Just In
- 6 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 8 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 9 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 10 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯ ತಾಂತ್ರಿಕ ಮಾಹಿತಿ ಬಹಿರಂಗ
ಟೊಯೊಟಾ ಕಂಪನಿಯು ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಫಾರ್ಚೂನರ್ ಫೇಸ್ಲಿಫ್ಟ್ ಅನ್ನು ಇದೇ ತಿಂಗಳ 4ರಂದು ಥೈಲ್ಯಾಂಡ್ನಲ್ಲಿ ಅನಾವರಣಗೊಳಿಸಲಿದೆ.
ಫಾರ್ಚೂನರ್ ಎಸ್ಯುವಿಯು ದೀರ್ಘಕಾಲದಿಂದ ಮಾರುಕಟ್ಟೆಯಲ್ಲಿ ಮಾರಾಟದಲ್ಲಿದೆ. ಫಾರ್ಚೂನರ್ ಎಸ್ಯುವಿಗೆ ಸರಿಸಾಟಿ ಫಾರ್ಚೂನರ್ ಮಾತ್ರ ಎಂಬಂತೆ ಇಂದಿಗೂ ಉತ್ತಮ ಬೇಡಿಕೆ ಹೊಂದಿದೆ. ಹೊಸ ಫಾರ್ಚೂನರ್ ಫೇಸ್ಲಿಫ್ಟ್ ಕಾರನ್ನು ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಇತ್ತೀಚೆಗೆ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಮೊದಲ ಬಾರಿಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಲಾಗಿತ್ತು. ಫಾರ್ಚೂನರ್ ಫೇಸ್ಲಿಫ್ಟ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಆನ್ಲೈನ್ನಲ್ಲಿ ಬಹಿರಂಗವಾಗಿತ್ತು.
ಸ್ಪೈ ಚಿತ್ರಗಳು ಹೊಸ ಫಾರ್ಚೂನರ್ ಫೇಸ್ಲಿಫ್ಟ್ ಕಾರಿನ ಕೆಲವು ಮಾಹಿತಿಗಳು ಬಹಿರಂಗವಾಗಿದೆ. ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಮಾದರಿಯಲ್ಲಿ ಕೆಲವು ಕಾಸ್ಮೆಟಿಕ್ ನವೀಕರಣಗಳನ್ನು ಮಾಡಲಾಗಿದೆ. ಇಂಟಿರಿಯರ್ ನಲ್ಲಿಯು ಕೂಡ ಕೆಲವು ನವೀಕರಣಗಳನ್ನು ಮಾಡಿರಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: ಹೊಸ ಟರ್ಬೋ ಪೆಟ್ರೋಲ್ ಎಂಜಿನ್ನೊಂದಿಗೆ ಅನಾವರಣವಾಗಲಿದೆ ಜೀಪ್ ಕಂಪಾಸ್ ಫೇಸ್ಲಿಫ್ಟ್
ಇದರಲ್ಲಿ ಫಾರ್ಚೂನರ್ ಫೇಸ್ಲಿಫ್ಟ್ ಕಾರಿನ ಫ್ರಂಟ್ ಬಂಪರ್, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಸ್ಲಿಕ್ ಸೆಟ್ ಹೆಡ್ ಲ್ಯಾಂಪ್, ಹೊಸ ಬ್ಲ್ಯಾಕ್ಡ್ ಔಟ್ ಗ್ರಿಲ್ ಮತ್ತು ಸೆಂಟ್ರಲ್ ಏರ್ ಇನ್ ಟೆಕ್, ಜೊತೆಗೆ ಬ್ಲ್ಯಾಕ್ ಔಟ್ ಫಾಕ್ಸ್ ಸ್ಕಿಡ್ ಪ್ಲೇಟ್ಗಳನ್ನು ಒಳಗೊಂಡಿದೆ.
ಆನ್ಲೈನ್ ನಲ್ಲಿ ಬಹಿರಂಗವಾಗಿರುವ ಮಾಹಿತಿಯ ಪ್ರಕಾರ ಹೊಸ ಫಾರ್ಚೂನರ್ ಫೇಸ್ಲಿಫ್ಟ್ ನಲ್ಲಿ 2.8-ಲೀಟರ್ ಟರ್ಬೋಚಾರ್ಜ್ಡ್ ಐಜಿಡಿ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 204 ಬಿಹೆಚ್ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಹೊಸ ನಿವಸ್ ಎಸ್ಯುವಿಯನ್ನು ಅನಾವರಣಗೊಳಿಸಿದ ಫೋಕ್ಸ್ವ್ಯಾಗನ್
ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್ಯುವಿಯಲ್ಲಿ 2.7 ಲೀಟರ್ ಪೆಟ್ರೋಲ್ ಮತ್ತು 2.8 ಲೀಟರ್ ಡೀಸೆಲ್ ಎಂಜಿನ್ಗಳನ್ನು ಅಳವಡಿಸಿದೆ. ಬಿಎಸ್-6 ಫಾರ್ಚೂನರ್ ಎಸ್ಯುವಿನಲ್ಲಿ ಅಳವಡಿಸಿರುವ 2.8 ಲೀಟರಿನ 4 ಸಿಲಿಂಡರ್ ಡೀಸೆಲ್ ಎಂಜಿನ್ 174 ಬಿಹೆಚ್ಪಿ ಪವರ್ ಹಾಗೂ 420 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದೆ.
ಇನ್ನು 2.7 ಲೀಟರಿನ 4 ಸಿಲಿಂಡರ್ ಬಿಎಸ್ 6 ಪೆಟ್ರೋಲ್ ಎಂಜಿನ್ 164 ಬಿಹೆಚ್ಪಿ ಪವರ್ ಹಾಗೂ 245 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ
ಫಾರ್ಚೂನರ್ ಪೆಟ್ರೋಲ್ ಆವೃತ್ತಿಯಲ್ಲಿ 2 ಡಬ್ಲ್ಯೂ ಕಾನ್ಫಿಗರೇಷನ್ ನೀಡಿದರೆ, 4×4 ಕಾನ್ಫಿಗರೇಷನ್ ಸಿಸ್ಟಂ ಅನ್ನು ಡೀಸೆಲ್ ಆವೃತ್ತಿಯಲ್ಲಿ ಮಾತ್ರ ಅಳವಡಿಸಲಾಗಿದೆ. 4×4 ಕಾನ್ಫಿಗರೇಷನ್ ಸಿಸ್ಟಂ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.
ಟೊಯೊಟಾ ಕಂಪನಿಯು ಹೊಸ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.