ಕೋವಿಡ್ 19: ವೈರಸ್ ಪತ್ತೆಗೆ ಮೊಬೈಲ್ ಮೆಡಿಕಲ್ ಯುನಿಟ್ ದೇಣಿಗೆ ನೀಡಿದ ಟೊಯೊಟಾ
ಕರೋನಾ ವೈರಸ್ ವಿರುದ್ಧ ಹೋರಾಟದಲ್ಲಿ ಕೈಜೋಡಿಸಿರುವ ಟೊಯೊಟಾ ಕಂಪನಿಯು ಈಗಾಗಲೇ ರಾಜ್ಯ ಮತ್ತ ಕೇಂದ್ರ ಸರ್ಕಾರಗಳಿಗೆ ಧನ ಸಹಾಯದ ವೈದ್ಯಕೀಯ ಉಪಕರಣಗಳ ಸಹಾಯ ಹಸ್ತ ಚಾಚಿದ್ದು, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ತ್ವರಿತ ಗತಿಯಲ್ಲಿ ವೈರಸ್ ಪತ್ತೆಗಾಗಿ ಮೊಬೈಲ್ ಮೆಡಿಕಲ್ ಯುನಿಟ್ ಅನ್ನು ದೇಣಿಗೆ ನೀಡಿದೆ.

ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಗೆ(ಐಐಎಸ್ಸಿ) ಮೊಬೈಲ್ ಮೆಡಿಕಲ್ ಯುನಿಟ್ ಅನ್ನು ದೇಣಿಯಾಗಿರುವ ನೀಡಿರುವ ಟೊಯೊಟಾ ಕಂಪನಿಯು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ತುರ್ತು ಪರಿಹಾರ ನಿಧಿಗೂ ದೇಣಿಗೆ ನೀಡಿದ್ದು, ಕರ್ನಾಟಕ ಸರ್ಕಾರಕ್ಕೆ ಪ್ರತ್ಯೇಕವಾಗಿ ರೂ.2 ಕೋಟಿ ಹಣಕಾಸಿನ ನೆರವು ನೀಡಿತ್ತು. ಜೊತೆಗೆ ತನ್ನ ಪಾಲುದಾರ ಕಂಪನಿಗಳ ಜೊತೆಗೂಡಿ ಲಾಕ್‌ಡೌನ್ ವೇಳೆ ಹಸಿದವರಿಗೆ ಊಟ ಮತ್ತು ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಗೊಳಿಸಿ ವಿತರಣೆ ಮಾಡಿದೆ.

ಇದೀಗ ಭಾರತೀಯ ವಿಜ್ಞಾನ ಸಂಸ್ಥೆಗೆ ವಿಶೇಷ ಸೌಲಭ್ಯವುಳ್ಳ ಮೊಬೈಲ್ ಮೆಡಿಕಲ್ ಯನಿಟ್ ಅನ್ನು ದೇಣಿಯಾಗಿ ನೀಡಿರುವುದು ಟೆಸ್ಟಿಂಗ್ ಸಂಖ್ಯೆಯನ್ನು ಹೆಚ್ಚಿಸಲು ನೆರವಾಗಲಿದ್ದು, ತ್ವರಿತಗತಿಯಲ್ಲಿ ಟೆಸ್ಟಿಂಗ್ ನಡೆದಲ್ಲಿ ವೈರಸ್ ಹರಡುವಿಕೆಯನ್ನು ಪರಿಣಾಮಕಾರಿ ತಗ್ಗಿಸಬಹುದಾಗಿದೆ.

ವೈದ್ಯಕೀಯ ಅಗತ್ಯಗಳಿಗೆ ಅನುಗುಣವಾಗಿ ಫೋರ್ಸ್ ಟ್ರಾವೆಲರ್ ಅನ್ನು ಮಾಡಿಫೈಗೊಳಿಸಿರುವ ಟೊಯೊಟಾ ಕಂಪನಿಯು ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಜೋಡಣೆ ಮಾಡಿದ್ದು, ವೈರಸ್ ಹೆಚ್ಚಿರುವ ಪ್ರದೇಶಗಳಲ್ಲಿ ನಿಯೋಜನೆ ಮಾಡಲು ಅನುಕೂಲಕರವಾಗಿದೆ.

ಇನ್ನು ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವಾರು ಆಟೋ ಉತ್ಪಾದನಾ ಕಂಪನಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿವೆ.

ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ವಿಶ್ವದ ಬಹುತೇಕ ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿಯು ಸಂಕಷ್ಟಕ್ಕೆ ಸಿಲುಕಿದ್ದ, ಈ ಹಿನ್ನಲೆಯಲ್ಲಿ ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾದ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದೆ.
MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಸಂಕಷ್ಟದಲ್ಲೂ ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧದ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದು, ಆಟೋ ಉತ್ಪಾದನಾ ಕಂಪನಿಗಳ ಕಾರ್ಯವನ್ನು ಯಾರು ಮರೆಯುವಂತಿಲ್ಲ.

ಕರೋನಾ ವಿರುದ್ಧ ಹೋರಾಟಕ್ಕೆ ಆಟೋ ಮೊಬೈಲ್ ಕಂಪನಿಗಳೇ ಅತಿ ಹೆಚ್ಚು ದೇಣಿಗೆ ಘೋಷಣೆ ಮಾಡಿದ್ದು, ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೇಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಿ ವೈರಸ್ ವಿರುದ್ದ ಹೋರಾಡುತ್ತಿರುವ ಸರ್ಕಾರಕ್ಕೆ ಗರಿಷ್ಠ ಸಹಕಾರ ನೀಡಿವೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿವೆ.


Click it and Unblock the Notifications