2021ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್

ಟೊಯೊಟಾ ನಿರ್ಮಾಣದ ಇನೋವಾ ಕ್ರಿಸ್ಟಾ ಕಾರು ಬಹುಬೇಡಿಕೆಯ ಎಂಪಿವಿ ಕಾರು ಮಾದರಿಯಾಗಿದ್ದು, ಹೊಸ ತಲೆಮಾರಿನ ಇನೋವಾ ಕ್ರಿಸ್ಟಾ ಕಾರು ಮುಂಬರುವ 2021ಕ್ಕೆ ಫೇಸ್‌ಲಿಫ್ಟ್ ಮಾದರಿಯನ್ನು ಪಡೆದುಕೊಳ್ಳಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್

2006ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಇನೋವಾ ಕಾರು ಇದುವರೆಗೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದ್ದು, 2016ರಲ್ಲಿ ಇನೋವಾ ಕ್ರಿಸ್ಟಾ ಹೊಸ ರೂಪದೊಂದಿಗೆ ಬಿಡುಗಡೆಗೊಂಡಿತ್ತು. ಇದೀಗ ಇನೋವಾ ಕ್ರಿಸ್ಟಾ ಮತ್ತಷ್ಟು ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು 2021ರ ಆರಂಭದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

2021ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್

ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರು ಎಂಜಿನ್ ಹೊರತುಪಡಿಸಿ ಕಾರಿನ ವಿನ್ಯಾಸದಲ್ಲಿ ಕೆಲವು ಬದಲಾವಣೆಗಳನ್ನು ಪಡೆದುಕೊಳ್ಳಲಿದ್ದು, ಮುಂಭಾಗದ ಗ್ರಿಲ್ ಮತ್ತು ಹೆಡ್‌ಲ್ಯಾಂಪ್ ಕ್ಲಸ್ಟರ್ ಹೊಸ ರೂಪ ಪಡೆದುಕೊಳ್ಳಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್

ಸದ್ಯ ಇನೋವಾ ಕ್ರಿಸ್ಟಾ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.15.66 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.24.67 ಲಕ್ಷ ಬೆಲೆ ಹೊಂದಿದ್ದು, ಫೇಸ್‌ಲಿಫ್ಟ್ ಆವೃತ್ತಿಯು ಸಾಮಾನ್ಯ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್

ಹೊಸ ಎಮಿಷನ್‌ನಿಂದಾಗಿ ಈ ಬಾರಿ ಇನೋವಾ ಕ್ರಿಸ್ಟಾ ಕಾರಿನಲ್ಲಿ ಹಿಲ್ ಸ್ಟಾರ್ಟ್ ಅಸಿಸ್ಟ್, ಸ್ಟ್ಯಾಬಿಲಿಟಿ ಕಂಟ್ರೋಲ್ ಮತ್ತು ಎಮರ್ಜೆನ್ಸಿ ಬ್ರೇಕಿಂಗ್ ಸಿಗ್ನಲ್ ಸೌಲಭ್ಯಗಳನ್ನು ಪ್ರತಿ ವೆರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಈ ಹಿಂದಿಗಿಂತಲೂ ಹೊಸ ಕಾರು ಹೆಚ್ಚು ಬಲಶಾಲಿಯಾಗಿರುವುದಲ್ಲದೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡಲಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

2021ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್

ಇನ್ನು ಹೊಸ ಎಂಜಿನ್ ಮತ್ತು ಸೇಫ್ಟಿ ಫೀಚರ್ಚ್‌ಗಳಿಂದಾಗಿ ಬಿಎಸ್-4 ಮಾದರಿಗಿಂತಲೂ ಬಿಎಸ್-6 ಆವೃತ್ತಿಯು ರೂ. 1.32 ಲಕ್ಷದಷ್ಟು ದುಬಾರಿಯಾಗಿದ್ದು, ಹೊಸ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯನ್ನು ಈಗಾಗಲೇ ಆರಂಭವಾಗಿದೆ.

2021ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್

ಜೊತೆಗೆ ಇನೋವಾ ಕಾರು ಮಾದರಿಯು ಭಾರತದಲ್ಲಿ ಪರಿಚಯಿಸಿ 15 ವರ್ಷಗಳ ಸಂಭ್ರಮಕ್ಕಾಗಿ ಇನೋವಾ ಕ್ರಿಸ್ಟಾ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಿರುವ ಟೊಯೊಟಾ ಕಂಪನಿಯು ತನ್ನ ನೆಚ್ಚಿನ ಗ್ರಾಹಕರಿಗಾಗಿ ಲೀಡರ್‌ಶಿಪ್ ಎಡಿಷನ್ ಪರಿಚಯಿಸಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

2021ಕ್ಕೆ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್

ಸೀಮಿತ ಅವಧಿಗೆ ಮಾತ್ರ ಖರೀದಿ ಲಭ್ಯವಿರುವ ಸ್ಪೆಷನ್ ಎಡಿಷನ್ ಕಾರಿನ ಬೆಲೆಯು ಸಾಮಾನ್ಯ ವಿಎಕ್ಸ್ ವೆರಿಯೆಂಟ್ ಮಾದರಿಗಿಂತಲೂ ರೂ.80 ಸಾವಿರದಷ್ಟು ಹೆಚ್ಚಳವಾಗಿದ್ದು, ಬೆಲೆ ಹೆಚ್ಚಳಕ್ಕೆ ತಕ್ಕಂತೆ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆಮಾಡಲಾಗಿದೆ.

Article Published On: Thursday, June 11, 2020, 15:40 [IST]
English summary
Toyota Innova Crysta Facelift To Launch Next Year. Read in Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+