ಇನೋವಾ ಕ್ರಿಸ್ಟಾ ಎಂಪಿವಿಯಲ್ಲಿ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆ ಟೊಯೊಟಾ

ಇನೋವಾ ಕ್ರಿಸ್ಟಾ ಕಾರು ಗ್ರಾಹಕರ ಬೇಡಿಕೆಯಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಹೊಸ ಕಾರಿನಲ್ಲಿ ಟೊಯೊಟಾ ಕಂಪನಿಯು ಸ್ಪೋರ್ಟಿ ಲುಕ್ ಹೊಂದಿರುವ ಸ್ಪೆಷಲ್ ಎಡಿಷನ್ ಮಾದರಿಯೊಂದನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.

ಇನೋವಾ ಕ್ರಿಸ್ಟಾ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆ ಟೊಯೊಟಾ

ಟೊಯೊಟಾ ಜನಪ್ರಿಯ ಎಂಪಿವಿ ಆವೃತ್ತಿಯಾದ ಇನೋವಾ ಕ್ರಿಸ್ಟಾ ಕಾರು ಹಲವು ವಿಶೇಷತೆಗಳೊಂದಿಗೆ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ದುಬಾರಿ ಬೆಲೆ ನಡುವೆಯೂ ಎಂಪಿವಿ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಗ್ರಾಹಕರ ಬೇಡಿಕೆಯೆಂತೆ ಹಲವಾರು ವೆರಿಯೆಂಟ್ ಹೊಂದಿರುವ ಇನೋವಾ ಕ್ರಿಸ್ಟಾ ಕಾರು, ಶೀಘ್ರದಲ್ಲೇ ಸಿಮಿತ ಅವಧಿಗಾಗಿ ಮತ್ತೊಂದು ಸ್ಪೆಷಲ್ ವೆರಿಯೆಂಟ್ ಪಡೆದುಕೊಳ್ಳಲಿದೆ.

ಇನೋವಾ ಕ್ರಿಸ್ಟಾ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆ ಟೊಯೊಟಾ

ಫಾರ್ಚೂನರ್ ಎಸ್‌ಯುವಿ ಮಾದರಿಯಲ್ಲಿ ಪರಿಚಯಿಸಲಾಗಿರುವ ಡಿಆರ್‌ಡಿ ಸ್ಪೋರ್ಟಿವೊ ಸ್ಪೆಷಲ್ ಎಡಿಷನ್ ಕಾರನ್ನು ಇದೀಗ ಇನೋವಾ ಕ್ರಿಸ್ಟಾ ಕಾರಿನಲ್ಲೂ ಪರಿಚಯಿಸಲಾಗುತ್ತಿದ್ದು, ಹೊಸ ಕಾರು ಮಾದರಿಯು ಈಗಾಗಲೇ ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡಿದೆ.

ಇನೋವಾ ಕ್ರಿಸ್ಟಾ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆ ಟೊಯೊಟಾ

2020ರ ಇನೋವಾ ಕ್ರಿಸ್ಟಾ ಆಧರಿಸಿರುವ ಟಿಆರ್‌ಡಿ ಸ್ಪೋರ್ಟಿವೊ ಸ್ಪೆಷಲ್ ಎಡಿಷನ್ ಮಾದರಿಯು ಸೀಮಿತ ಅವಧಿಗೆ ಮಾತ್ರವೇ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಸ್ಪೋರ್ಟಿ ಲುಕ್ ನೀಡಲಾಗಿದೆ.

ಇನೋವಾ ಕ್ರಿಸ್ಟಾ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆ ಟೊಯೊಟಾ

ಟಿಆರ್‌ಡಿ ಸ್ಪೋರ್ಟಿವೊ ಮಾದರಿಯಲ್ಲಿ ಸ್ಪೋರ್ಟಿ ವಿನ್ಯಾಸದ ಫ್ರಂಟ್ ಮತ್ತು ರಿಯರ್ ಬಂಪರ್ ಮತ್ತು ಗ್ರಿಲ್, ಮುಂಭಾದಲ್ಲಿ ಮತ್ತು ಹಿಂಭಾಗದ ಬ್ರಾಂಡ್ ಬ್ಯಾಡ್ಜ್ ಬಳಿಯಲ್ಲೇ ಟಿಆರ್‌ಡಿ ಸ್ಪೋರ್ಟಿವೊ ಬ್ಯಾಡ್ಜ್, 17-ಇಂಚಿನ ಬ್ಲ್ಯಾಕ್ ಔಟ್ ಅಲಾಯ್ ವೀಲ್ಹ್, ಡೋರ್ ಬಳಿ ಟಿಆರ್‌ಡಿ ಸ್ಪೋರ್ಟಿವೊ ಗ್ರಾಫಿಕ್ಸ್ ಡಿಸೈನ್ ಮತ್ತು ಕಾರಿನ ಭಾಗದಲ್ಲಿ ಸ್ಪೋಟಿ ಬ್ಯಾಡ್ಜ್ ಹೊಂದಿರುವ ಆಸನಗಳು, ಸುಧಾರಿತ ಮಾದರಿಯ ಏರ್‌ ಪ್ಯೂರಿಫ್ಲೈ ಸೌಲಭ್ಯವನ್ನು ನೀಡಲಾಗಿದೆ.

ಇನೋವಾ ಕ್ರಿಸ್ಟಾ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆ ಟೊಯೊಟಾ

ಇದರ ಹೊರತಾಗಿ ಹೊಸ ಕಾರಿನ ಎಂಜಿನ್ ಆಯ್ಕೆಗಳು ಸ್ಪೆಷಲ್ ಎಡಿಷನಲ್ಲೂ ಒಂದೇ ಆಗಿರಲಿದ್ದು, ಸ್ಪೆಷಲ್ ಎಡಿಷನ್ ಮಾದರಿಯ ಮಧ್ಯಮ ಕ್ರಮಾಂಕದ ವೆರಿಯೆಂಟ್‌ನಲ್ಲಿ ಜೋಡಣೆ ಮಾಡುವ ಸಾಧ್ಯತೆಗಳಿವೆ. ಹಾಗೆಯೇ ಹೊಸ ಕಾರಿನ ಬೆಲೆಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ರೂ. 60 ಸಾವಿರದಿಂದ ರೂ. 1 ಲಕ್ಷ ಬೆಲೆ ಪಡೆದುಕೊಳ್ಳಬಹುದು.

ಇನೋವಾ ಕ್ರಿಸ್ಟಾ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆ ಟೊಯೊಟಾ

ಇನ್ನು ಸ್ಟ್ಯಾಂಡರ್ಡ್ ಇನೋವಾ ಕ್ರಿಸ್ಟಾ ಕಾರು ಆವೃತ್ತಿಯು ಬಿಎಸ್-6 ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಆವೃತ್ತಿಗೆ ರೂ.15.67 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.24.68 ಲಕ್ಷ ಬೆಲೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಇನೋವಾ ಕ್ರಿಸ್ಟಾ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆ ಟೊಯೊಟಾ

ಹೊಸ ಎಮಿಷನ್ ಜೊತೆಗೆ ಇನೋವಾ ಕ್ರಿಸ್ಟಾ ಕಾರಿನಲ್ಲಿ ಈ ಬಾರಿ ಹಿಲ್ ಸ್ಟಾರ್ಟ್ ಅಸಿಸ್ಟ್, ಸ್ಟ್ಯಾಬಿಲಿಟಿ ಕಂಟ್ರೋಲ್ ಮತ್ತು ಎಮರ್ಜೆನ್ಸಿ ಬ್ರೇಕಿಂಗ್ ಸಿಗ್ನಲ್ ಸೌಲಭ್ಯಗಳನ್ನು ಪ್ರತಿ ವೆರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಈ ಹಿಂದಿಗಿಂತಲೂ ಹೊಸ ಕಾರು ಹೆಚ್ಚು ಬಲಶಾಲಿಯಾಗಿರುವುದಲ್ಲದೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡಲಿದೆ.

ಇನೋವಾ ಕ್ರಿಸ್ಟಾ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆ ಟೊಯೊಟಾ

ಬಿಎಸ್-6 ಎಮಿಷನ್ ಜಾರಿ ನಂತರ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನಲ್ಲಿ 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆವೃತ್ತಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿರುವ ಟೊಯೊಟಾ ಕಂಪನಿಯು ಈ ಹಿಂದಿನ 2.8-ಲೀಟರ್ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಹೊಸ ಎಮಿಷನ್ ಪ್ರಕಾರ ಸ್ಥಗಿತಗೊಳಿಸಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಇನೋವಾ ಕ್ರಿಸ್ಟಾ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಲಿದೆ ಟೊಯೊಟಾ

2.8-ಲೀಟರ್ ಡೀಸೆಲ್ ಎಂಜಿನ್ ಸ್ಥಗಿತ ನಂತರ ಹೊಸ ಕಾರಿನಲ್ಲಿ ಸಿಎನ್‌ಜಿ ಆಯ್ಕೆಯನ್ನು ಸಹ ನೀಡಲು ಸಿದ್ದತೆ ನಡೆಸುತ್ತಿದ್ದು, ಸಿಎನ್‌ಜಿ ಆವೃತ್ತಿಯು ಡೀಸೆಲ್ ಕಾರಿಗಿಂತಲೂ ತುಸು ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸಲಿದೆ.

Most Read Articles

Kannada
Read more on ಟೊಯೊಟಾ toyota
English summary
Toyota Innova Crysta TRD Sportivo India Launch Details. Read in Kannada.
Story first published: Friday, August 21, 2020, 15:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X