ಬಿಡುಗಡೆಯಾಗಲಿದೆ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್
ಟೊಯೊಟಾ ಕಂಪನಿಯು ಫಾರ್ಚೂನರ್ ಫೇಸ್‌ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ಕಾರನ್ನು ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ದೀಪಾವಳಿ ಹಬ್ಬದ ಅವಧಿಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಇತ್ತೀಚೆಗೆ ಮೊದಲ ಬಾರಿಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಲಾಗಿತ್ತು. ಸ್ಪಾಟ್ ಟೆಸ್ಟ್ ನಲ್ಲಿ ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ಕಾರಿನ ಕೆಲವು ಮಾಹಿತಿಗಳು ಬಹಿರಂಗವಾಗಿದೆ. ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮಾದರಿಯಲ್ಲಿ ಕೆಲವು ಕಾಸ್ಮೆಟಿಕ್ ನವೀಕರಣಗಳನ್ನು ಮಾಡಲಾಗಿದೆ. ಇಂಟಿರಿಯರ್ ನಲ್ಲಿಯು ಕೂಡ ಕೆಲವು ನವೀಕರಣಗಳನ್ನು ಮಾಡಿರಬಹುದು ಎಂದು ನಿರೀಕ್ಷಿಸುತ್ತೇವೆ.

ಇದರಲ್ಲಿ ಫಾರ್ಚೂನರ್ ಫೇಸ್‌ಲಿಫ್ಟ್ ಕಾರಿನ ಫ್ರಂಟ್ ಬಂಪರ್, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಸ್ಲಿಕ್ ಸೆಟ್ ಹೆಡ್ ಲ್ಯಾಂಪ್, ಹೊಸ ಬ್ಲ್ಯಾಕ್ಡ್ ಔಟ್ ಗ್ರಿಲ್ ಮತ್ತು ಸೆಂಟ್ರಲ್ ಏರ್ ಇನ್ ಟೆಕ್, ಜೊತೆಗೆ ಬ್ಲ್ಯಾಕ್ ಔಟ್ ಫಾಕ್ಸ್ ಸ್ಕಿಡ್ ಪ್ಲೇಟ್‌ಗಳನ್ನು ಒಳಗೊಂಡಿದೆ.
MOST READ: ಆಕರ್ಷಕ ವಿನ್ಯಾಸದಲ್ಲಿ ಅನಾವರಣವಾಯ್ತು ಟೊಯೊಟಾ ಯಾರೀಸ್ ಕ್ರಾಸ್

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಟೊಯೊಟಾ ಫಾರ್ಚೂನರ್ ಮಾದರಿಯ ಎಂಜಿನ್ ಆಯ್ಜೆಯನ್ನು ಈ ಕಾರು ಹೊಂದಿರಬಹುದು. ಈ ಕಾರಿನ ಎಂಜಿನ್ ಬಗ್ಗೆ ಯಾವುದೇ ಮಾಹಿತಿಯು ಬಹಿರಂಗವಾಗಿಲ್ಲ.

ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍ಯುವಿಯಲ್ಲಿ 2.7 ಲೀಟರ್ ಪೆಟ್ರೋಲ್ ಮತ್ತು 2.8 ಲೀಟರ್ ಡೀಸೆಲ್ ಎಂಜಿನ್‍ಗಳನ್ನು ಅಳವಡಿಸಿದೆ. ಬಿಎಸ್-6 ಫಾರ್ಚೂನರ್ ಎಸ್‍ಯುವಿನಲ್ಲಿ ಅಳವಡಿಸಿರುವ 2.8 ಲೀಟರಿನ 4 ಸಿಲಿಂಡರ್ ಡೀಸೆಲ್ ಎಂಜಿನ್ 174 ಬಿಹೆಚ್‍ಪಿ ಪವರ್ ಹಾಗೂ 420 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಅನಾವರಣವಾಯ್ತು ಸ್ಕೋಡಾ ಕೊಡಿಯಾಕ್ ಆರ್‍ಎಸ್ ಚಾಲೆಂಜ್ ಎಸ್‍ಯುವಿ

ಇನ್ನು 2.7 ಲೀಟರಿನ 4 ಸಿಲಿಂಡರ್ ಬಿಎಸ್ 6 ಪೆಟ್ರೋಲ್ ಎಂಜಿನ್ 164 ಬಿಹೆಚ್‍ಪಿ ಪವರ್ ಹಾಗೂ 245 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಫಾರ್ಚೂನರ್ ಪೆಟ್ರೋಲ್ ಆವೃತ್ತಿಯಲ್ಲಿ 2 ಡಬ್ಲ್ಯೂ ಕಾನ್ಫಿಗರೇಷನ್ ನೀಡಿದರೆ, 4×4 ಕಾನ್ಫಿಗರೇಷನ್ ಸಿಸ್ಟಂ ಅನ್ನು ಡೀಸೆಲ್ ಆವೃತ್ತಿಯಲ್ಲಿ ಮಾತ್ರ ಅಳವಡಿಸಲಾಗಿದೆ. 4×4 ಕಾನ್ಫಿಗರೇಷನ್ ಸಿಸ್ಟಂ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.
MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಬಿಎಸ್-6 ಫಾರ್ಚೂನರ್ ಎಸ್‍ಯುವಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಸುರಕ್ಷತೆಗಾಗಿ ಪೆಡಲ್‍ಶಿಫ್ಟರ್, ಏರ್‍ಬ್ಯಾಗ್, ಬ್ರೇಕ್ ಅಸಿಸ್ಟ್ ಹೊಂದಿರುವ ವೆಹಿಕಲ್ ಸ್ಟಾಬಿಲಿಟಿ, ಹಿಲ್ ಅಸಿಸ್ಟ್ ಕಂಟ್ರೋಲ್, ಇಬಿಡಿ ಹೊಂದಿರುವ ಎಬಿಎಸ್ ನೀಡಲಾಗಿದೆ.

ಇದರೊಂದಿಗೆ ಟೊಯೊಟಾ ಕಂಪನಿಯು ಫಾರ್ಚೂನರ್ ಮಾದರಿಯ ಹೊಸ ಎಪಿಕ್ ಹಾಗೂ ಎಪಿಕ್ ಬ್ಲ್ಯಾಕ್ ಆವೃತ್ತಿ ಕಾರುಗಳನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.


Click it and Unblock the Notifications