Just In
- 55 min ago ಸೆಮಿಕಂಡಕ್ಟರ್ ಪೂರೈಸಲು ಟಾಟಾದೊಂದಿಗೆ ಟೆಸ್ಲಾ ಒಪ್ಪಂದ.. ಕೆಲವೇ ದಿನದಲ್ಲಿ ಮೊದಲ ಶೋರೂಂ ಆರಂಭ?
- 3 hrs ago ಹಣದ ವಿಚಾರವಾಗಿ ಜಗಳ: ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಕಾರಿಗೆ ಬೆಂಕಿಯಿಟ್ಟ ಸ್ನೇಹಿತರು
- 16 hrs ago ಈ ಕಾರಿನ್ನು ಖರೀದಿಸಲು ಜನ ಕ್ಯೂ ನಿಲ್ಲುತ್ತಿದ್ರು... ಆದ್ರೆ ಕಳೆದ ತಿಂಗಳಿನಲ್ಲಿ 100ರ ಗಡಿ ದಾಟಲಿಲ್ಲ: ಯಾಕೆ ಗೊತ್ತಾ?
- 17 hrs ago Altroz: ಜನಪ್ರಿಯ ಟಾಟಾ ಆಲ್ಟ್ರೋಜ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- Finance ಮಾರಾಟ ಕುಸಿತ, ಟೆಸ್ಲಾದಿಂದ 14,000 ಉದ್ಯೋಗಿಗಳ ವಜಾ: ವರದಿ
- News Survey: 543ರಲ್ಲಿ ಕೇವಲ 109 ಸ್ಥಾನಕ್ಕೆ ತೃಪ್ತಿ ಪಡಬೇಕಾ ಇಂಡಿಯಾ ಮೈತ್ರಿಕೂಟ!?
- Sports IPL 2024: ಐಪಿಎಲ್ ಮಾತ್ರವಲ್ಲ, ಟಿ20 ಕ್ರಿಕೆಟ್ನಲ್ಲೇ ಇತಿಹಾಸ ಬರೆದ RCB vs SRH ಪಂದ್ಯ!
- Lifestyle ಕೊಟ್ಟಿಗೆಯಲ್ಲಿ ಸಿಕ್ಕಿಬಿತ್ತು ಮೈ ನಡುಗಿಸುವಷ್ಟು ದೈತ್ಯಾಕಾರದ ಹೆಬ್ಬಾವು...!
- Movies ಸಲ್ಮಾನ್ ಖಾನ್ ನಿವಾಸದ ಬಳಿ ಗುಂಡಿನ ದಾಳಿ ಪ್ರಕರಣ; ಇಬ್ಬರು ಶಂಕಿತರ ಬಂಧನ
- Technology Oppo: ಒಪ್ಪೋ A3 ಪ್ರೊ ಸ್ಮಾರ್ಟ್ಫೋನ್ ಲಾಂಚ್! 67W ಫಾಸ್ಟ್ ಚಾರ್ಜಿಂಗ್ ಸೌಲಭ್ಯ... ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ವಿನಾಯ್ತಿ ನಂತರ ಟೊಯೊಟಾ ಕಾರು ಉತ್ಪಾದನೆಗೆ ಅಧಿಕೃತ ಚಾಲನೆ
ಕರೋನಾ ವೈರಸ್ ತಗ್ಗಿಸಲು ಕೇಂದ್ರ ಸರ್ಕಾರವು 4ನೇ ಹಂತದ ಲಾಕ್ಡೌನ್ ಅನ್ನು ಮುಂದುವರಿಸಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಉದ್ಯಮಕ್ಕೆ ಕೆಲವು ವಿನಾಯ್ತಿಗಳನ್ನು ಘೋಷಣೆ ಮಾಡಿದ್ದು, ಟೊಯೊಟಾ ಕಿರ್ಲೋಸ್ಕರ್ ಕಂಪನಿಯು ಕೂಡಾ ಹೊಸ ಮಾರ್ಗಸೂಚಿ ಅನುಸಾರವಾಗಿ ವಾಹನಗಳ ಉತ್ಪಾದನೆಯನ್ನು ಅಧಿಕೃತವಾಗಿ ಪುನಾರಂಭಿಸಿದೆ.
ಲಾಕ್ಡೌನ್ ಅನ್ನು ಮುಂದುವರಿಸಿಕೊಂಡೆ ಎಲ್ಲಾ ವಲಯಗಳಲ್ಲೂ ಕೈಗಾರಿಕೆಗಳ ಉತ್ಪಾದನಾ ಚಟುವಟಿಕೆಗಳಿಗೆ ಷರತ್ತುಬದ್ಧ ಅವಕಾಶ ನೀಡಲಾಗಿದ್ದು, ದೇಶಾದ್ಯಂತ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಕಳೆದ ಎರಡು ತಿಂಗಳ ನಂತರ ವಾಹನ ಉತ್ಪಾದನೆಯನ್ನು ಪುನಾರಂಭಿಸಿವೆ. ಟೊಯೊಟಾ ಕೂಡಾ ಇದೀಗ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ್ದು, ಸೋಂಕು ಹರಡದಂತೆ ಹಲವಾರು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಬೆಂಗಳೂರಿನ ಹೊರವಲಯದಲ್ಲಿರುವ ಬಿಡದಿ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಕಾರುಗಳ ಉತ್ಪಾದನೆ ಪುನಾರಂಭಿಸಿರುವ ಟೊಯೊಟಾ ಕಂಪನಿಯು ಶೇ.33 ಉದ್ಯೋಗಿಗಳೊಂದಿಗೆ ಉತ್ಪಾದನಾ ಪ್ರಕ್ರಿಯೆಗೆ ಮರುಚಾಲನೆ ನೀಡಿದೆ.
ಕೇಂದ್ರ ಸರ್ಕಾರ ನೀಡಿರುವ ಹೊಸ ಗೈಡ್ಲೆನ್ಸ್ ಪ್ರಕಾರ, ಹಸಿರು ಮತ್ತು ಕಿತ್ತಳೆ ವಲಯದಲ್ಲಿರುವ ಮುನ್ಸಿಪಲ್ ಕಾರ್ಪೊರೇಶನ್ ಮಿತಿ ಹೊರಗಿನ ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದ್ದು, ಗರಿಷ್ಠ ಪ್ರಮಾಣದ ಸುರಕ್ಷಾ ಸಾಧನಗಳನ್ನು ಬಳಕೆ ಮಾಡುವುದು ಕಡ್ಡಾಯವಾಗಿದೆ.
ಸದ್ಯ ಉತ್ಪಾದನೆಗೆ ಅನುಮತಿ ಪಡೆದುಕೊಂಡಿರುವ ಕೈಗಾರಿಕಾ ಸಂಸ್ಥೆಗಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದ್ದು, ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರದ ಜೊತೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಮತ್ತು ಹ್ಯಾಂಡ್ ಗ್ಲೌಸ್ ಬಳಕೆಯು ಕಡ್ಡಾಯವಾಗಿರಲಿದೆ.
ಒಟ್ಟಿನಲ್ಲಿ ಇಷ್ಟು ದಿನಗಳ ಕಾಲ ಯಾವುದೇ ಉತ್ಪಾದನಾ ಚಟುವಟಿಕೆಗಳಿಲ್ಲದೆ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದ ಆಟೋ ಕಂಪನಿಗಳಿಗೆ ಇದೀಗ ನೀಡಿರುವ ಕೆಲವು ವಿನಾಯ್ತಿಗಳಿಂದ ಉತ್ಪಾದನೆಗೆ ಮತ್ತೆ ಚಾಲನೆ ಸಿಕ್ಕಿರುವುದು ತುಸು ಸಮಾಧಾನ ತಂದಿದೆ.
ಆದರೆ ಉತ್ಪಾದನಾ ಸ್ಥಳದಲ್ಲಿ ಗರಿಷ್ಠ ಪ್ರಮಾಣದ ಸುರಕ್ಷತೆಯನ್ನು ತೆಗೆದುಕೊಳ್ಳಬೇಕಿರುವುದು ಆಯಾ ಕಂಪನಿಗಳ ಆದ್ಯ ಕರ್ತವ್ಯವಾಗಿದ್ದು, ಆಟೋ ಉತ್ಪಾದನಾ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಗರಿಷ್ಠ ಸುರಕ್ಷತೆ ನೀಡುವ ಖಾತ್ರಿ ವ್ಯಕ್ತಪಡಿಸಿವೆ.
ಇನ್ನು ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡುತ್ತಿವೆ.
ಆಟೋ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆ ಹೆಚ್ಚಿನ ಒತ್ತುನೀಡಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ದೇಣಿಗೆ ಜೊತೆಗೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೇಟರ್ ಉತ್ಪನ್ನಗಳನ್ನು ತಯಾರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಂಚಿಕೆ ಮಾಡಿವೆ.