Just In
- 39 min ago ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- 1 hr ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 1 hr ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
- 1 hr ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
Don't Miss!
- Movies ಬಯಸಿದ್ದು ಬಾಲಿವುಡ್ ಸಿನಿಮಾ, ಗೆದ್ದಿದ್ದು ತೆಲುಗು ಸಿನಿಮಾ; ಈ ನಟಿಯ ಭವಿಷ್ಯವೇನು?
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗೆ ಸಜ್ಜಾದ ಟೊಯೊಟಾ ಇನೋವಾ ಕ್ರಿಸ್ಟಾ ಸಿಎನ್ಜಿ ವರ್ಷನ್
ಟೊಯೊಟಾ ಕಂಪನಿಯು ಸದ್ಯ ತನ್ನ ಪ್ರಮುಖ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್ನೊಂದಿಗೆ ಉನ್ನತೀಕರಿಸಿ ಬಿಡುಗಡೆಗೊಳಿಸಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆ ಅನುಸಾರವಾಗಿ ಇನೋವಾ ಕ್ರಿಸ್ಟಾ ಕಾರು ಮಾದರಿಯಲ್ಲಿನ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ ತರುತ್ತಿದೆ.
ಬಿಎಸ್-6 ಎಮಿಷನ್ ಜಾರಿ ನಂತರ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನಲ್ಲಿ 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆವೃತ್ತಿಗಳನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದ್ದು, ಈ ಹಿಂದಿನ 2.8-ಲೀಟರ್ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಹೊಸ ಎಮಿಷನ್ ಪ್ರಕಾರ ಸ್ಥಗಿತಗೊಳಿಸಲಾಗಿದೆ. ಇದರ ಬೆನ್ನಲ್ಲೇ ಹೊಸ ಕಾರಿನಲ್ಲಿ ಇದೇ ಮೊದಲ ಬಾರಿಗೆ ಸಿಎನ್ಜಿ ಆಯ್ಕೆಯನ್ನು ನೀಡಲು ಸಿದ್ದತೆ ನಡೆಸಲಾಗುತ್ತಿದ್ದು, ಸಿಎನ್ಜಿ ಆವೃತ್ತಿಯು ಡೀಸೆಲ್ ಕಾರಿಗಿಂತಲೂ ತುಸು ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸಲಿದೆ.
ಹೊಸ ಕಾರು ಮಾದರಿಯ ಬಿಡುಗಡೆಗೂ ಮುನ್ನ ಬೆಂಗಳೂರಿನ ಹೊರವಲಯದಲ್ಲಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ಸಿಎನ್ಜಿ ಆವೃತ್ತಿಯನ್ನು 2.7-ಲೀಟರ್ ಪೆಟ್ರೋಲ್ ಜಿ ವೆರಿಯೆಂಟ್ನಲ್ಲಿ ಜೋಡಣೆ ಮಾಡಲಾಗಿದೆ.
ಹೊಸ ಕಾರು ಮುಂಬರುವ ಸೆಪ್ಟೆಂಬರ್ ಅಥವಾ ಅಕ್ಟೋಬರ್ ಹೊತ್ತಿಗೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ ರೂ.1 ಲಕ್ಷದಿಂದ ರೂ.1.50 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.
ಇನ್ನು ಟೊಯೊಟಾ ಕಂಪನಿಯು ತನ್ನ ಜನಪ್ರಿಯ ಎಂಪಿವಿ ಆವೃತ್ತಿಯನ್ನು ಬಿಎಸ್-6 ಎಂಜಿನ್ನೊಂದಿಗೆ ಬಿಡುಗಡೆಗೊಳಿಸಿದ ನಂತರ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು
ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಏಪ್ರಿಲ್ 1ರಿಂದಲೇ ಬಿಎಸ್-6 ಎಮಿಷನ್ ಜಾರಿಗೆ ತರಲಾಗಿದ್ದು, ಹೊಸ ನಿಯಮ ಅನುಸಾರವಾಗಿ ಬಹುತೇಕ ಕಾರು ಮಾದರಿಗಳು ಈಗಾಗಲೇ ಎಂಜಿನ್ನೊಂದಿಗೆ ಬಿಡುಗಡೆಗೊಂಡಿವೆ. ಟೊಯೊಟಾ ಕೂಡಾ ಇನೋವಾ ಕ್ರಿಸ್ಟಾ ಸೇರಿದಂತೆ ವಿವಿಧ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್ನೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಕಾರುಗಳ ಎಂಜಿನ್ ಮತ್ತು ಸುರಕ್ಷಾ ಸೌಲಭ್ಯಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ.
ಇನೋವಾ ಕ್ರಿಸ್ಟಾ ಕಾರು ಆವೃತ್ತಿಯು ಹೊಸ ಎಂಜಿನ್ನೊಂದಿಗೆ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕ ಆವೃತ್ತಿಯು ರೂ.15.66 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.24.67 ಲಕ್ಷ ಬೆಲೆ ಹೊಂದಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್
ಹೊಸ ಎಮಿಷನ್ ಜೊತೆಗೆ ಇನೋವಾ ಕ್ರಿಸ್ಟಾ ಕಾರಿನಲ್ಲಿ ಈ ಬಾರಿ ಹಿಲ್ ಸ್ಟಾರ್ಟ್ ಅಸಿಸ್ಟ್, ಸ್ಟ್ಯಾಬಿಲಿಟಿ ಕಂಟ್ರೋಲ್ ಮತ್ತು ಎಮರ್ಜೆನ್ಸಿ ಬ್ರೇಕಿಂಗ್ ಸಿಗ್ನಲ್ ಸೌಲಭ್ಯಗಳನ್ನು ಪ್ರತಿ ವೆರಿಯೆಂಟ್ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಈ ಹಿಂದಿಗಿಂತಲೂ ಹೊಸ ಕಾರು ಹೆಚ್ಚು ಬಲಶಾಲಿಯಾಗಿರುವುದಲ್ಲದೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡಲಿದೆ.