ಬಿಡುಗಡೆಗೂ ಮುನ್ನ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನ ಮಾಹಿತಿ ಸೋರಿಕೆ
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಎಂಪಿವಿ ಕಾರು ಮಾದರಿಯಾದ ಇನೋವಾ ಕ್ರಿಸ್ಟಾ ಆವೃತ್ತಿಯ ಫೇಸ್‌ಲಿಫ್ಟ್ ವರ್ಷನ್ ಅನ್ನು ಜಾಗತಿಕ ಮಾರುಕಟ್ಟೆಗೆ ಪರಿಚಯಿಸಲು ಸಿದ್ದವಾಗುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಾರಿನ ತಾಂತ್ರಿಕ ಅಂಶಗಳ ಮಾಹಿತಿಯುಳ್ಳ ಕೈಪೀಡಿ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದೆ.

2018ರಲ್ಲಿ ಹೊಸ ತಲೆಮಾರಿನ ಇನೋವಾ ಕ್ರಿಸ್ಟಾ ಬಿಡುಗಡೆ ಮಾಡಿದ್ದ ಟೊಯೊಟಾ ಕಂಪನಿಯು ಇದೀಗ ಫೇಸ್‌ಲಿಫ್ಟ್ ಮಾದರಿಯನ್ನು ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಸಾಕಷ್ಟು ಬದಲಾವಣೆ ಪಡೆದುಕೊಂಡಿದೆ. ಇನೋವಾ ಕ್ರಿಸ್ಟಾ ಮಾದರಿಯು ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಮಾರಾಟ ಸಂಖ್ಯೆಯನ್ನು ತನ್ನದಾಗಿಸಿಕೊಂಡಿದ್ದು, ಇದೀಗ ಫೇಸ್‌ಲಿಫ್ಟ್ ಆವೃತ್ತಿ ಮೂಲಕ ಎಂಪಿವಿ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಇದೇ ತಿಂಗಳು 15ಕ್ಕೆ ಇಂಡೋನೇಷ್ಯಾದಲ್ಲಿ ಬಿಡುಗಡೆಯಾಗಲಿರುವ ಫೇಸ್‌ಲಿಫ್ಟ್ ಇನೋವಾ ಕ್ರಿಸ್ಟಾ ಕಾರು ಮಾದರಿಯು ಭಾರತದಲ್ಲಿ ತದನಂತರವಷ್ಟೇ ಬಿಡುಗಡೆಯಾಗಲಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬದಲಾವಣೆ ಪಡೆದುಕೊಂಡಿದೆ.

ಹೊಸ ಕಾರು ಆವೃತ್ತಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದ್ದು, ಕಾರಿನ ಹೊರ ಮತ್ತು ಒಳ ಭಾಗದ ವಿನ್ಯಾಸಗಳಲ್ಲಿ ಮಹತ್ವದ ಬದಲಾವಣೆಗಳಾಗಿರುವುದು ಸೋರಿಕೆಯಾಗಿರುವ ಕೈಪಿಡಿಯಲ್ಲಿ ಬಹಿರಂಗವಾಗಿದೆ.

ಹೊಸ ಕಾರಿನಲ್ಲಿ ಮರವಿನ್ಯಾಸಗೊಳಿಸಲಾದ ಎಲ್ಇಡಿ ಹೆಡ್‌ಲ್ಯಾಂಪ್ಸ್ ಒಳಗೊಂಡ ಫ್ರಂಟ್ ಫಾಸಿಯಾ, ಮರುವಿನ್ಯಾಸಗೊಂಡ ಗ್ರಿಲ್ ಮತ್ತು ಬಂಪರ್, ಹೊಸ ಮಾದರಿಯ ಟೈಲ್ ಲ್ಯಾಂಪ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ನೀಡಲಾಗುತ್ತಿದ್ದು, ಹಿಂಭಾಗದ ಬಂಪರ್ ವಿನ್ಯಾಸದಲ್ಲಿ ಯಾವುದೇ ಹೊಸ ಬದಲಾವಣೆ ತಂದಿಲ್ಲ.

ಹೊಸ ಕಾರಿನಲ್ಲಿ ಒಳಭಾಗದ ವಿನ್ಯಾಸವು ಕೂಡಾ ಸಾಕಷ್ಟು ಬದಲಾವಣೆಗೊಂಡಿದ್ದು, ಡ್ಯುಯಲ್ ಇಂಟಿಯರ್, 9-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ವೈರ್‌ಲೆಸ್ ಚಾರ್ಜಿಂಗ್, 360 ಡಿಗ್ರಿ ಕ್ಯಾಮೆರಾ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೇರಿದಂತೆ ಪ್ರಸ್ತುತ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೊಸ ಕಾರಿನಲ್ಲಿ ಎಂಜಿನ್ ಆಯ್ಕೆಯನ್ನು ಮಾತ್ರ ಸದ್ಯ ಮಾರುಕಟ್ಟೆಯಲ್ಲಿನ ಮಾದರಿಯಂತೆ ಮುಂದುವರಿಸಲಾಗುತ್ತಿದ್ದು,ಇನೋವಾ ಕ್ರಿಸ್ಟಾ ಎಂಪಿವಿ ಕಾರಿನಲ್ಲಿ 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆವೃತ್ತಿಗಳನ್ನು ಮಾರಾಟ ಮಾಡಲಿದೆ.

ಟೊಯೊಟಾ ಕಂಪನಿಯು ಬಿಎಸ್-6 ಜಾರಿ ನಂತರ ಈ ಹಿಂದಿನ 2.8-ಲೀಟರ್ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಹೊಸ ಎಮಿಷನ್ ಪ್ರಕಾರ ಸ್ಥಗಿತಗೊಳಿಸಿದ್ದು, ಹೊಸ ಕಾರಿನಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಆಯ್ಕೆಯನ್ನು ನೀಡಲು ಸಿದ್ದತೆ ನಡೆಸಲಾಗುತ್ತಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಏಪ್ರಿಲ್ 1ರಿಂದಲೇ ಬಿಎಸ್-6 ಎಮಿಷನ್ ಜಾರಿಗೆ ತರಲಾಗಿದ್ದು, ಹೊಸ ನಿಯಮ ಅನುಸಾರವಾಗಿ ಬಹುತೇಕ ಕಾರು ಮಾದರಿಗಳು ಈಗಾಗಲೇ ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿವೆ. ಟೊಯೊಟಾ ಕೂಡಾ ಇನೋವಾ ಕ್ರಿಸ್ಟಾ ಸೇರಿದಂತೆ ವಿವಿಧ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಕಾರುಗಳ ಎಂಜಿನ್ ಮತ್ತು ಸುರಕ್ಷಾ ಸೌಲಭ್ಯಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ.
Source: Rushlane


Click it and Unblock the Notifications