ಟೊಯೊಟಾ ಬಿಎಸ್-6 ಕಾರುಗಳ ಖರೀದಿ ಮೇಲೆ ಸ್ಪೆಷಲ್ ಲೋನ್ ಆಫರ್ ಘೋಷಣೆ
ಆಟೋ ಉದ್ಯಮ ಸೇರಿದಂತೆ ಎಲ್ಲಾ ವಲಯದಲ್ಲೂ ಕರೋನಾ ವೈರಸ್ ಮಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟವು ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ. ಸದ್ಯಕ್ಕೆ ಆಟೋ ಉದ್ಯಮಕ್ಕೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದರೂ ಸಹ ವಾಹನ ಖರೀದಿದಾರರು ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಲಾಕ್‌ಡೌನ್‌ನಿಂದಾಗಿ ಬಹುತೇಕ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗದ ಅಭದ್ರತೆ ಇದೀಗ ಅತಿ ದೊಡ್ಡ ಸಮಸ್ಯೆಯಾಗಿ ಕಾಡತೋಡಗಿದೆ. ಹೀಗಿರುವಾಗ ಹೊಸ ವಾಹನಗಳ ಮಾರಾಟವನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಬಹುತೇಕ ಆಟೋ ಕಂಪನಿಗಳು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸುತ್ತಿವೆ. ಟೊಯೊಟಾ ಕೂಡಾ ವಿವಿಧ ಕಾರು ಮಾದರಿಗಳ ಮೇಲೆ ವಿಶೇಷ ಆಫರ್‌ಗಳನ್ನು ಘೋಷಣೆ ಮಾಡಿದೆ.

ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ಹೊಸ ವಾಹನಗಳ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿರುವುದು ಆಟೋ ಕಂಪನಿಗಳನ್ನು ಚಿಂತೆಗೀಡು ಮಾಡಿದೆ.

ಮಾರ್ಚ್ 15ಕ್ಕೂ ಮುನ್ನ ದೇಶಾದ್ಯಂತ ಹೊಸ ವಾಹನಗಳಿಗೆ ಬುಕ್ಕಿಂಗ್ ಮಾಡಿದ್ದ ಗ್ರಾಹಕರಲ್ಲಿ ಸುಮಾರು ಶೇ.60ರಿಂದ ಶೇ.70ರಷ್ಟು ಜನ ಹೊಸ ವಾಹನ ಖರೀದಿಯಿಂದ ಹಿಂದೆ ಸರಿದಿದ್ದು, ಉದ್ಯೋಗದ ಅಭದ್ರತೆ ಮತ್ತು ಆದಾಯಕ್ಕಿಂತ ಖರ್ಚು ಹೆಚ್ಚುತ್ತಿರುವುದರಿಂದ ಹೊಸ ವಾಹನಗಳ ಖರೀದಿಯ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆಯಾಗಿದೆ.

ಇದರಿಂದ ಗ್ರಾಹಕರನ್ನು ಸೆಳೆಯಲು ಆಟೋ ಕಂಪನಿಗಳು ಅತಿ ಸುಲಭವಾದ ಸಾಲ ಸೌಲಭ್ಯ ಸೇರಿದಂತೆ ಹಲವಾರು ಹೊಸ ಆಫರ್ ನೀಡುತ್ತಿದ್ದು, ಟೊಯೊಟಾ ಕೂಡಾ ತನ್ನ ಜನಪ್ರಿಯ ಕಾರುಗಳ ಮೇಲೆ ವಿಶೇಷ ಆಫರ್‌ಗಳನ್ನು ಘೋಷಣೆ ಮಾಡಿ ಗ್ರಾಹಕರ ಸೆಳೆಯುವ ಯತ್ನಯಲ್ಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಕಾರು ಖರೀದಿಯ ನಂತರ 90 ದಿನಗಳ ನಂತರ ಇಎಂಐ ಪಾವತಿ ಶುರು ಮಾಡಬಹುದಾದ ಆಯ್ಕೆ ನೀಡಲಾಗುತ್ತಿದ್ದು, ಸದ್ಯಕ್ಕೆ ಕಾರು ಖರೀದಿ ಸಾಧ್ಯವಿಲ್ಲವೆಂದು ಮುಂದೂಡಿರುವ ಗ್ರಾಹಕರಿಗೆ ಇದು ಅನುಕೂಲಕರವಾಗಿದೆ.

ಹಾಗೆಯೇ ಜಿರೋ ಡೌನ್‌ಪೆಮೆಂಟ್‌ನೊಂದಿಗೆ ಕಾರು ಖರೀದಿ ಮಾಡಿದ ಆರು ತಿಂಗಳ ತನಕ ರೂ.899 ಮಾತ್ರ ಇಎಂಐ ಪಾವತಿ ಮಾಡಬಹುದಾಗಿದ್ದು, ತದನಂತರ ಪೂರ್ಣಪ್ರಮಾಣದ ಇಎಂಐ ಅನ್ವಯವಾಗುವಂತೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಹೊಸ ಆಫರ್ ಟೊಯೊಟಾ ನಿರ್ಮಾಣದ ಬಹುತೇಕ ಕಾರು ಮಾದರಿಗಳ ಮೇಲೆ ಲಭ್ಯವಿದ್ದು, ಯಾರಿಸ್ ಮತ್ತು ಗ್ಲಾಂಝಾ ಕಾರುಗಳ ಮೇಲೆ ಬೈಬ್ಯಾಕ್ ಆಯ್ಕೆ ನೀಡಲಾಗಿದೆ. ಈ ಮೂಲಕ ಗ್ರಾಹಕರ ಸೆಳೆಯುತ್ತಿರುವ ಟೊಯೊಟಾ ಕಂಪನಿಯು ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುವ ನೀರಿಕ್ಷೆಯಿದೆ.


Click it and Unblock the Notifications








