ಕೋವಿಡ್ 19: ಕರ್ನಾಟಕ ಸರ್ಕಾರಕ್ಕೆ ನೆರವು ನೀಡಿದ ಟೊಯೊಟಾ ಕಿರ್ಲೋಸ್ಕರ್
ಮಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿವೆ.

ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಭಾರತ ಸೇರಿ ವಿಶ್ವದ ಹಲವು ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದೆ. ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಗಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧದ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ಭಾರೀ ಪ್ರಮಾಣದ ದೇಣಿಯ ಜೊತೆಗೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಚಾಲನೆ ನೀಡಿವೆ.

ಕರ್ನಾಟಕದಲ್ಲಿರುವ ಪ್ರಮುಖ ಆಟೋ ಉತ್ಪಾದನಾ ಘಟಕಗಳ ಪೈಕಿ ಜನಪ್ರಿಯವಾಗಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕೂಡಾ ಕೇಂದ್ರ ಸರ್ಕಾರಕ್ಕೆ ಮಾತ್ರವಲ್ಲದೇ ರಾಜ್ಯ ಸರ್ಕಾರದ ತುರ್ತು ಪರಿಹಾರ ನಿಧಿಗೆ ರೂ. 2 ಕೋಟಿ ದೇಣಿಗೆ ನೀಡಿದೆ.

ರೂ. 2 ಕೋಟಿ ದೇಣಿಗೆ ಹಣದಲ್ಲಿ ರೂ. 1,35,48,553 ಹಣವನ್ನು ಟೊಯೊಟೊ ಕಂಪನಿ ನೀಡಿದ್ದು, ಇನ್ನುಳಿದ ರೂ. 64,51,447 ಹಣವನ್ನು ಸಿಬ್ಬಂದಿಯಿಂದ ದೇಣಿಗೆ ಸಂಗ್ರಹಿಸಿರುವುದಾಗಿ ಟೊಯೊಟಾ ಕಂಪನಿಯೇ ಪ್ರತಿಕಾ ಪ್ರಕಟಣೆ ಹೊರಡಿಸಿದೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಈ ಮೂಲಕ ಕರೋನಾ ವಿರುದ್ಧ ಹೋರಾಟಕ್ಕೆ ಆಟೋ ಮೊಬೈಲ್ ಕಂಪನಿಗಳು ಅತಿ ಹೆಚ್ಚು ದೇಣಿಗೆ ಘೋಷಣೆ ಮಾಡಿದ್ದು, ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ತಾಂತ್ರಿಕ ಸೌಲಭ್ಯಗಳನ್ನು ಒದಗಿಸುತ್ತಿವೆ.

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿವೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಇನ್ನು ಚೀನಾದಿಂದ ಶುರುವಾದ ಕರೋನಾ ವೈರಸ್ ದಾಳಿಯು ಇದೀಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಇದುವರೆಗೆ 18 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದಲ್ಲದೆ 1.16 ಲಕ್ಷ ಜನ ಪ್ರಾಣಕಳೆದುಕೊಂಡಿದ್ದಾರೆ. ಸೋಂಕಿತರಲ್ಲಿ ಇದುವರೆಗೆ ಸುಮಾರು 4.35 ಲಕ್ಷ ಜನ ಗುಣಮುಖರಾಗಿದ್ದು, ಶೇ.4 ರಷ್ಟು ಸೋಂಕು ಪಿಡಿತರ ಸ್ಥಿತಿ ಶೋಚನೀಯವಾಗಿದೆ.

ಹೀಗಾಗೀ ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.
MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಈ ಹಿನ್ನಲೆಯಲ್ಲಿ ಸದ್ಯಕ್ಕೆ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ್ದು, ವೆಂಟಿಲೆಟರ್, ಮಾಸ್ಕ್, ಟೆಸ್ಟಿಂಗ್ ಕಿಟ್ ಉತ್ಪಾದನೆಗೆ ಪ್ರಮುಖ ಕಾರು ಕಂಪನಿಗಳು ಒಪ್ಪಿಗೆ ಸೂಚಿಸಿವೆ.


Click it and Unblock the Notifications