Just In
- 17 min ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- 1 hr ago ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- 1 hr ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- 2 hrs ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
Don't Miss!
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗೆ ಸಜ್ಜಾಗುತ್ತಿದೆ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿ
ಟೊಯೊಟಾ ಕಂಪನಿಯು ತನ್ನ ಬಹುನಿರೀಕ್ಷಿತ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯನ್ನು ಇತ್ತೀಚೆಗೆ ಥೈಲ್ಯಾಂಡ್ನಲ್ಲಿ ಪರಿಚಯಿಸಿತು. ಟೊಯೊಟಾ ಕಂಪನಿಯ ಎಸ್ಯುವಿಗಳ ಸರಣಿಯಲ್ಲಿ ಫಾರ್ಚೂನರ್ ಜನಪ್ರಿಯ ಮಾದರಿಯಾಗಿದೆ.
ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ತನ್ನ ಉತ್ತಮ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ. ವರದಿ ಪ್ರಕಾರ, ಈ ಎಸ್ಯುವಿಯಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅಳವಡಿಸಬಹುದು. ಈ ಎಂಜಿನ್ 201 ಬಿಹೆಚ್ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ನೀಡುತ್ತದೆ. ಹೊಸ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯು ಮುಂದಿನ ವರ್ಷ ಬಿಡುಗಡೆಯಾಗುವ ಸಾಧ್ಯತೆಗಳಿದೆ.
ಈ ಹೊಸ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯು ಭಾರತದಲ್ಲಿ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸಿದೆ. ಇನ್ನು ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಎಸ್ಯುವಿಯು ಮುಂಭಾಗ ಹೊಸ ವಿನ್ಯಾಸವನ್ನು ಹೊಂದಿದೆ. ಡೇ ಟೈಮ್ ರನ್ನಿಂಗ್ ಲೈಟ್ ಹೊಂದಿರುವ ಮರುವಿನ್ಯಾಸಗೊಳಿಸಲಾದ ಎಲ್ಇಡಿ ಹೆಡ್ಲೈಟ್, ಮೆಶ್ ಮಾದರಿಯ ದೊಡ್ಡದಾದ ಗ್ರಿಲ್ 18 ಇಂಚಿನ ಅಲಾಯ್ ವ್ಹೀಲ್ ಅಳವಡಿಸಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಈ ಹೊಸ ಎಸ್ಯುವಿಯ ಹಿಂಭಾಗದಲ್ಲಿ ಸ್ಲಿಮ್ಮರ್-ಕಾಣುವ ಎಲ್ಇಡಿ ಟೈಲ್-ಲೈಟ್ ಗಳನ್ನು ಅಳವಡಿಸಲಾಗಿದೆ.ಇನ್ನು ಸ್ಪ್ಲಿಟ್ ಗ್ರಿಲ್ನಲ್ಲಿ ಪ್ಯಾಕ್, ಎಲ್ಇಡಿ ಟರ್ನ್ ಇಂಡೀಕೆಟರ್ ಒಳಗೊಂಡಿರುವ ವಿಭಿನ್ನವಾದ ಬಂಪರ್ ಅನ್ನು ಹೊಂದಿದೆ.
ಇದರೊಂದಿಗೆ ಎಲ್ಇಡಿ ಡಿಆರ್ಎಲ್ಗಳಿಗೆ ವಿಶಿಷ್ಟ ಮಾದರಿಯನ್ನು ಹೊಂದಿರುವ ಡ್ಯುಯಲ್ ಎಲ್ಇಡಿ ಪ್ರೊಜೆಕ್ಟರ್ ಹೆಡ್ಲೈಟ್ಗಳು, ಕ್ರೋಮ್ ಅಪ್ ಫ್ರಂಟ್ ಅನ್ನು ಬದಲಿಸುವ ಗ್ಲೋಸ್ ಬ್ಲ್ಯಾಕ್ ಫಿನಿಶ್, 20 ಇಂಚಿನ ಅಲಾಯ್ ವ್ಹೀಲ್ಸ್, ಡ್ಯುಯಲ್ ಟೋನ್ ಬಣ್ಣದ ಆಯ್ಕೆಗಳು ಮತ್ತು ಹಿಂದಿನ ಬಂಪರ್ ಬೂಟ್ ಲೀಡ್ ನಲ್ಲಿ ಸಂಯೋಜಿಸಲ್ಪಟ್ಟಿವೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಇಂಟಿರಿಯರ್ ಬಗ್ಗೆ ಹೇಳುದಾದರೆ, ಹಿಂದಿನ ಮಾದರಿಯ ವಿನ್ಯಾಸವನ್ನು ಬದಲಾಯಿಸಲಾಗಿದೆ. ಆದರೆ ಒಂದು ಪ್ರಮುಖ ವ್ಯತ್ಯಾಸವೆಂದರೆ ಆಪಲ್ ಕಾರ್ ಪ್ಲೇ ಹೊಂದಾಣಿಕೆಯೊಂದಿಗೆ ಬರುವ ದೊಡ್ಡದಾದ, 8.0-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಸದಾಗಿ ಅಳವಡಿಸಲಿದೆ.
ಇದರೊಂದಿಗೆ ಸ್ವಲ್ಪ ನವೀಕರಿಸಿದ ಇನ್ಸ್ಟ್ರುಮೆಂಟ್ ಕ್ಲಸ್ಟರ್, 8-ವೇ ಪವರ್-ಹೊಂದಾಣಿಕೆ ಮಾಡುವ ಡ್ರೈವರ್ ಸೀಟ್, ಸಹ-ಚಾಲಕರ ಸೀಟುಗಳು ಮತ್ತು ವೈರ್ಲೆಸ್ ಸ್ಮಾರ್ಟ್ಫೋನ್ ಚಾರ್ಜಿಂಗ್ ಸಹ ಒಳಗೊಂಡಿದೆ.
MOST READ: ಗ್ಲೋಬಲ್ ಎನ್ಸಿಎಪಿಯ ಸುರಕ್ಷತಾ ಟೆಸ್ಟ್ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು
ಇನ್ನು ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ ಮತ್ತು 360 ಡಿಗ್ರಿ ಕ್ಯಾಮೆರಾ. 7 ಏರ್ಬ್ಯಾಗ್ಗಳು ಮತ್ತು ಸಾಮಾನ್ಯ ಸುರಕ್ಷತಾ ಫೀಚರ್ಗಳ ಜೊತೆಗೆ 'ಟೊಯೋಟಾ ಸೇಫ್ಟಿ ಸೆನ್ಸ್' ಅನ್ನು ಸಹ ಹೊಂದಿದೆ.
ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್ ತನ್ನ ಉತ್ತಮ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ.