Just In
- 11 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 1 hr ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 2 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- News
ಕಳಪೆ ಮಟ್ಟದಲ್ಲಿ ಲಸಿಕೆ ಅಭಿಯಾನ; ಎರಡು ರಾಜ್ಯಗಳಿಗೆ ಕೇಂದ್ರದ ತರಾಟೆ
- Finance
ಕಾರು ಖರೀದಿಗೆ ಅತ್ಯಂತ ಕಡಿಮೆ ಬಡ್ಡಿ ದರಕ್ಕೆ ಸಾಲ ನೀಡುವ ಬ್ಯಾಂಕ್ ಗಳಿವು
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೂ ಮುನ್ನ ಸ್ಟಾಕ್ ಯಾರ್ಡ್ ತಲುಪಿದ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್ಲಿಫ್ಟ್
ಟೊಯೊಟಾ ಕಂಪನಿಯು ಇದೇ ತಿಂಗಳಾಂತ್ಯಕ್ಕೆ ತನ್ನ ಜನಪ್ರಿಯ ಎಂಪಿವಿ ಕಾರು ಮಾದರಿಯಾದ ಇನೋವಾ ಕ್ರಿಸ್ಟಾ ಫೇಸ್ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ದೇಶದ ಪ್ರಮುಖ ರಾಜ್ಯಗಳಲ್ಲಿರುವ ಸ್ಟಾಕ್ ಯಾರ್ಡ್ಗಳಲ್ಲಿ ಹೊಸ ಫೇಸ್ಲಿಫ್ಟ್ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ.

ಫೇಸ್ಲಿಫ್ಟ್ ಇನೋವಾ ಕ್ರಿಸ್ಟಾ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಮುಂಭಾಗದ ವಿನ್ಯಾಸದಲ್ಲಿ ಹೊಸ ಬದಲಾವಣೆ ಪಡೆದುಕೊಂಡಿದ್ದು, ಹೊಸ ಕಾರು ಮಾದರಿಯ ಖರೀದಿಗಾಗಿ ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಆರಂಭವಾಗಿದೆ.

2016ರಲ್ಲಿ ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗಿದ್ದ ಇನೋವಾ ಕ್ರಿಸ್ಟಾ ಕಾರು ಇದೀಗ ಫೇಸ್ಲಿಫ್ಟ್ ಆವೃತ್ತಿಯ ಮೂಲಕ ಹೊರಭಾಗ ಮತ್ತು ಒಳಭಾಗದ ವಿನ್ಯಾಸದಲ್ಲಿ ಮತ್ತಷ್ಟು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಹೊಸ ಕಾರಿನಲ್ಲಿ ಫ್ಲಕ್ಸ್ ಸಿಲ್ವರ್ ಸ್ಕ್ರೀಡ್ ಪ್ಲೇಟ್, ತ್ರಿಕೋನಾಕಾದಲ್ಲಿರುವ ಹೊಲೊಜೆನ್ ಫಾಗ್ ಲ್ಯಾಂಪ್, ಸಿಲ್ವರ್ ಫೀನಿಷ್ ಹೊಂದಿರುವ 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್ ಹೊಂದಿದ್ದು, ಹಿಂಭಾಗದ ಬಂಪರ್ ಮತ್ತು ಇತರೆ ವಿನ್ಯಾಸದಲ್ಲಿ ಯಾವುದೇ ಹೊಸ ಬದಲಾವಣೆಗಳನ್ನು ತಂದಿಲ್ಲ. ಫೇಸ್ಲಿಫ್ಟ್ ಒಳಭಾಗದ ವಿನ್ಯಾಸವು ಕೂಡಾ ಸಾಕಷ್ಟು ಬದಲಾವಣೆಗೊಂಡಿದ್ದು, ಆಲ್ ಬ್ಲ್ಯಾಕ್ ಥೀಮ್ ಇಂಟಿಯರ್ ಆಕರ್ಷಕವಾಗಿದೆ.

ಸುರಕ್ಷತೆಗಾಗಿ ಪ್ರಸ್ತುತ ಮಾದರಿಯಲ್ಲಿರುವಂತೆಯೇ ಎಬಿಎಸ್ ಜೊತೆಗೆ ಇಬಿಡಿ, 7 ಏರ್ಬ್ಯಾಗ್, ಸ್ಪಿಡ್ ಸೆನ್ಸಾರ್ ಡೋರ್ ಲಾಕ್, ಕ್ರೂಸ್ ಕಂಟ್ರೋಲ್, ವೆಹಿಕಲ್ ಸ್ಟ್ಯಾಬಿಲಿಟಿ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಲೈಟಿಂಗ್ಸ್, ಲೆದರ್ ಆಸನಗಳು, ರಿವರ್ಸ್ ಕ್ಯಾಮೆರಾ ಸೇರಿದಂತೆ ಹಲವಾರು ಸುರಕ್ಷಾ ಸೌಲಭ್ಯಗಳಿವೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ಸದ್ಯ ಇಂಡೋನೇಷ್ಯಾದಲ್ಲಿ ಬಿಡುಗಡೆಯಾಗಿರುವ ಕಿಜಂಗ್ ಇನೋವಾ(ಭಾರತದಲ್ಲಿ ಇನೋವಾ ಕ್ರಿಸ್ಟಾ) ಮಾದರಿಯು 139-ಬಿಎಚ್ಪಿ ಪ್ರೇರಿತ 2.0-ಲೀಟರ್ ಪೆಟ್ರೋಲ್ ಮತ್ತು 149-ಬಿಎಚ್ಪಿ ಪ್ರೇರಿತ 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಭಾರತದಲ್ಲಿ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆವೃತ್ತಿಗಳೊಂದಿಗೆ ಮಾರಾಟವಾಗಲಿದೆ.

ಟೊಯೊಟಾ ಕಂಪನಿಯು ಬಿಎಸ್-6 ಜಾರಿ ನಂತರ ಈ ಹಿಂದಿನ 2.8-ಲೀಟರ್ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಹೊಸ ಎಮಿಷನ್ ಪ್ರಕಾರ ಸ್ಥಗಿತಗೊಳಿಸಿದ್ದು, ಹೊಸ ಕಾರಿನಲ್ಲಿ ಮೊದಲ ಬಾರಿಗೆ ಸಿಎನ್ಜಿ ಆಯ್ಕೆಯನ್ನು ಸಹ ನೀಡುವ ಸಿದ್ದತೆ ನಡೆಸಲಾಗುತ್ತಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಏಪ್ರಿಲ್ 1ರಿಂದಲೇ ಬಿಎಸ್-6 ಎಮಿಷನ್ ಜಾರಿಗೆ ತರಲಾಗಿದ್ದು, ಹೊಸ ನಿಯಮ ಅನುಸಾರವಾಗಿ ಬಹುತೇಕ ಕಾರು ಮಾದರಿಗಳು ಈಗಾಗಲೇ ಎಂಜಿನ್ನೊಂದಿಗೆ ಬಿಡುಗಡೆಗೊಂಡಿವೆ. ಟೊಯೊಟಾ ಕೂಡಾ ಇನೋವಾ ಕ್ರಿಸ್ಟಾ ಸೇರಿದಂತೆ ವಿವಿಧ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್ನೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಕಾರುಗಳ ಎಂಜಿನ್ ಮತ್ತು ಸುರಕ್ಷಾ ಸೌಲಭ್ಯಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ.
Source: Rushlane