ಸ್ಥಗಿತವಾಯ್ತು ಟೊಯೊಟಾ ಫಾರ್ಚೂನರ್ ಟಿಆರ್‌ಡಿ ಲಿಮಿಟೆಡ್ ಎಡಿಷನ್
ಜಪಾನ್ ಮೂಲದ ಟೊಯೊಟಾ ಕಂಪನಿಯು ತನ್ನ ಫಾರ್ಚೂನರ್‌ನ ಟಿಆರ್‌ಡಿ ಲಿಮಿಟೆಡ್ ಎಡಿಷನ್ ಅನ್ನು ಸ್ಥಗಿತಗೊಳಿಸಿದೆ. ಈ ಟೊಯೊಟಾ ಫಾರ್ಚೂನರ್ ಟಿಆರ್‌ಡಿ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.34.98 ಲಕ್ಷದಿಂದ ರೂ.36.98 ಲಕ್ಷಗಳಾಗಿದೆ.

ಟೊಯೊಟಾ ಫಾರ್ಚೂನರ್ ಟಿಆರ್‌ಡಿ ಲಿಮಿಟೆಡ್ ಎಡಿಷನ್ ಸ್ಟ್ಯಾಂಡರ್ಡ್ ಮಾದರಿಗಿಂತ ರೂ,2.30 ಲಕ್ಷ ದುಬಾರಿಯಾಗಿದೆ. ಈ ಫಾರ್ಚೂನರ್ ಟಿಆರ್‌ಡಿ ಲಿಮಿಟೆಡ್ ಎಡಿಷನ್ ಟೊಯೊಟಾ ಕಂಪನಿಯು ಸ್ಥಗಿತಗೊಳಿಸಲಾಗಿದೆ. ಸ್ಟ್ಯಾಂಡರ್ಡ್ ಮಾದರಿಗೆ ಹೋಲಿಸಿದರೆ ಫಾರ್ಚೂನರ್ ಟಿಆರ್‌ಡಿ ಲಿಮಿಟೆಡ್ ಎಡಿಷನ್ ನಲ್ಲಿ ಹಲವಾರು ಕಾಸ್ಮೆಟಿಕ್ ಬದಲಾವಣೆಗಳನ್ನು ಹೊಂದಿದೆ. ಫಾರ್ಚೂನರ್ ಟಿಆರ್‌ಡಿ ಲಿಮಿಟೆಡ್ ಎಡಿಷನ್ ನಲ್ಲಿ ಟ್ವೀಕ್ಡ್ ಗ್ರಿಲ್. ಬ್ಲ್ಯಾಕ್ ಅಲಾಯ್ ವ್ಹೀಲ್ ಮತ್ತು ಬ್ಲ್ಯಾಕ್ ರೂಫ್ ಅನ್ನು ಒಳಗೊಂಡಿದೆ.

ಫಾರ್ಚೂನರ್‌ನ ಟಿಆರ್‌ಡಿ ಲಿಮಿಟೆಡ್ ಎಡಿಷನ್ ಒಳಭಾಗದಲ್ಲಿ ರೆಡ್-ಬ್ಲ್ಯಾಕ್ ಬಣ್ಣದಿಂದ ಕೂಡಿದೆ. ಫಾರ್ಚೂನರ್‌ನ ಟಿಆರ್‌ಡಿ ಎಸ್‍ಯುವಿಯಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅನ್ನ್ ಹೊಂದಿತ್ತು. ಈ ಎಂಜಿನ್ 177 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸಲಾಗುತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಇದೀಗ ಟೊಯೊಟಾ ಕಂಪನಿಯು ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗದೆಗೊಳಿಸುವುದರಿಂದ ಟಿಆರ್‌ಡಿ ಎಡಿಷನ್ ಅನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಟಿಆರ್‌ಡಿ ಎಡಿಷನ್ ಬೆಲೆಯಲ್ಲಿ ದುಬಾರಿಯಾಗಿತ್ತು.

ಟೊಯೊಟಾ ಕಂಪನಿಯು ತನ್ನ ಬಹುನಿರೀಕ್ಷಿತ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಟೊಯೊಟಾ ಕಂಪನಿಯ ಎಸ್‍ಯುವಿಗಳ ಸರಣಿಯಲ್ಲಿ ಫಾರ್ಚೂನರ್ ಜನಪ್ರಿಯ ಮಾದರಿಯಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತದಲ್ಲಿ ಇತ್ತೀಚೆಗೆ ಸ್ಪಾಟ್ ಟೆಸ್ಟ್ ನಡೆಸಿದೆ. ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ ಮತ್ತು 360 ಡಿಗ್ರಿ ಕ್ಯಾಮೆರಾ. 7 ಏರ್‌ಬ್ಯಾಗ್‌ಗಳು ಮತ್ತು ಸಾಮಾನ್ಯ ಸುರಕ್ಷತಾ ಫೀಚರ್‌ಗಳ ಜೊತೆಗೆ 'ಟೊಯೋಟಾ ಸೇಫ್ಟಿ ಸೆನ್ಸ್' ಅನ್ನು ಸಹ ಹೊಂದಿದೆ.

ಇತ್ತೀಚಿನ ವರದಿಯ ಪ್ರಕಾರ, ಆಯ್ದ ಟೊಯೊಟಾ ಡೀಲರ್ ಗಳು ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಗಾಗಿ ಅನಧಿಕೃತವಾಗಿ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ವರದಿ ಪ್ರಕಾರ, ಈ ಎಸ್‍ಯುವಿಯಲ್ಲಿ 2.8-ಲೀಟರ್ ಡೀಸೆಲ್ ಎಂಜಿನ್ ಅಳವಡಿಸಬಹುದು. ಈ ಎಂಜಿನ್ 201 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ನೀಡುತ್ತದೆ. ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ.

ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಈ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ತನ್ನ ಉತ್ತಮ ಸಾಮರ್ಥ್ಯದಿಂದ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ.


Click it and Unblock the Notifications