ಅನಾವರಣವಾಗಲಿದೆ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಟೊಯೊಟಾ ಕಂಪನಿಯು ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಫಾರ್ಚೂನರ್ ಫೇಸ್‌ಲಿಫ್ಟ್‌ ಅನ್ನು ಮುಂದಿನ ಜೂನ್ ತಿಂಗಳ 4ರಂದು ಥೈಲ್ಯಾಂಡ್‌ನಲ್ಲಿ ಅನಾವರಣಗೊಳಿಸಲಿದೆ.

ಅನಾವರಣವಾಗಲಿದೆ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಫಾರ್ಚೂನರ್ ಎಸ್‍ಯುವಿಯು ದೀರ್ಘಕಾಲದಿಂದ ಮಾರುಕಟ್ಟೆಯಲ್ಲಿ ಮಾರಾಟದಲ್ಲಿದೆ. ಫಾರ್ಚೂನರ್ ಎಸ್‍ಯುವಿಗೆ ಸರಿಸಾಟಿ ಫಾರ್ಚೂನರ್ ಮಾತ್ರ ಎಂಬಂತೆ ಇಂದಿಗೂ ಉತ್ತಮ ಬೇಡಿಕೆ ಹೊಂದಿದೆ. ಹೊಸ ಫಾರ್ಚೂನರ್ ಫೇಸ್‌ಲಿಫ್ಟ್‌ ಕಾರನ್ನು ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಇತ್ತೀಚೆಗೆ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಮೊದಲ ಬಾರಿಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಲಾಗಿತ್ತು. ಫಾರ್ಚೂನರ್ ಫೇಸ್‌ಲಿಫ್ಟ್‌ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಆನ್‌ಲೈನ್‌ನಲ್ಲಿ ಬಹಿರಂಗವಾಗಿತ್ತು.

ಅನಾವರಣವಾಗಲಿದೆ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಸ್ಪೈ ಚಿತ್ರಗಳು ಹೊಸ ಫಾರ್ಚೂನರ್ ಫೇಸ್‌ಲಿಫ್ಟ್‌ ಕಾರಿನ ಕೆಲವು ಮಾಹಿತಿಗಳು ಬಹಿರಂಗವಾಗಿದೆ. ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮಾದರಿಯಲ್ಲಿ ಕೆಲವು ಕಾಸ್ಮೆಟಿಕ್ ನವೀಕರಣಗಳನ್ನು ಮಾಡಲಾಗಿದೆ. ಇಂಟಿರಿಯರ್ ನಲ್ಲಿಯು ಕೂಡ ಕೆಲವು ನವೀಕರಣಗಳನ್ನು ಮಾಡಿರಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಮಾರಾಟವನ್ನು ಪುನಾರಂಭಿಸಿದ ಸ್ಕೋಡಾ

ಅನಾವರಣವಾಗಲಿದೆ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಇದರಲ್ಲಿ ಫಾರ್ಚೂನರ್ ಫೇಸ್‌ಲಿಫ್ಟ್‌ ಕಾರಿನ ಫ್ರಂಟ್ ಬಂಪರ್, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಸ್ಲಿಕ್ ಸೆಟ್ ಹೆಡ್ ಲ್ಯಾಂಪ್, ಹೊಸ ಬ್ಲ್ಯಾಕ್ಡ್ ಔಟ್ ಗ್ರಿಲ್ ಮತ್ತು ಸೆಂಟ್ರಲ್ ಏರ್ ಇನ್‍ ಟೆಕ್, ಜೊತೆಗೆ ಬ್ಲ್ಯಾಕ್ ಔಟ್ ಫಾಕ್ಸ್ ಸ್ಕಿಡ್ ಪ್ಲೇಟ್‌ಗಳನ್ನು ಒಳಗೊಂಡಿದೆ.

ಅನಾವರಣವಾಗಲಿದೆ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಟೊಯೊಟಾ ಫಾರ್ಚೂನರ್ ಮಾದರಿಯ ಎಂಜಿನ್ ಆಯ್ಜೆಯನ್ನು ಈ ಕಾರು ಹೊಂದಿರಬಹುದು. ಈ ಎಸ್‍ಯುವಿಯ ಎಂಜಿನ್ ಬಗ್ಗೆ ಯಾವುದೇ ಮಾಹಿತಿಯು ಬಹಿರಂಗವಾಗಿಲ್ಲ.

MOST READ: ಸಿಎನ್‍ಜಿ ಆವೃತ್ತಿಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ

ಅನಾವರಣವಾಗಲಿದೆ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿಯಲ್ಲಿ 2.7 ಲೀಟರ್ ಪೆಟ್ರೋಲ್ ಮತ್ತು 2.8 ಲೀಟರ್ ಡೀಸೆಲ್ ಎಂಜಿನ್‍‍ಗಳನ್ನು ಅಳವಡಿಸಿದೆ. ಬಿಎಸ್-6 ಫಾರ್ಚೂನರ್ ಎಸ್‍‍ಯುವಿನಲ್ಲಿ ಅಳವಡಿಸಿರುವ 2.8 ಲೀಟರಿನ 4 ಸಿಲಿಂಡರ್ ಡೀಸೆಲ್ ಎಂಜಿನ್ 174 ಬಿ‍‍ಹೆಚ್‍‍ಪಿ ಪವರ್ ಹಾಗೂ 420 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಅನಾವರಣವಾಗಲಿದೆ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಇನ್ನು 2.7 ಲೀಟರಿನ 4 ಸಿಲಿಂಡರ್ ಬಿಎಸ್ 6 ಪೆಟ್ರೋಲ್ ಎಂಜಿನ್ 164 ಬಿ‍‍ಹೆಚ್‍‍ಪಿ ಪವರ್ ಹಾಗೂ 245 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಬಿಎಂಡಬ್ಲ್ಯೂ 5-ಸೀರೀಸ್ ಫೇಸ್‌ಲಿಫ್ಟ್ ಕಾರು

ಅನಾವರಣವಾಗಲಿದೆ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಫಾರ್ಚೂನರ್ ಪೆಟ್ರೋಲ್ ಆವೃತ್ತಿಯಲ್ಲಿ 2 ಡಬ್ಲ್ಯೂ ಕಾನ್ಫಿಗರೇಷನ್ ನೀಡಿದರೆ, 4×4 ಕಾನ್ಫಿಗರೇಷನ್ ಸಿಸ್ಟಂ ಅನ್ನು ಡೀಸೆಲ್ ಆವೃತ್ತಿಯಲ್ಲಿ ಮಾತ್ರ ಅಳವಡಿಸಲಾಗಿದೆ. 4×4 ಕಾನ್ಫಿಗರೇಷನ್ ಸಿಸ್ಟಂ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಅನಾವರಣವಾಗಲಿದೆ ಬಹುನಿರೀಕ್ಷಿತ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿ

ಟೊಯೊಟಾ ಕಂಪನಿಯು ಹೊಸ ಫಾರ್ಚೂನರ್ ಫೇಸ್‌ಲಿಫ್ಟ್‌ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

Most Read Articles

Kannada
Read more on ಟೊಯೊಟಾ toyota
English summary
2020 Toyota Fortuner Facelift To Debut Next Week. Read In Kannada.
Story first published: Friday, May 29, 2020, 13:24 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X