ 2.8 ಲೀಟರಿನ 4 ಸಿಲಿಂಡರ್ ಡೀಸೆಲ್ ಎಂಜಿನ್ 174 ಬಿ‍‍ಹೆಚ್‍‍ಪಿ ಪವರ್ ಹಾಗೂ 420 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೊಯೊಟಾ ಫಾರ್ಚೂನರ್

ಇನ್ನು 2.7 ಲೀಟರಿನ 4 ಸಿಲಿಂಡರ್ ಬಿಎಸ್ 6 ಪೆಟ್ರೋಲ್ ಎಂಜಿನ್ 164 ಬಿ‍‍ಹೆಚ್‍‍ಪಿ ಪವರ್ ಹಾಗೂ 245 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೊಯೊಟಾ ಫಾರ್ಚೂನರ್

ಹೊಸ ಫಾರ್ಚೂನರ್ ಪೆಟ್ರೋಲ್ ಆವೃತ್ತಿಯಲ್ಲಿ 2 ಡಬ್ಲ್ಯೂ ಕಾನ್ಫಿಗರೇಷನ್ ನೀಡಿದರೆ, 4×4 ಕಾನ್ಫಿಗರೇಷನ್ ಸಿಸ್ಟಂ ಅನ್ನು ಡೀಸೆಲ್ ಆವೃತ್ತಿಯಲ್ಲಿ ಮಾತ್ರ ಅಳವಡಿಸಲಾಗಿದೆ. 4×4 ಕಾನ್ಫಿಗರೇಷನ್ ಸಿಸ್ಟಂ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೊಯೊಟಾ ಫಾರ್ಚೂನರ್

ಇಂಟಿರಿಯರ್ ಬಗ್ಗೆ ಹೇಳುವುದಾದರೆ ಡ್ಯಾಶ್‍‍ಬೋರ್ಡ್ ಡಾರ್ಕ್ ಬ್ರೌನ್ ಹಾಗೂ ಬೀಜ್ ಬಣ್ಣಗಳನ್ನು ಹೊಂದಿರಲಿದೆ. ಇವುಗಳ ಜೊತೆಗೆ ನ್ಯಾವಿಗೇಶನ್ ಹೊಂದಿರುವ 7 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೊಯೊಟಾ ಫಾರ್ಚೂನರ್

ಹೊಸ ಬಿಎಸ್-6 ಫಾರ್ಚೂನರ್ ಎಸ್‍‍ಯುವಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಸುರಕ್ಷತೆಗಾಗಿ ಪೆಡಲ್‍‍ಶಿಫ್ಟರ್, ಏರ್‍‍ಬ್ಯಾಗ್, ಬ್ರೇಕ್ ಅಸಿಸ್ಟ್ ಹೊಂದಿರುವ ವೆಹಿಕಲ್ ಸ್ಟಾಬಿಲಿಟಿ, ಹಿಲ್ ಅಸಿಸ್ಟ್ ಕಂಟ್ರೋಲ್, ಇಬಿಡಿ ಹೊಂದಿರುವ ಎ‍‍ಬಿ‍ಎಸ್ ನೀಡಲಾಗಿದೆ.

ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೊಯೊಟಾ ಫಾರ್ಚೂನರ್

ಇತ್ತೀಚೆಗೆ ಬಿಡುಗಡೆಯಾದ ಬಿ‍ಎಸ್-6 ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ಬೆಲೆಯನ್ನು 1.5 ಲಕ್ಷ ಹೆಚ್ಚಿಸಿದ್ದರು. ಆದರೆ ಟೊಯೊಟಾ ಫಾರ್ಚೂನರ್ ಎಸ್‍‍ಯುವಿಗೆ ಬೆಲೆಯನ್ನು ಹೆಚ್ಚಿಸಲಾಗಿಲ್ಲ. ಬಿಎಸ್-6 ಆವೃತ್ತಿಗೆ ಬೆಲೆಯನ್ನು ಹೆಚ್ಚಿಸದೇ ಇರುವುದರಿಂದ ಇನ್ನಷ್ಟು ಗ್ರಾಹಕರನ್ನು ಸೆಳೆಯಬಹುದು.

Most Read Articles

Kannada
Read more on ಟೊಯೊಟಾ toyota
English summary
BS6 Toyota Fortuner Launched. Read in Kannada.
Story first published: Wednesday, February 12, 2020, 13:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X