ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿ

ಟೊಯೊಟಾ ಕಂಪನಿಯು ಫಾರ್ಚೂನರ್ ಎಸ್‍‍ಯುವಿಯನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಬಿಎಸ್-6 ಫಾರ್ಚೂನರ್ ಎಸ್‍‍ಯುವಿಯ ಎಲ್ಲಾ ರೂಪಾಂತರಗಳ ಬೆಲೆಯನ್ನು ಹೆಚ್ಚಿಸಲಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿ

ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿಯ ಬೇಸ್ ರೂಪಾಂತರವನ್ನು ರೂ.28.18 ಬೆಲೆಗಳಲ್ಲಿ ಬಿಡುಗಡೆಗೊಳಿಸಿದ್ದರೆ, ಟಾಪ್ ಎಂಡ್ ಪೆಟ್ರೋಲ್ ಆವೃತ್ತಿಯ ರೂ.28.18 ಲಕ್ಷಗಳಾಗಿದೆ. ಇನ್ನು ಡೀಸೆಲ್ ಆವೃತ್ತಿಯ ಬೆಲೆಯು ರೂ.34.10 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ. ಇದೀಗ ಈ ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿಯ ಎಲ್ಲಾ ಬೆಲೆಗಳನ್ನು ರೂ.48,000 ಗಳವರೆಗೆ ಹೆಚ್ಚುಸಲಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿ

ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿಯಲ್ಲಿ ಅದೇ 2.7 ಲೀಟರ್ ಪೆಟ್ರೋಲ್ ಮತ್ತು 2.8 ಲೀಟರ್ ಡೀಸೆಲ್ ಎಂಜಿನ್‍‍ಗಳನ್ನು ಅಳವಡಿಸಿದೆ.ಈ ಟೊಯೊಟಾ ಫಾರ್ಚೂನರ್ ಎಸ್‍‍ಯುವಿಯಲ್ಲಿ ಎಂಜಿನ್‍ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸವುದರ ಹೊರತಾಗಿ ಇತರ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿ

ಬಿಎಸ್-6 ಫಾರ್ಚೂನರ್ ಎಸ್‍‍ಯುವಿನಲ್ಲಿ ಅಳವಡಿಸಿರುವ 2.8 ಲೀಟರಿನ 4 ಸಿಲಿಂಡರ್ ಡೀಸೆಲ್ ಎಂಜಿನ್ 174 ಬಿ‍‍ಹೆಚ್‍‍ಪಿ ಪವರ್ ಹಾಗೂ 420 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿ

ಇನ್ನು 2.7 ಲೀಟರಿನ 4 ಸಿಲಿಂಡರ್ ಬಿಎಸ್ 6 ಪೆಟ್ರೋಲ್ ಎಂಜಿನ್ 164 ಬಿ‍‍ಹೆಚ್‍‍ಪಿ ಪವರ್ ಹಾಗೂ 245 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿ

ಫಾರ್ಚೂನರ್ ಪೆಟ್ರೋಲ್ ಆವೃತ್ತಿಯಲ್ಲಿ 2 ಡಬ್ಲ್ಯೂ ಕಾನ್ಫಿಗರೇಷನ್ ನೀಡಿದರೆ, 4×4 ಕಾನ್ಫಿಗರೇಷನ್ ಸಿಸ್ಟಂ ಅನ್ನು ಡೀಸೆಲ್ ಆವೃತ್ತಿಯಲ್ಲಿ ಮಾತ್ರ ಅಳವಡಿಸಲಾಗಿದೆ. 4×4 ಕಾನ್ಫಿಗರೇಷನ್ ಸಿಸ್ಟಂ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿ

ಈ ಎಸ್‍ಯುವಿಯ ಇಂಟಿರಿಯರ್ ಬಗ್ಗೆ ಹೇಳುವುದಾದರೆ ಡ್ಯಾಶ್‍‍ಬೋರ್ಡ್ ಡಾರ್ಕ್ ಬ್ರೌನ್ ಹಾಗೂ ಬೀಜ್ ಬಣ್ಣಗಳನ್ನು ಹೊಂದಿರಲಿದೆ. ಇವುಗಳ ಜೊತೆಗೆ ನ್ಯಾವಿಗೇಶನ್ ಹೊಂದಿರುವ 7 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿ

ಬಿಎಸ್-6 ಫಾರ್ಚೂನರ್ ಎಸ್‍‍ಯುವಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಸುರಕ್ಷತೆಗಾಗಿ ಪೆಡಲ್‍‍ಶಿಫ್ಟರ್, ಏರ್‍‍ಬ್ಯಾಗ್, ಬ್ರೇಕ್ ಅಸಿಸ್ಟ್ ಹೊಂದಿರುವ ವೆಹಿಕಲ್ ಸ್ಟಾಬಿಲಿಟಿ, ಹಿಲ್ ಅಸಿಸ್ಟ್ ಕಂಟ್ರೋಲ್, ಇಬಿಡಿ ಹೊಂದಿರುವ ಎ‍‍ಬಿ‍ಎಸ್ ನೀಡಲಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಟೊಯೊಟಾ ಫಾರ್ಚೂನರ್ ಎಸ್‍‍ಯುವಿ

ಟೊಯೊಟಾ ಫಾರ್ಚೂನರ್ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಜನಪ್ರಿಯ ಎಸ್‍ಯುವಿಯ ಬೆಲೆಯನ್ನು ಸುಮಾರು ರೂ.48,000 ಗಳವರೆಗೆ ಹೆಚ್ಚಿಸಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಈಜನಪ್ರಿಯ ಎಸ್‍ಯುವಿಯ ಮಾರಾಟದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

Toyota Fortuner Price Increase Announced Across Variants. Read In Kannada.

Article Published On: Wednesday, June 3, 2020, 10:34 [IST]
English summary
Toyota Fortuner Price Increase Announced Across Variants. Read In Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+