ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಟೊಯೊಟಾ ಅರ್ಬನ್ ಕ್ರೂಸರ್ ಟೀಸರ್ ಅನಾವರಣ

ಟೊಯೊಟಾ ಕಂಪನಿಯು ಗ್ಲಾಂಝಾ ನಂತರ ಎರಡನೇ ರೀಬ್ಯಾಡ್ಜ್ ಕಾರು ಮಾದರಿಯಾದ ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಖರೀದಿಗೆ ಅಧಿಕೃತ ಬುಕ್ಕಿಂಗ್ ಆರಂಭಿಸುವುದರ ಜೊತೆಗೆ ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾದ ವಿಡಿಯೋ ಅನಾವರಣಗೊಳಿಸಿದೆ.

ಬಿಡುಗಡೆಯಾಗಲಿರುವ ಟೊಯೊಟಾ ಅರ್ಬನ್ ಕ್ರೂಸರ್ ಟೀಸರ್ ಅನಾವರಣ

ರೀಬ್ಯಾಡ್ಜ್ ಕಾರು ಮಾದರಿಯಾಗಿರುವ ಅರ್ಬನ್ ಕ್ರೂಸರ್ ಕಾರು ವಿಟಾರಾ ಬ್ರೆಝಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಪಡೆದುಕೊಂಡಿರಲಿದ್ದು, ಗ್ಲಾಂಝಾ ನಂತರ ಮತ್ತಷ್ಟು ಹೊಸ ರೀಬ್ಯಾಡ್ಜ್ ಕಾರುಗಳನ್ನು ಬಿಡುಗಡೆ ಮಾಡಲು ಬೃಹತ್ ಯೋಜನೆ ರೂಪಿಸಿರುವ ಟೊಯೊಟಾ ಮತ್ತು ಮಾರುತಿ ಸುಜುಕಿ ಕಂಪನಿಗಳು ಅರ್ಬನ್ ಕ್ರೂಸರ್ ಮೂಲಕ ಕ್ರೆಟಾ ಮತ್ತು ಸೆಲ್ಟೊಸ್ ಕಾರಿಗೆ ಪೈಪೋಟಿ ನೀಡುವ ತವಕದಲ್ಲಿವೆ.

ಬಿಡುಗಡೆಯಾಗಲಿರುವ ಟೊಯೊಟಾ ಅರ್ಬನ್ ಕ್ರೂಸರ್ ಟೀಸರ್ ಅನಾವರಣ

ಟೊಯೊಟಾ ಹೊಸ ಕಾರು ಮಾದರಿಯು ಇತ್ತೀಚೆಗೆ ಜಪಾನ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾದ ರೈಜ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಿಂದಲೂ ಕೆಲವು ವಿನ್ಯಾಸಗಳನ್ನು ಸಹ ಎರವಲು ಪಡೆದುಕೊಂಡಿದ್ದು, ಮೂಲ ಕಾರು ಮಾದರಿಯಾದ ವಿಟಾರಾ ಬ್ರೆಝಾಗಿಂತಲೂ ತುಸು ವಿಭಿನ್ನವಾದ ಹೋಲಿಕೆಯನ್ನು ಪಡೆದುಕೊಳ್ಳಲಿದೆ.

ಹೊಸ ರೀಬ್ಯಾಡ್ಜ್ ಕಾರಿನಲ್ಲಿ ಟೊಯೊಟಾ ಬ್ಯಾಡ್ಜ್‌ನೊಂದಿಗೆ ಟ್ವಿನ್ ಸ್ಲಾಟ್ ಬೋಲ್ಡ್ ಡೈನಾಮಿಕ್ ಗ್ರೀಲ್, ಆಕರ್ಷಕ ಫ್ರಂಟ್ ಬಂಪರ್, ಇನ್ ಬಿಲ್ಟ್ ಫ್ಲಕ್ಸ್ ಬುಲ್ ಬಾರ್, ಫ್ಲಕ್ಸ್ ಸ್ಕೀಡ್ ಪ್ಲೇಟ್ ಜೋಡಣೆ ಮಾಡಲಾಗಿದ್ದು, ಕಾರಿನ ಒಳಭಾಗದಲ್ಲೂ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಬಿಡುಗಡೆಯಾಗಲಿರುವ ಟೊಯೊಟಾ ಅರ್ಬನ್ ಕ್ರೂಸರ್ ಟೀಸರ್ ಅನಾವರಣ

ಹಾಗೆಯೇ ಎಲ್ಇಡಿ ಪ್ರೋಜೆಕ್ಟರ್ ಯನಿಟ್‌ನಲ್ಲಿ ಎಲ್ಇಡಿ ಡಿಆರ್‌ಎಲ್ಎಸ್, ಟರ್ನ್ ಇಂಡಿಕೇಟರ್, 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ರೂಫ್ ಸ್ಪಾಯ್ಲರ್, ಹೈ ಮೌಂಟೆಡ್ ಸ್ಟಾಪ್ ಲ್ಯಾಂಪ್ ನೀಡಲಾಗಿದ್ದು, ಒಳಭಾಗದಲ್ಲಿ 7-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಡ್ಯುಯಲ್ ಟೋನ್ ಇಂಟಿರಿಯರ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ರೈನ್ ಸೆನ್ಸಿಂಗ್ ವೈಪರ್, ಕೀ ಲೆಸ್ ಎಂಟ್ರಿ ನೀಡಲಾಗಿದೆ.

ಬಿಡುಗಡೆಯಾಗಲಿರುವ ಟೊಯೊಟಾ ಅರ್ಬನ್ ಕ್ರೂಸರ್ ಟೀಸರ್ ಅನಾವರಣ

ಪ್ರಯಾಣಿಕ ಸುರಕ್ಷತೆಗಾಗಿ ವಿಟಾರಾ ಬ್ರೆಝಾ ಮಾದರಿಯಲ್ಲೇ ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಲೋಡ್ ಲಿಮಿಟ್ ಅಲರ್ಟ್, ಓವರ್ ಸ್ಪೀಡ್ ವಾರ್ನಿಂಗ್ ಸಿಸ್ಟಂ ನೀಡಲಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಒಟ್ಟು ಒಂಬತ್ತು ಬಣ್ಣಗಳ ಆಯ್ಕೆ(6 ಸಿಂಗಲ್ ಟೋನ್ ಮತ್ತು 3 ಡ್ಯುಯಲ್ ಟೋನ್) ನೀಡಲಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಬಿಡುಗಡೆಯಾಗಲಿರುವ ಟೊಯೊಟಾ ಅರ್ಬನ್ ಕ್ರೂಸರ್ ಟೀಸರ್ ಅನಾವರಣ

ಎಂಜಿನ್ ವೈಶಿಷ್ಟ್ಯತೆ ಮತ್ತು ವಾರಂಟಿ

ಹೊಸ ಅರ್ಬನ್ ಕ್ರೂಸರ್ ಕಾರು ವಿಟಾರಾ ಬ್ರೆಝಾದಲ್ಲಿ ಜೋಡಣೆ ಮಾಡಲಾಗಿರುವ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಹೈಬ್ರಿಡ್ ತಂತ್ರಜ್ಞಾನವನ್ನು ಪಡೆದುಕೊಳ್ಳಲಿದ್ದು, ಪರ್ಫಾಮೆನ್ಸ್ ಜೊತೆಗೆ ಉತ್ತಮ ಇಂಧನ ದಕ್ಷತೆಯನ್ನು ಹೊಂದಿರಲಿದೆ.

ಬಿಡುಗಡೆಯಾಗಲಿರುವ ಟೊಯೊಟಾ ಅರ್ಬನ್ ಕ್ರೂಸರ್ ಟೀಸರ್ ಅನಾವರಣ

ಟೊಯೊಟಾ ಕಂಪನಿಯು ಹೊಸ ಅರ್ಬನ್ ಕ್ರೂಸರ್ ಕಾರಿನ ಮೇಲೆ ಗರಿಷ್ಠ ಮೂರು ವರ್ಷಗಳ ವಾರಂಟಿ ನೀಡಲಿದ್ದು, ಗ್ರಾಹಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಮೂರು ವರ್ಷ ಅಥವಾ 1 ಲಕ್ಷ ಕಿ.ಮೀ ಮೇಲೆ ವಾರಂಟಿ ಆಯ್ಕೆ ಮಾಡಬಹುದಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಬಿಡುಗಡೆಯಾಗಲಿರುವ ಟೊಯೊಟಾ ಅರ್ಬನ್ ಕ್ರೂಸರ್ ಟೀಸರ್ ಅನಾವರಣ

ಇನ್ನು ಜಾರಿಗೆ ಬಂದಿರುವ ಹೊಸ ಬಿಎಸ್-6 ನಿಯಮದಿಂದಾಗಿ ಕಾರು ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆ ತಂದಿರುವ ಟೊಯೊಟಾ ಕಂಪನಿಯು ಯಾರಿಸ್ ಸೆಡಾನ್‌ಗಿಂತಲೂ ಕೆಳಗಿನ ಬಹುತೇಕ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸಿದ್ದು, ಮಾರುತಿ ಸುಜುಕಿ ಕಾರುಗಳನ್ನೇ ರೀಬ್ಯಾಡ್ಜ್ ಆವೃತ್ತಿಯಾಗಿ ಮಾರಾಟ ಮಾಡಲು ನಿರ್ಧರಿಸಿದೆ.

Most Read Articles

Kannada
Read more on ಟೊಯೊಟಾ toyota
English summary
Toyota Released New Promo Video For Upcoming Urban Cruiser. Read in Kannada.
Story first published: Thursday, September 3, 2020, 14:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X