ಇನೋವಾ ಕ್ರಿಸ್ಟಾ ಕಾರಿಗಿಂತಲೂ ಅಗ್ಗದ ಬೆಲೆಯ ಎಂಪಿವಿ ಬಿಡುಗಡೆ ಮಾಡಲಿದೆ ಟೊಯೊಟಾ

ಮಲ್ಟಿ ಪ್ಯಾಸೆಂಜರ್ ವೆಹಿಕಲ್(ಎಂಪಿವಿ) ಮಾರಾಟ ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ಟೊಯೊಟಾ ಕಂಪನಿಯು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಬಜೆಟ್ ಬೆಲೆಯ ಎಂಪಿವಿ ಮಾದರಿಯೊಂದನ್ನು ಬಿಡುಗಡೆಯ ಯೋಜನೆಯಲ್ಲಿದ್ದು, ಹೊಸ ಕಾರನ್ನು ಮಾರುತಿ ಸುಜುಕಿ ಜೊತೆಗೂಡಿ ನಿರ್ಮಾಣ ಮಾಡಲಿದೆ.

ಇನೋವಾಗಿಂತಲೂ ಅಗ್ಗದ ಬೆಲೆಯ ಎಂಪಿವಿ ಬಿಡುಗಡೆ ಮಾಡಲಿದೆ ಟೊಯೊಟಾ

ಸಹಭಾಗಿತ್ವದ ಯೋಜನೆ ಅಡಿ ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಈಗಾಗಲೇ ಹೊಸ ಕಾರುಗಳ ಉತ್ಪಾದನಾ ಯೋಜನೆಗೆ ಚಾಲನೆ ನೀಡಿರುವುದಲ್ಲದೇ ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆಗೆ ಸಿದ್ದಗೊಳ್ಳುತ್ತಿದ್ದು, ಹೊಸ ವಾಹನಗಳ ಉತ್ಪಾದನಾ ವೆಚ್ಚ ತಗ್ಗಿಸಿ ಕಾರು ಮಾರಾಟ ಹೆಚ್ಚಳಕ್ಕಾಗಿ ಟೊಯೊಟಾ ಕಂಪನಿಯು ಹೊಸ ಪ್ಲ್ಯಾನ್‌ಗೆ ಮುಂದಾಗಿದೆ.

ಇನೋವಾಗಿಂತಲೂ ಅಗ್ಗದ ಬೆಲೆಯ ಎಂಪಿವಿ ಬಿಡುಗಡೆ ಮಾಡಲಿದೆ ಟೊಯೊಟಾ

2017ರಲ್ಲಿ ಮೊದಲ ಬಾರಿಗೆ ಸಹಭಾಗಿತ್ವದ ಯೋಜನೆ ಅಡಿ ರೀಬ್ಯಾಡ್ಜ್ ಕಾರುಗಳ ನಿರ್ಮಾಣಕ್ಕೆ ಚಾಲನೆ ನೀಡಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಮೊದಲ ಹಂತದಲ್ಲಿ ಗ್ಲಾಂಝಾ ಹ್ಯಾಚ್‌ಬ್ಯಾಕ್ ಆವೃತ್ತಿಯನ್ನು ಬಿಡುಗಡೆಗೊಳಿಸಿ ಮಾರಾಟ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ರೀಬ್ಯಾಡ್ಜ್ ಕಾರುಗಳನ್ನು ಬಿಡುಗಡೆ ಮಾಡಲಿವೆ.

ಇನೋವಾಗಿಂತಲೂ ಅಗ್ಗದ ಬೆಲೆಯ ಎಂಪಿವಿ ಬಿಡುಗಡೆ ಮಾಡಲಿದೆ ಟೊಯೊಟಾ

ಸಹಭಾಗಿತ್ವದ ಯೋಜನೆ ಅಡಿ ಒಂದು ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಒಂದು ಎಂಪಿವಿ ಕಾರನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ 2021ಕ್ಕೆ ಬಿಡುಗಡೆಯಾಗಲಿದ್ದರೆ ಎಂಪಿವಿ ಕಾರು 2022ರ ಆರಂಭದಲ್ಲಿ ರಸ್ತೆಗಿಳಿಯಲಿದೆ.

ಇನೋವಾಗಿಂತಲೂ ಅಗ್ಗದ ಬೆಲೆಯ ಎಂಪಿವಿ ಬಿಡುಗಡೆ ಮಾಡಲಿದೆ ಟೊಯೊಟಾ

ಹೊಸ ಬಜೆಟ್ ಎಂಪಿವಿ ಕಾರು ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಅವಾಂಜ್ ಮಾದರಿಯಲ್ಲಿ ಬಿಡುಗಡೆಯಾಗಲಿದ್ದು, ಎರ್ಟಿಗಾ ಮತ್ತು ಇನೋವಾ ಕ್ರಿಸ್ಟಾ ನಡುವಿನ ಸ್ಥಾನ ತುಂಬಲು ಈ ಹೊಸ ಕಾರನ್ನು ಅಭಿವೃದ್ದಿಪಡಿಸಲಾಗುತ್ತಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಇನೋವಾಗಿಂತಲೂ ಅಗ್ಗದ ಬೆಲೆಯ ಎಂಪಿವಿ ಬಿಡುಗಡೆ ಮಾಡಲಿದೆ ಟೊಯೊಟಾ

ಮಾರುತಿ ಎರ್ಟಿಗಾ ಆನ್‌ರೋಡ್ ಪ್ರಕಾರ ರೂ. 9.36 ಲಕ್ಷದಿಂದ ರೂ.12.88 ಲಕ್ಷ ಬೆಲೆ ಹೊಂದಿದ್ದು, ಟೊಯೊಟಾ ಇನೋವಾ ಕ್ರಿಸ್ಟಾ ಕಾರು ಆನ್‌ರೋಡ್ ಪ್ರಕಾರ ರೂ. 19.36 ಲಕ್ಷದಿಂದ ರೂ.30.33 ಲಕ್ಷ ಬೆಲೆ ಹೊಂದಿದೆ.

ಇನೋವಾಗಿಂತಲೂ ಅಗ್ಗದ ಬೆಲೆಯ ಎಂಪಿವಿ ಬಿಡುಗಡೆ ಮಾಡಲಿದೆ ಟೊಯೊಟಾ

ಈ ಎರಡು ಕಾರುಗಳ ನಡುವಿನ ಬೆಲೆಯಲ್ಲಿ ಸಾಕಷ್ಟು ಅಂತರವಿದ್ದು, ಎರಡು ಕಾರುಗಳ ನಡುವಿನ ಬೆಲೆ ಅಂತರವನ್ನು ಸರಿದೂಗಿಸುವುದಕ್ಕಾಗಿ ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಹೊಸ ಎಂಪಿವಿ ಸಿದ್ದಪಡಿಸುತ್ತಿವೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಇನೋವಾಗಿಂತಲೂ ಅಗ್ಗದ ಬೆಲೆಯ ಎಂಪಿವಿ ಬಿಡುಗಡೆ ಮಾಡಲಿದೆ ಟೊಯೊಟಾ

ಹೊಸ ಕಾರು ಆನ್‌ರೋಡ್ ಪ್ರಕಾರ ರೂ.13 ಲಕ್ಷದಿಂದ ರೂ.17 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಮಾರುತಿ ಸುಜುಕಿಯು ಹೊಸದಾಗಿ ಅಭಿವೃದ್ದಿಪಡಿಸುತ್ತಿರುವ 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದೆ.

ಇನೋವಾಗಿಂತಲೂ ಅಗ್ಗದ ಬೆಲೆಯ ಎಂಪಿವಿ ಬಿಡುಗಡೆ ಮಾಡಲಿದೆ ಟೊಯೊಟಾ

ಈ ಮೂಲಕ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳನ್ನು ಖರೀದಿಸುವ ಗ್ರಾಹಕರನ್ನು ಸಹ ಸೆಳೆಯುವ ಯೋಜನೆಯಲ್ಲಿರುವ ಟೊಯೊಟಾ ಮತ್ತು ಮಾರುತಿ ಸುಜುಕಿ ಕಂಪನಿಗಳು ಹೊಸ ಕಾರಿನಲ್ಲಿ ಉತ್ತಮ ಮೈಲೇಜ್ ನೀಡುವ ನೀರಿಕ್ಷೆಯಲ್ಲಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಇನೋವಾಗಿಂತಲೂ ಅಗ್ಗದ ಬೆಲೆಯ ಎಂಪಿವಿ ಬಿಡುಗಡೆ ಮಾಡಲಿದೆ ಟೊಯೊಟಾ

ಈ ಮೂಲಕ ಎಲ್ಲಾ ವರ್ಗದ ಗ್ರಾಹಕರನ್ನು ಆಕರ್ಷಿಸುವ ಹೊಸ ಕಾರು ಎಂಪಿವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದ್ದು, 2022ರ ಆರಂಭದಲ್ಲಿ ಹೊಸ ಕಾರು ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಭ್ಯವಿರಲಿದೆ.

Most Read Articles

Kannada
Read more on ಟೊಯೊಟಾ toyota
English summary
Toyota is working on new C segment MPV car for India and it will be positioned between Ertiga based MPV car and Innova Crysta. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X