ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ 2020ರ ಟೊಯೊಟಾ ಇನೋವಾ ಕ್ರಿಸ್ಟಾ

ದೇಶಿಯ ಮಾರುಕಟ್ಟೆ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಜನಪ್ರಿಯವಾಗಿರುವ ಟೊಯೊಟಾ ಇನೋವಾ ಕ್ರಿಸ್ಟಾ ಕಾರು ಮಾದರಿಯ ಶೀಘ್ರದಲ್ಲೇ ಫೇಸ್‌ಲಿಫ್ಟ್ ಮಾದರಿಯೊಂದಿಗೆ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ನಲ್ಲಿ ಅತ್ಯುತ್ತಮ ಸೇಫ್ಟಿ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದ 2020ರ ಇನೋವಾ

ವಿಶ್ವಾದ್ಯಂತ ಹೊಸ ವಾಹನಗಳ ಸುರಕ್ಷಾ ಸೌಲಭ್ಯಗಳ ಬಗೆಗೆ ಹೆಚ್ಚಿನ ಗಮನಹರಿಸಲಾಗುತ್ತಿದ್ದು, ಅಪಘಾತಗಳ ಸಂದರ್ಭದಲ್ಲಿ ಪ್ರಯಾಣಿಕರ ಜೀವರಕ್ಷಣೆಗೆ ಅತಿಅವಶ್ಯವಿರುವ ಹಲವು ಸುರಕ್ಷಾ ಕ್ರಮಗಳನ್ನು ಕಡ್ಡಾಯಗೊಳಿಸಲಾಗುತ್ತಿದೆ. ಇದೇ ಕಾರಣಕ್ಕೆ ಇತ್ತೀಚೆಗೆ ಬಿಡುಗಡೆಯಾಗುತ್ತಿರುವ ಬಹುತೇಕ ಹೊಸ ವಾಹನಗಳು ವಿವಿಧ ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ರಸ್ತೆಗಿಳಿಯುತ್ತಿದ್ದು, 2020ರ ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರು ಕೂಡಾ ಇದೀಗ ಅತ್ಯುತ್ತಮ ಸೆಫ್ಟಿ ರೇಟಿಂಗ್ಸ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದ 2020ರ ಇನೋವಾ

2004ರಿಂದಲೇ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟಗೊಳ್ಳುತ್ತಿರುವ ಇನೋವಾ ಕಾರು ಕಳೆದ 2016ರಲ್ಲಿ ಹೊಸ ತಲೆಮಾರಿನ ವಿನ್ಯಾಸದೊಂದಿಗೆ ಇನೋವಾ ಕ್ರಿಸ್ಟಾ ಮಾದರಿಯಾಗಿ ಮಾರಾಟಗೊಳ್ಳುತ್ತಿದ್ದು, ಕಾಲಕಾಲಕ್ಕೆ ತಕ್ಕಂತೆ ಹಲವಾರು ಹೊಸ ಬದಲಾಣೆಯೊಂದಿಗೆ ಮಾರುಕಟ್ಟೆಯಲ್ಲಿನ ಎಂಪಿವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದ 2020ರ ಇನೋವಾ

ಮಲ್ಟಿ ಪರ್ಪಸ್ ವೆಹಿಕಲ್ ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ಇನೋವಾ ಕ್ರಿಸ್ಟಾ ಕಾರು ಸದ್ಯ 2020ರ ಆವೃತ್ತಿಯೊಂದಿಗೆ ಬಿಎಸ್-6 ವೈಶಿಷ್ಟ್ಯತೆಗಳನ್ನು ಒಳಗೊಂಡಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಗರಿಷ್ಠ ಮಟ್ಟದ ಸುರಕ್ಷಾ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದ 2020ರ ಇನೋವಾ

ಅಪಘಾತಗಳಲ್ಲಿ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸುವ ಭರವಸೆ ನೀಡಿರುವ ಇನೋವಾ ಕ್ರಿಸ್ಟಾ ಕಾರು ಏಷಿಯನ್ ವಿಭಾಗದ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ನಲ್ಲಿ ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದು, ಮುಂಭಾಗದ ಸಾಲಿನ ಪ್ರಯಾಣಿಕರಿಗೆ ಮಾತ್ರವಲ್ಲದೆ ಹಿಂಬದಿಯ ಪ್ರಯಾಣಿಕರಿಗೂ ಗರಿಷ್ಠ ಸುರಕ್ಷತೆ ಒದಗಿಸುವಲ್ಲಿ ಯಶಸ್ವಿಯಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದ 2020ರ ಇನೋವಾ

ಸದ್ಯ ಭಾರತದಲ್ಲಿ #SAFERCARSFORINDIA ಅಭಿಯಾನದಡಿ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳ ಅಸಲಿಯತ್ತು ಬಯಲು ಮಾಡುತ್ತಿರುವ ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು ಟೊಯೊಟಾ ಇನೋವಾ ಕ್ರಿಸ್ಟಾ ಮಾದರಿಗೆ ಗರಿಷ್ಠ ರೇಟಿಂಗ್ಸ್ ನೀಡಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಕನಿಷ್ಠ 3 ಸ್ಟಾರ್ ರೇಟಿಂಗ್ಸ್ ಪಡೆದುಕೊಳ್ಳುವುದು ಪ್ರತಿ ಕಾರು ಮಾದರಿಗೂ ಕಡ್ಡಾಯವಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದ 2020ರ ಇನೋವಾ

ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು ನಿಗದಿಪಡಿಸಿರುವ ಕನಿಷ್ಠ ರೇಟಿಂಗ್ಸ್ ಪಡೆದುಕೊಳ್ಳುವಲ್ಲಿ ವಿಫಲವಾಗುವ ಕಾರುಗಳ ಮಾರಾಟಕ್ಕೆ ಬ್ರೇಕ್ ಹಾಕಲಾಗುತ್ತಿದ್ದು, ಕೇಂದ್ರ ಸರ್ಕಾರವು ಈ ನಿಟ್ಟಿನಲ್ಲಿ ಹೊಸ ಬದಲಾವಣೆಗಾಗಿ ಕಳೆದ 3 ವರ್ಷಗಳಲ್ಲಿ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳನ್ನು ಕಡ್ಡಾಯಗೊಳಿಸಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇನ್ನು ಟೊಯೊಟಾ ಕಂಪನಿಯು ಇನೋವಾ ಕ್ರಿಸ್ಟಾ ಮಾದರಿಯನ್ನು ಶೀಘ್ರದಲ್ಲೇ ಫೇಸ್‌ಲಿಫ್ಟ್ ಆವೃತ್ತಿಯೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಫೇಸ್‌ಲಿಫ್ಟ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದ 2020ರ ಇನೋವಾ

ಫೇಸ್‌ಲಿಫ್ಟ್ ಆವೃತ್ತಿಯ ಮೂಲಕ ಇನೋವಾ ಕ್ರಿಸ್ಟಾ ಕಾರಿನ ಹೊರಭಾಗ ಮತ್ತು ಒಳಭಾಗದ ವಿನ್ಯಾಸದಲ್ಲಿ ಸಾಕಷ್ಟು ಹೊರ ಬದಲಾವಣೆ ಪರಿಚಯಿಸಿದ್ದು, ಫೇಸ್‌ಲಿಫ್ಟ್ ಆವೃತ್ತಿಯು ಭಾರತದಲ್ಲಿ ಬಿಡುಗಡೆಗೂ ಮುನ್ನ ಇಂಡೋನೇಷ್ಯಾದಲ್ಲಿ ಬಿಡುಗಡೆಯಾಗಲಿದೆ.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ ಪಡೆದ 2020ರ ಇನೋವಾ

ಇಂಡೋನೇಷ್ಯಾದಲ್ಲಿ ಇದೇ ತಿಂಗಳಾಂತ್ಯಕ್ಕೆ ಕಿಜಂಗ್ ಇನೋವಾ ಹೆಸರಿನಲ್ಲಿ ಬಿಡುಗಡೆಯಾಗಲಿರುವ ಇನೋವಾ ಕ್ರಿಸ್ಟಾ ಮಾದರಿಯು ಭಾರತದಲ್ಲಿ 2021ರ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಫೇಸ್‌ಲಿಫ್ಟ್ ಆವೃತ್ತಿ ಮೂಲಕ ಎಂಪಿವಿ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Most Read Articles

Kannada
Read more on ಟೊಯೊಟಾ toyota
English summary
Toyota Innova Gets 5 Star Safety Rating In Asean NCAP Crash Test. Read in Kannada.
Story first published: Monday, October 19, 2020, 21:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X