Just In
Don't Miss!
- News
ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾ ಖಾನ್ ವಿಧಿವಶ
- Movies
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಟೊಯೊಟಾ ಹಿಲುಕ್ಸ್ ಪಿಕ್‌ಅಪ್ ಬಿಡುಗಡೆಯಾಗುವುದು ಪಕ್ಕಾ?
ಟೊಯೊಟಾ ಇಂಡಿಯಾ ಕಂಪನಿಯು ತನ್ನ ಐಷಾರಾಮಿ ಫೀಚರ್ಸ್‌ವುಳ್ಳ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್‌ಅಪ್ ಟ್ರಕ್ ಮಾದರಿಯನ್ನು ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದ್ದು, ಹೊಸ ವಾಹನ ಮಾದರಿಯನ್ನು ಮೊದಲ ಬಾರಿಗೆ ಭಾರತದಲ್ಲೂ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಇನೋವಾ ಕ್ರಿಸ್ಟಾ ಮತ್ತು ಫಾರ್ಚೂನರ್ ನಡುವಿನ ಸ್ಥಾನ ಪಡೆದಿರುವ ಹಿಲುಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಎಸ್‌ಯುವಿ ಮಾದರಿಯು ಆಫ್-ರೋಡ್ ಕೌಶಲ್ಯ ಪ್ರದರ್ಶನದಲ್ಲಿ ಮುಂಚೂಣಿಯಲ್ಲಿದ್ದು, ಭಾರತದಲ್ಲೂ ಕೂಡಾ ಇದೀಗ ವಿವಿಧ ಮಾದರಿಯ ಲೈಫ್‌ಸ್ಪೈಲ್ ವಾಹನಗಳ ಬೇಡಿಕೆ ಹೆಚ್ಚುತ್ತಿರುವುದರಿಂದ ಟೊಯೊಟಾ ಕಂಪನಿಯು ಹೊಸ ಪಿಕ್ಅಪ್ ಮಾದರಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ಇರಾದೆಯಲ್ಲಿದೆ.

ಇದಕ್ಕೆ ಪೂರಕವಾಗಿ ಹೊಸ ಪಿಕ್‌ಅಪ್ ಮಾದರಿಗಳ ಕೆಲವು ಯುನಿಟ್‌ಗಳನ್ನು ಆಮದು ಮಾಡಿಕೊಂಡಿರುವ ಟೊಯೊಟಾ ಕಂಪನಿಯು ಬಿಡುಗಡೆಗೂ ಮುನ್ನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಸಿದ್ದತೆ ನಡೆಸುತ್ತಿದ್ದು, ಹೊಸ ವಾಹನಗಳನ್ನು ಉತ್ಪಾದನಾ ಘಟಕದ ಬಳಿ ಸಾಗಿಸುವಾಗ ಸಾರ್ವಜನಿಕವಾಗಿ ಕಂಡುಬಂದಿವೆ.

ಟೊಯೊಟಾ ಕಂಪನಿಯು ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್ ಮಾದರಿಗೆ ಪೈಪೋಟಿಯಾಗಿ ಹೊಸ ವಾಹನವನ್ನು ಬಿಡುಗಡೆ ಮಾಡುತ್ತಿದ್ದು, ಇನೋವಾ ಕ್ರಿಸ್ಟಾ ಮತ್ತು ಫಾರ್ಚೂನರ್ ಕಾರುಗಳ ಮಧ್ಯದ ಸ್ಥಾನದಲ್ಲಿರುವ ಹಿಲುಕ್ಸ್ ಪಿಕ್ಅಪ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹಿಲುಕ್ಸ್ ವಾಹನ ಮಾದರಿಯು ವಿದೇಶಿ ಮಾರುಕಟ್ಟೆಯಲ್ಲಿ ವಿವಿಧ ಎಂಜಿನ್ ಮಾದರಿಯೊಂದಿಗೆ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಗಳು ಎರಡು ಡೀಸೆಲ್ ಎಂಜಿನ್‌ನೊಂದಿಗೆ ರಸ್ತೆಗಿಳಿಯಲಿವೆ.

ಮಾಹಿತಿಗಳ ಪ್ರಕಾರ, ಹೊಸ ಪಿಕ್ಅಪ್ ವಾಹನದಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 2.4-ಲೀಟರ್ ಡೀಸೆಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದ್ದು, ಕಡಿಮೆ ಎಂಜಿನ್ ವೇಗದಲ್ಲೂ ಅತಿಹೆಚ್ಚು ಟಾರ್ಕ್ ಉತ್ಪಾದನಾ ಗುಣಹೊಂದಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

2.8-ಲೀಟರ್ ಡೀಸೆಲ್ ಮಾದರಿಯು 500-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಇದು ಲೋಡಿಂಗ್ ವೇಳೆಯೂ ಅತಿ ಸುಲಭವಾಗಿ ಮುನ್ನುಗ್ಗುವ ಶಕ್ತಿ ಹೊಂದುವ ಮೂಲಕ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಬಲಶಾಲಿ ವಾಹನ ಮಾದರಿಯಾಗಿದೆ.

ಜೊತೆಗೆ ಹೊಸ ಹಿಲುಕ್ಸ್ ಪಿಕ್‌ಅಪ್ ವಾಹನ ಉತ್ತಮವಾದ ಒಳಾಂಗಣದೊಂದಿಗೆ ಒಟ್ಟು 5,285-ಎಂಎಂ ಉದ್ದ ಹೊಂದಿದ್ದು, 3,085-ಎಂಎಂ ವೀಲ್ಹ್ ಬೆಸ್‌ನೊಂದಿಗೆ 4x4 ಆಲ್‌ವೀಲ್ಹ್ ಡ್ರೈವ್ ಟೆಕ್ನಾಲಜಿಯೊಂದಿಗೆ ಲೋಡಿಂಗ್ ಸಾಮಾರ್ಥ್ಯವು ಕೂಡಾ ಆಕರ್ಷಕವಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಬಿಡುಗಡೆ ಮತ್ತು ಬೆಲೆ(ಅಂದಾಜು)
ಜಾಗತಿಕ ಮಾರುಕಟ್ಟೆಯಲ್ಲಿ ವಿವಿಧ ವೆರಿಯೆಂಟ್‌ಗಳೊಂದಿಗೆ ಹಿಲುಕ್ಸ್ ಮಾದರಿಯು ಭಾರತೀಯ ರೂಪಾಯಿ ಲೆಕ್ಕಾಚಾರದಲ್ಲಿ ಆರಂಭಿಕವಾಗಿ ರೂ.17 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.45 ಲಕ್ಷ ಬೆಲೆಯೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹಿಲುಕ್ಸ್ ಮಾದರಿಯು ರೂ. 18 ಲಕ್ಷದಿಂದ ರೂ. 25 ಲಕ್ಷ ಬೆಲೆ ಅಂತರದಲ್ಲಿನ ಕೆಲವೇ ವೆರಿಯೆಂಟ್‌ಗಳೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.
Source: MotorBeam