ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಸಿಎನ್‌ಜಿ ಆವೃತ್ತಿ

ಟೊಯೊಟಾ ಕಂಪನಿಯು ಬಿಎಸ್-6 ಎಂಜಿನ್‌ನೊಂದಿಗೆ ತನ್ನ ಪ್ರಮುಖ ಕಾರು ಮಾದರಿಗಳನ್ನ ಉನ್ನತೀಕರಿಸಿ ಬಿಡುಗಡೆಗೊಳಿಸಿದ್ದು, ಇದೀಗ ಮಾರುಕಟ್ಟೆಯಲ್ಲಿನ ಬೇಡಿಕೆ ಅನುಸಾರವಾಗಿ ಇನೋವಾ ಕ್ರಿಸ್ಟಾ ಕಾರು ಮಾದರಿಯಲ್ಲಿನ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ ತರುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಸಿಎನ್‌ಜಿ ಆವೃತ್ತಿ

ಬಿಎಸ್-6 ಎಮಿಷನ್ ಜಾರಿ ನಂತರ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನಲ್ಲಿ 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆವೃತ್ತಿಗಳನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದ್ದು, ಈ ಹಿಂದಿನ 2.8-ಲೀಟರ್ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಹೊಸ ಎಮಿಷನ್ ಪ್ರಕಾರ ಸ್ಥಗಿತಗೊಳಿಸಲಾಗಿದೆ. ಇದರ ಬೆನ್ನಲ್ಲೇ ಹೊಸ ಕಾರಿನಲ್ಲಿ ಇದೇ ಮೊದಲ ಬಾರಿಗೆ ಸಿಎನ್‌ಜಿ ಆಯ್ಕೆಯನ್ನು ನೀಡಲು ಸಿದ್ದತೆ ನಡೆಸಲಾಗುತ್ತಿದ್ದು, ಸಿಎನ್‌ಜಿ ಆವೃತ್ತಿಯು ಡೀಸೆಲ್ ಕಾರಿಗಿಂತಲೂ ತುಸು ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಸಿಎನ್‌ಜಿ ಆವೃತ್ತಿ

ಹೊಸ ಕಾರು ಮಾದರಿಯ ಬಿಡುಗಡೆಗೂ ಮುನ್ನ ಬೆಂಗಳೂರಿನ ಹೊರವಲಯದಲ್ಲಿ ಹಲವು ಬಾರಿ ವಿವಿಧ ಹಂತದ ರೋಡ್‌ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ಸಿಎನ್‌ಜಿ ಆವೃತ್ತಿಯನ್ನು 2.7-ಲೀಟರ್ ಪೆಟ್ರೋಲ್ ಜಿ ವೆರಿಯೆಂಟ್‌ನಲ್ಲಿ ಜೋಡಣೆ ಮಾಡಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಸಿಎನ್‌ಜಿ ಆವೃತ್ತಿ

ಹೊಸ ಕಾರು ಮುಂಬರುವ ಸೆಪ್ಟೆಂಬರ್ ಅಥವಾ ಅಕ್ಟೋಬರ್ ಹೊತ್ತಿಗೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ ರೂ.1 ಲಕ್ಷದಿಂದ ರೂ.1.50 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಸಿಎನ್‌ಜಿ ಆವೃತ್ತಿ

ಇನ್ನು ಟೊಯೊಟಾ ಕಂಪನಿಯು ತನ್ನ ಜನಪ್ರಿಯ ಎಂಪಿವಿ ಆವೃತ್ತಿಯನ್ನು ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಿದ ನಂತರ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಸಿಎನ್‌ಜಿ ಆವೃತ್ತಿ

ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಏಪ್ರಿಲ್ 1ರಿಂದಲೇ ಬಿಎಸ್-6 ಎಮಿಷನ್ ಜಾರಿಗೆ ತರಲಾಗಿದ್ದು, ಹೊಸ ನಿಯಮ ಅನುಸಾರವಾಗಿ ಬಹುತೇಕ ಕಾರು ಮಾದರಿಗಳು ಈಗಾಗಲೇ ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿವೆ. ಟೊಯೊಟಾ ಕೂಡಾ ಇನೋವಾ ಕ್ರಿಸ್ಟಾ ಸೇರಿದಂತೆ ವಿವಿಧ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಕಾರುಗಳ ಎಂಜಿನ್ ಮತ್ತು ಸುರಕ್ಷಾ ಸೌಲಭ್ಯಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಸಿಎನ್‌ಜಿ ಆವೃತ್ತಿ

ಇನೋವಾ ಕ್ರಿಸ್ಟಾ ಕಾರು ಆವೃತ್ತಿಯು ಹೊಸ ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಆವೃತ್ತಿಯು ರೂ.15.66 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.24.67 ಲಕ್ಷ ಬೆಲೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಸಿಎನ್‌ಜಿ ಆವೃತ್ತಿ

ಹೊಸ ಎಮಿಷನ್ ಜೊತೆಗೆ ಇನೋವಾ ಕ್ರಿಸ್ಟಾ ಕಾರಿನಲ್ಲಿ ಈ ಬಾರಿ ಹಿಲ್ ಸ್ಟಾರ್ಟ್ ಅಸಿಸ್ಟ್, ಸ್ಟ್ಯಾಬಿಲಿಟಿ ಕಂಟ್ರೋಲ್ ಮತ್ತು ಎಮರ್ಜೆನ್ಸಿ ಬ್ರೇಕಿಂಗ್ ಸಿಗ್ನಲ್ ಸೌಲಭ್ಯಗಳನ್ನು ಪ್ರತಿ ವೆರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಈ ಹಿಂದಿಗಿಂತಲೂ ಹೊಸ ಕಾರು ಹೆಚ್ಚು ಬಲಶಾಲಿಯಾಗಿರುವುದಲ್ಲದೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡಲಿದೆ.

Most Read Articles

Kannada
Read more on ಟೊಯೊಟಾ toyota
English summary
Toyota Innova Crysta CNG Variant Spotted Testing. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X