ಅನಾವರಣಗೊಂಡ ಹೊಸ ಟೊಯೊಟಾ ಹ್ಯಾರಿಯರ್ ಎಸ್‍ಯುವಿ
ಟೊಯೊಟಾ ಕಂಪನಿಯು ತನ್ನ ಬಹುನಿರೀಕ್ಷಿತ ಹ್ಯಾರಿಯರ್ ಎಸ್‍ಯುವಿಯನ್ನು ಜಪಾನಿನ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಅನಾವರಣಗೊಳಿಸಲಾಗಿದೆ, ಕೂಪ್ ಶೈಲಿಯ ಈ ಎಸ್‍ಯುವಿಯನ್ನು 2020ರ ಕೊನೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗಲಿದೆ.

1990ರಲ್ಲಿ ಹ್ಯಾರಿಯರ್ ಎಸ್‍ಯುವಿಯನ್ನು ಮೊದಲ ಬಾರಿಗೆ ಬಿಡುಗಡೆಗೊಳಿಸಲಾಗಿತ್ತು. ಅನಾವರಣಗೊಳಿಸಿದ ಎಸ್‍ಯುವಿಯು ನಾಲ್ಕನೇ ತಲೆಮಾರಿನ ಮಾದರಿಯಾಗಿದೆ. ಟೊಯೊಟಾ ಹ್ಯಾರಿಯರ್ ಮಾಡ್ಯುಲರ್ ಟಿಎನ್‌ಜಿಎ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಹೊಸ ತಲೆಮಾರಿನ ಎಸ್‍ಯುವಿಯು ಸ್ಲೀಕರ್ ವಿನ್ಯಾಸ ಅಂಶಗಳು ಮತ್ತು ಕೂಪ್ ಸಿಲೂಯೆಟ್ ಅನ್ನು ಹೊಂದಿದೆ. ಹ್ಯಾರಿಯರ್ ಎಸ್‍ಯುವಿಯಲ್ಲಿ ಉದ್ದವಾದ ಬಾನೆಟ್ ಅನ್ನು ಅಳವಡಿಸಲಾಗಿದೆ. ಜೆ-ಆಕಾರದ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಎಲ್ಇಡಿ-ಪ್ರೊಜೆಕ್ಟರ್ ಹೆಡ್ ಲ್ಯಾಂಪ್ ಮತ್ತು ಸ್ಲಿಮ್ ಎಲ್ಇಡಿ ಟೈಲ್ ಲೈಟ್ ಗಳನ್ನು ಹೊಂದಿದೆ.

ಹೊಸ ಟೊಯೊಟಾ ಎಸ್‍ಯುವಿಯ ಇಂಟಿರಿಯರ್‍ನಲ್ಲಿ 12.3-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಅನ್ನು ಹೊಂದಿದೆ. ಇದರ ಕೆಳಗೆ ಟಚ್ ಸೆನ್ಸಿಟಿವ್ ಹೆಚ್‌ವಿಎಸಿ ಕಂಟ್ರೋಲ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍ಯುವಿ

ಇನ್ನು ಈ ಹ್ಯಾರಿಯರ್ ಎಸ್‍ಯುವಿಯ ಇಂಟಿರಿಯರ್‍ನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ದೊಡ್ಡ ಎಂಐಡಿ ಡಿಸ್‍ಪ್ಲೇ ಎರಡು ಬದಿಯಲ್ಲಿ ಟ್ವಿನ್ ಡಯಲ್‌ಗಳನ್ನು ಹೊಂದಿದೆ. ಇದರೊಂದಿಗೆ ಎಲೆಕ್ಟ್ರೋಕ್ರೊಮಿಕ್ ಪನೋರಮಿಕ್ ಸನ್‌ರೂಫ್, ಜೆಬಿಎಲ್ ಆಡಿಯೊ ಸಿಸ್ಟಂ ಮತ್ತು ಡಿಜೆಟಲ್ ರೇರ್ ವ್ಯೂ ಮಿರರ್ ಮತ್ತು ಇತರ ಫೀಚರ್‍ಗಳನ್ನು ಹೊಂದಿದೆ.

ಟೊಯೊಟಾ ಹ್ಯಾರಿಯರ್ ಪೆಟ್ರೋಲ್ ಮತ್ತು ಹೈಬ್ರಿಡ್ ಎಂಜಿನ್ ಗಳ ಆಯ್ಕೆಯಲ್ಲಿ ಲಭ್ಯವಿದೆ. ಇದರಲ್ಲಿ 2.0-ಲೀಟರ್ ಡೈರೆಕ್ಟ್-ಇಂಜೆಕ್ಷನ್, ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 170 ಬಿಹೆಚ್ಪಿ ಪವರ್ ಮತ್ತು 207 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಡೈರೆಕ್ಟ್-ಶಿಫ್ಟ್ ಸಿವಿಟಿಯನ್ನು ಜೋಡಿಸಲಾಗಿದೆ.
MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಇನ್ನು ಹೈಬ್ರಿಡ್ ಆವೃತ್ತಿಯಲ್ಲಿ 2.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 175 ಬಿಹೆಚ್ಪಿ ಪವರ್ ಮತ್ತು 221 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಮುಂಭಾಗದ ಟಯರ್‍ನೊಂದಿಗೆ 88ಕಿ.ವ್ಯಾಟ್ ಮೋಟರ್‍ಗೆ ಜೋಡಿಸಲಾಗಿದೆ. ಎರಡು ಆವೃತ್ತಿಗಳನ್ನು ಆಲ್-ವೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿದೆ.

ಸದ್ಯಕ್ಕೆ ಭಾರತದಲ್ಲಿ ಟಿಯೊಟಾ ಹ್ಯಾರಿಯರ್ ಅನ್ನು ಬಿಡುಗಡೆಗೊಳಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ. ಟೊಯೊಟಾ ಕಂಪನಿಯು ಹೊಸ ಫಾರ್ಚೂನರ್ ಫೇಸ್‌ಲಿಫ್ಟ್‌ಅನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.
MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಹೊಸ ಫಾರ್ಚೂನರ್ ಫೇಸ್‌ಲಿಫ್ಟ್ ಕಾರನ್ನು ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಮಾದರಿಯಲ್ಲಿ ಕೆಲವು ಕಾಸ್ಮೆಟಿಕ್ ನವೀಕರಣಗಳನ್ನು ಮಾಡಲಾಗಿದೆ. ಇಂಟಿರಿಯರ್ ನಲ್ಲಿಯು ಕೂಡ ಕೆಲವು ನವೀಕರಣಗಳನ್ನು ಮಾಡಿರಬಹುದು ಎಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ಎಸ್‍ಯುವಿಗಳಿಗೆ ಉತ್ತಮ ಬೇಡಿಕೆ ಇದ್ದರೂ ಸದ್ಯಕ್ಕೆ ಈ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿಲ್ಲ. ಆದರೆ ಮುಂದಿನ ವರ್ಷಗಳಲ್ಲಿ ಟೊಯೊಟಾ ಹ್ಯಾರಿಯರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications








