ಬಿಎಸ್-6 ಎಂಜಿನ್ ಪ್ರೇರಿತ ಗ್ಲಾಂಝಾ ಮತ್ತು ಯಾರಿಸ್ ಬೆಲೆ ಹೆಚ್ಚಿಸಿದ ಟೊಯೊಟಾ
ಟೊಯೊಟಾ ಕಂಪನಿಯು ತನ್ನ ಬಹುತೇಕ ಕಾರು ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡಿದ್ದು, ಬಿಎಸ್-6 ಎಂಜಿನ್ ಮಾದರಿಗಳ ಬಿಡುಗಡೆಯ ನಂತರ ಇದು ಎರಡನೇ ಬಾರಿಗೆ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಜೊತೆಗೆ ಹೈಬ್ರಿಡ್ ಕಾರು ಮಾದರಿಗಳ ಬೆಲೆಯಲ್ಲೂ ಹೆಚ್ಚಳ ಮಾಡಲಾಗಿದ್ದು, ಟೊಯೊಟಾ ನಿರ್ಮಾಣದ ಗ್ಲಾಂಝಾ, ಯಾರಿಸ್, ಇನೋವಾ ಕ್ರಿಸ್ಟಾ, ಕ್ಯಾಮ್ರಿ ಮತ್ತು ವೆಲ್‌ಫೈರ್ ಮಾದರಿಯು ಬೆಲೆ ಹೆಚ್ಚಳ ಪಡೆದುಕೊಂಡಿವೆ. ಬಿಎಸ್-6 ಎಂಜಿನ್ ಜೋಡಣೆಯ ನಂತರ ಇದು ಎರಡನೇ ಬಾರಿಗೆ ಬೆಲೆ ಏರಿಕೆಯಾಗಿದ್ದು, ಲಾಕ್‌ಡೌನ್ ಸಡಿಲಿಕೆ ನಂತರ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಹೊಸ ದರ ಪಟ್ಟಿ ಪ್ರಕಾರ ಟೊಯೊಟಾ ಎಂಟ್ರಿ ಲೆವಲ್ ಕಾರು ಮಾದರಿಯಾದ ಗ್ಲಾಂಝಾ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.01 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.8.96 ಲಕ್ಷ ಬೆಲೆ ಹೊಂದಿದೆ.

ಗ್ಲಾಂಝಾ ಕಾರು ಆರಂಭಿಕವಾಗಿ ರೂ. 3 ಸಾವಿರದಿಂದ ಟಾಪ್ ಎಂಡ್ ಮಾದರಿಯು ರೂ. 26 ಹೆಚ್ಚುವರಿ ಹೊಂದಿದ್ದು, ಗ್ಲಾಂಝಾ ಕಾರು ಕೇವಲ 1.2-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದೆ.
MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಇನ್ನು ಯಾರಿಸ್ ಸೆಡಾನ್ ಕಾರು ಕೂಡಾ ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ಬೆಲೆ ಹೆಚ್ಚಳ ನಂತರ ಕಾರಿನ ಬೆಲೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.86 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನ ರೂ. 14.30 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಬೆಲೆ ಹೆಚ್ಚಳ ನಂತರ ಯಾರಿಸ್ ಕಾರಿನ ಬೆಲೆಯಲ್ಲಿ ಆರಂಭಿಕವಾಗಿ ರೂ. 10 ಸಾವಿರ ಮತ್ತು ಮಧ್ಯಮ ಕ್ರಮಾಂಕದ ಜೆ ಎಂಟಿ/ಸಿವಿಟಿ ಕಾರಿನ ಬೆಲೆಯಲ್ಲಿ ರೂ.1.68 ಲಕ್ಷ ಬೆಲೆ ಹೆಚ್ಚಿಸಲಾಗಿದ್ದು, ಯಾರಿಸ್ ಕೂಡಾ 1.5-ಲೀಟರ್ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಲಾಕ್‌ಡೌನ್ ಸಂಕಷ್ಟದಿಂದಾಗಿ ವಾಹನಗಳ ಬಿಡಿಭಾಗಗಳ ವೆಚ್ಚ ನಿರ್ವಹಣೆಯು ಹೆಚ್ಚುತ್ತಿದ್ದು, ಈ ಹಿನ್ನಲೆಯಲ್ಲಿ ಟೊಯೊಟಾ ಸೇರಿದಂತೆ ಬಹುತೇಕ ಆಟೋ ಕಂಪನಿಗಳು ಬಿಎಸ್-6 ವಾಹನಗಳ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ ಮಾಡಿವೆ.

ಟೊಯೊಟಾ ಕಾರುಗಳ ಹೊಸ ದರ ಪಟ್ಟಿಯಲ್ಲಿ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ಇನೋವಾ ಕ್ರಿಸ್ಟಾ ಮಾದರಿಯು ಕೂಡಾ ಹೆಚ್ಚುವರಿಯಾಗಿ ರೂ.61 ಸಾವಿರ ಹೆಚ್ಚುವರಿ ಬೆಲೆ ಪಡೆದುಕೊಂಡಿದ್ದು, ಬಿಎಸ್-6 ಎಂಜಿನ್ ಉನ್ನತೀಕರಿಸಿದ ನಂತರ ಇದು ಕೂಡಾ 2ನೇ ಬಾರಿಯ ಬೆಲೆ ಹೆಚ್ಚಳವಾಗಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ವಿವಿಧ ಮಾದರಿಗಳಿಗೆ ಅನುಗುಣವಾಗಿ ರೂ.25 ಸಾವಿರದಿಂದ ಗರಿಷ್ಠ ರೂ.61 ಸಾವಿರ ಬೆಲೆ ಹೆಚ್ಚಳ ಮಾಡಲಾಗಿದ್ದು, ಹೊಸ ದರ ಪಟ್ಟಿಯಂತೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.15.66 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.24.67 ಲಕ್ಷ ಬೆಲೆ ಹೊಂದಿದೆ.


Click it and Unblock the Notifications








