ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಟೊಯೊಟಾ ಕಂಪನಿಯು ತನ್ನ ಜನಪ್ರಿಯ ಎಂಪಿವಿ ಕಾರು ಮಾದರಿಯಾದ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಮಾದರಿಯನ್ನು ಈಗಾಗಲೇ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಿದ್ದು, ಇದೀಗ ಭಾರತದಲ್ಲೂ ಹೊಸ ಕಾರು ಬಿಡುಗಡೆಯ ಸಿದ್ದತೆಯಲ್ಲಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರು ಮಾದರಿಯ ಖರೀದಿಗಾಗಿ ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಆರಂಭವಾಗಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು ಹಲವಾರು ಹೊಸ ಬದಲಾವಣೆಗಳೊಂದಿಗೆ ಇದೇ ತಿಂಗಳು 20ಕ್ಕೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಫೇಸ್‌ಲಿಫ್ಟ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಮುಂಭಾಗದ ವಿನ್ಯಾಸದಲ್ಲಿ ಹೊಸ ಬದಲಾವಣೆ ಪಡೆದುಕೊಂಡಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

2004ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ಇನೋವಾ ಕಾರು 2016ರಲ್ಲಿ ಇನೋವಾ ಕ್ರಿಸ್ಟಾ ಹೆಸರಿನೊಂದಿಗೆ ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಿತ್ತು. ಇದೀಗ ಫೇಸ್‌ಲಿಫ್ಟ್ ಆವೃತ್ತಿಯ ಮೂಲಕ ಹೊರಭಾಗ ಮತ್ತು ಒಳಭಾಗದ ವಿನ್ಯಾಸದಲ್ಲಿ ಸಾಕಷ್ಟು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಫ್ಲಕ್ಸ್ ಸಿಲ್ವರ್ ಸ್ಕ್ರೀಡ್ ಪ್ಲೇಟ್, ತ್ರಿಕೋನಾಕಾದಲ್ಲಿರುವ ಹೊಲೊಜೆನ್ ಫಾಗ್ ಲ್ಯಾಂಪ್, ಸಿಲ್ವರ್ ಫೀನಿಷ್ ಹೊಂದಿರುವ 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್ ಹೊಂದಿದ್ದು, ಹಿಂಭಾಗದ ಬಂಪರ್ ಮತ್ತು ಇತರೆ ವಿನ್ಯಾಸದಲ್ಲಿ ಯಾವುದೇ ಹೊಸ ಬದಲಾವಣೆಗಳನ್ನು ತಂದಿಲ್ಲ. ಫೇಸ್‌ಲಿಫ್ಟ್ ಒಳಭಾಗದ ವಿನ್ಯಾಸವು ಕೂಡಾ ಸಾಕಷ್ಟು ಬದಲಾವಣೆಗೊಂಡಿದ್ದು, ಆಲ್ ಬ್ಲ್ಯಾಕ್ ಥೀಮ್ ಇಂಟಿಯರ್ ಆಕರ್ಷಕವಾಗಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಸುರಕ್ಷತೆಗಾಗಿ ಪ್ರಸ್ತುತ ಮಾದರಿಯಲ್ಲಿರುವಂತೆಯೇ ಎಬಿಎಸ್ ಜೊತೆಗೆ ಇಬಿಡಿ, 7 ಏರ್‌ಬ್ಯಾಗ್, ಸ್ಪಿಡ್ ಸೆನ್ಸಾರ್ ಡೋರ್ ಲಾಕ್, ಕ್ರೂಸ್ ಕಂಟ್ರೋಲ್, ವೆಹಿಕಲ್ ಸ್ಟ್ಯಾಬಿಲಿಟಿ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಲೈಟಿಂಗ್ಸ್, ಲೆದರ್ ಆಸನಗಳು, ರಿವರ್ಸ್ ಕ್ಯಾಮೆರಾ ಸೇರಿದಂತೆ ಹಲವಾರು ಸುರಕ್ಷಾ ಸೌಲಭ್ಯಗಳಿವೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಎಂಜಿನ್ ಮತ್ತು ಪರ್ಫಾಮೆನ್ಸ್

ಸದ್ಯ ಇಂಡೋನೇಷ್ಯಾದಲ್ಲಿ ಬಿಡುಗಡೆಯಾಗಿರುವ ಕಿಜಂಗ್ ಇನೋವಾ(ಭಾರತದಲ್ಲಿ ಇನೋವಾ ಕ್ರಿಸ್ಟಾ) ಮಾದರಿಯು 139-ಬಿಎಚ್‌ಪಿ ಪ್ರೇರಿತ 2.0-ಲೀಟರ್ ಪೆಟ್ರೋಲ್ ಮತ್ತು 149-ಬಿಎಚ್‌ಪಿ ಪ್ರೇರಿತ 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಭಾರತದಲ್ಲಿ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆವೃತ್ತಿಗಳೊಂದಿಗೆ ಮಾರಾಟವಾಗಲಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಟೊಯೊಟಾ ಕಂಪನಿಯು ಬಿಎಸ್-6 ಜಾರಿ ನಂತರ ಈ ಹಿಂದಿನ 2.8-ಲೀಟರ್ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಹೊಸ ಎಮಿಷನ್ ಪ್ರಕಾರ ಸ್ಥಗಿತಗೊಳಿಸಿದ್ದು, ಹೊಸ ಕಾರಿನಲ್ಲಿ ಮೊದಲ ಬಾರಿಗೆ ಸಿಎನ್‌ಜಿ ಆಯ್ಕೆಯನ್ನು ಸಹ ನೀಡುವ ಸಿದ್ದತೆ ನಡೆಸಲಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಏಪ್ರಿಲ್ 1ರಿಂದಲೇ ಬಿಎಸ್-6 ಎಮಿಷನ್ ಜಾರಿಗೆ ತರಲಾಗಿದ್ದು, ಹೊಸ ನಿಯಮ ಅನುಸಾರವಾಗಿ ಬಹುತೇಕ ಕಾರು ಮಾದರಿಗಳು ಈಗಾಗಲೇ ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿವೆ. ಟೊಯೊಟಾ ಕೂಡಾ ಇನೋವಾ ಕ್ರಿಸ್ಟಾ ಸೇರಿದಂತೆ ವಿವಿಧ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಕಾರುಗಳ ಎಂಜಿನ್ ಮತ್ತು ಸುರಕ್ಷಾ ಸೌಲಭ್ಯಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ.

Most Read Articles

Kannada
Read more on ಟೊಯೊಟಾ toyota
English summary
Facelifted Toyota Innova Crysta To Launch On November 20. Read in Kannada.
Story first published: Wednesday, November 18, 2020, 18:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X