2021ರ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನ ವಿನ್ಯಾಸ ಬಹಿರಂಗ

2018ರಲ್ಲಿ ಮೊದಲ ಬಾರಿಗೆ ಹೊಸ ತಲೆಮಾರಿನ ಇನೋವಾ ಕ್ರಿಸ್ಟಾ ಬಿಡುಗಡೆ ಮಾಡಿದ್ದ ಟೊಯೊಟಾ ಕಂಪನಿಯು ಇದೀಗ ಫೇಸ್‌ಲಿಫ್ಟ್ ಮಾದರಿಯನ್ನು ಕೆಲವು ಸಣ್ಣ-ಪುಟ್ಟ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಾರಿನ ವಿನ್ಯಾಸದ ಕುರಿತಾದ ಪೇಟೆಂಟ್ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಟುತ್ತಿವೆ.

2021ರ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನ ವಿನ್ಯಾಸ ಬಹಿರಂಗ

ಟೊಯೊಟಾ ನಿರ್ಮಾಣದ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಇನೋವಾ ಕ್ರಿಸ್ಟಾ ಮಾದರಿಯು ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಮಾರಾಟ ಸಂಖ್ಯೆಯನ್ನು ತನ್ನದಾಗಿಸಿಕೊಂಡಿದ್ದು, ಇದೀಗ ಫೇಸ್‌ಲಿಫ್ಟ್ ಆವೃತ್ತಿ ಮೂಲಕ ಎಂಪಿವಿ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಕಾರು 2021ರ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಕಾರಿನ ವಿನ್ಯಾಸದ ಕುರಿತಾದ ಪೇಟೆಂಟ್ ಚಿತ್ರಗಳು ಇದೀಗ ಚರ್ಚೆಗೆ ಕಾರಣವಾಗಿವೆ.

2021ರ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನ ವಿನ್ಯಾಸ ಬಹಿರಂಗ

ಲಭ್ಯವಾಗಿರುವ ಮಾಹಿತಿಗಳ ಪ್ರಕಾರ 2021ರ ಇನೋವಾ ಕ್ರಿಸ್ಟಾ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಸಾಕಷ್ಟು ಹೊಸ ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿರಲಿದ್ದು, ಕಾರಿನ ಹೊರ ಮತ್ತು ಒಳ ಭಾಗದ ವಿನ್ಯಾಸಗಳಲ್ಲಿ ಮಹತ್ವದ ಬದಲಾವಣೆ ಪಡೆದುಕೊಂಡಿದೆ.

2021ರ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನ ವಿನ್ಯಾಸ ಬಹಿರಂಗ

ಹೊಸ ಕಾರಿನಲ್ಲಿ ಮರವಿನ್ಯಾಸಗೊಳಿಸಲಾದ ಎಲ್ಇಡಿ ಹೆಡ್‌ಲ್ಯಾಂಪ್ಸ್ ಒಳಗೊಂಡ ಫ್ರಂಟ್ ಫಾಸಿಯಾ, ಮರುವಿನ್ಯಾಸಗೊಂಡ ಗ್ರಿಲ್ ಮತ್ತು ಬಂಪರ್, ಹೊಸ ಮಾದರಿಯ ಟೈಲ್ ಲ್ಯಾಂಪ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ನೀಡಲಾಗುತ್ತಿದ್ದು, ಹಿಂಭಾಗದ ಬಂಪರ್ ವಿನ್ಯಾಸದಲ್ಲಿ ಯಾವುದೇ ಹೊಸ ಬದಲಾವಣೆ ತಂದಿಲ್ಲ.

2021ರ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನ ವಿನ್ಯಾಸ ಬಹಿರಂಗ

ಹೊಸ ಕಾರಿನಲ್ಲಿ ಒಳಭಾಗದ ವಿನ್ಯಾಸವು ಕೂಡಾ ಸಾಕಷ್ಟು ಬದಲಾವಣೆಗೊಂಡಿರುವ ಸಾಧ್ಯತೆಗಳಿದ್ದು, ಕಾರಿನ ಇಂಟಿರಿಯರ್ ಕುರಿತಾದ ಮಾಹಿತಿ ಲಭ್ಯವಾಗಿಲ್ಲ. ಆದರೂ ಪ್ರಸ್ತುತ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದ್ದು, ಎಂಜಿನ್ ಆಯ್ಕೆಯು ಸದ್ಯ ಮಾರುಕಟ್ಟೆಯಲ್ಲಿನ ಮಾದರಿಯಂತೆ ಮುಂದುವರಿಯಲಿದೆ.

2021ರ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನ ವಿನ್ಯಾಸ ಬಹಿರಂಗ

ಇನ್ನು ಬಿಎಸ್-6 ಎಮಿಷನ್ ಜಾರಿ ನಂತರ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನಲ್ಲಿ 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆವೃತ್ತಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿರುವ ಟೊಯೊಟಾ ಕಂಪನಿಯು ಈ ಹಿಂದಿನ 2.8-ಲೀಟರ್ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಹೊಸ ಎಮಿಷನ್ ಪ್ರಕಾರ ಸ್ಥಗಿತಗೊಳಿಸಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

2021ರ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನ ವಿನ್ಯಾಸ ಬಹಿರಂಗ

ಇದರ ಬೆನ್ನಲ್ಲೇ ಹೊಸ ಕಾರಿನಲ್ಲಿ ಮೊದಲ ಬಾರಿಗೆ ಹೊಸ ಕಾರಿನಲ್ಲಿ ಸಿಎನ್‌ಜಿ ಆಯ್ಕೆಯನ್ನು ನೀಡಲು ಸಿದ್ದತೆ ನಡೆಸಲಾಗುತ್ತಿದ್ದು, ಸಿಎನ್‌ಜಿ ಆವೃತ್ತಿಯು ಡೀಸೆಲ್ ಕಾರಿಗಿಂತಲೂ ತುಸು ಹೆಚ್ಚಿನ ಮಟ್ಟದ ಮೈಲೇಜ್ ವೈಶಿಷ್ಟ್ಯತೆಯೊಂದಿಗೆ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ.

2021ರ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನ ವಿನ್ಯಾಸ ಬಹಿರಂಗ

ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಏಪ್ರಿಲ್ 1ರಿಂದಲೇ ಬಿಎಸ್-6 ಎಮಿಷನ್ ಜಾರಿಗೆ ತರಲಾಗಿದ್ದು, ಹೊಸ ನಿಯಮ ಅನುಸಾರವಾಗಿ ಬಹುತೇಕ ಕಾರು ಮಾದರಿಗಳು ಈಗಾಗಲೇ ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿವೆ. ಟೊಯೊಟಾ ಕೂಡಾ ಇನೋವಾ ಕ್ರಿಸ್ಟಾ ಸೇರಿದಂತೆ ವಿವಿಧ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಕಾರುಗಳ ಎಂಜಿನ್ ಮತ್ತು ಸುರಕ್ಷಾ ಸೌಲಭ್ಯಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

2021ರ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನ ವಿನ್ಯಾಸ ಬಹಿರಂಗ

ಇನೋವಾ ಕ್ರಿಸ್ಟಾ ಕಾರು ಆವೃತ್ತಿಯು ಹೊಸ ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಆವೃತ್ತಿಯು ರೂ. 15.67 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 24.68 ಲಕ್ಷ ಬೆಲೆ ಹೊಂದಿದ್ದು, ಫೇಸ್‌ಲಿಫ್ಟ್ ಆವೃತ್ತಿಯನ್ನು ಇನ್ನಷ್ಟು ದುಬಾರಿಯಾಗಿರಲಿದೆ.

Article Published On: Thursday, October 1, 2020, 18:04 [IST]
English summary
2021 Toyota Innova Crysta Facelift Leaked Ahead Of India Launch. Read in Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+