YouTube

ಕಾರು ಉತ್ಪಾದನೆ ಜೊತೆಗೆ ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಪುನಾರಂಭಿಸಿದ ಟೊಯೊಟಾ

ಕರೋನಾ ವೈರಸ್ ತಗ್ಗಿಸಲು ಕೇಂದ್ರ ಸರ್ಕಾರವು ಲಾಕ್‌ಡೌನ್ ಅನ್ನು ಮುಂದುವರಿಸಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಕೈಗಾರಿಕಾ ವಲಯಕ್ಕೆ ಕೆಲವು ವಿನಾಯ್ತಿಗಳನ್ನು ಘೋಷಣೆ ಮಾಡಿದ್ದು, ಟೊಯೊಟಾ ಕಿರ್ಲೋಸ್ಕರ್ ಕಂಪನಿಯು ಕೂಡಾ ಹೊಸ ಮಾರ್ಗಸೂಚಿ ಅನುಸಾರವಾಗಿ ವಾಹನಗಳ ಉತ್ಪಾದನೆಯನ್ನು ಮಾತ್ರವಲ್ಲದೆ ಮಾರಾಟ ಮತ್ತು ಗ್ರಾಹಕರ ಸೇವೆಗಳಿಗೆ ಮರುಚಾಲನೆ ನೀಡಿದೆ.

ಕಾರು ಉತ್ಪಾದನೆ ಜೊತೆಗೆ ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಪುನಾರಂಭಿಸಿದ ಟೊಯೊಟಾ

ಲಾಕ್‌ಡೌನ್ ಅನ್ನು ಮುಂದುವರಿಸಿಕೊಂಡೆ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿರುವ ಕೈಗಾರಿಕೆಗಳ ಉತ್ಪಾದನಾ ಚಟುವಟಿಕೆಗಳಿಗೆ ಷರತ್ತುಬದ್ಧ ಅವಕಾಶ ನೀಡಲಾಗಿದ್ದು, ದೇಶಾದ್ಯಂತ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಕಳೆದ ಒಂದೂವರೆ ತಿಂಗಳ ನಂತರ ವಾಹನ ಉತ್ಪಾದನೆಯನ್ನು ಪುನಾರಂಭಿಸಿವೆ. ಟೊಯೊಟಾ ಕೂಡಾ ಇದೀಗ ಕಾರು ಉತ್ಪಾದನೆ ಮತ್ತು ಮಾರಾಟಕ್ಕೆ ಮರುಚಾಲನೆ ನೀಡಿದ್ದು, ಸೋಂಕು ಹರಡದಂತೆ ಹಲವಾರು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಕಾರು ಉತ್ಪಾದನೆ ಜೊತೆಗೆ ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಪುನಾರಂಭಿಸಿದ ಟೊಯೊಟಾ

ಬೆಂಗಳೂರಿನ ಹೊರವಲಯದಲ್ಲಿರುವ ಬಿಡದಿ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಕಾರುಗಳ ಉತ್ಪಾದನೆ ಆರಂಭಿಸಿರುವ ಟೊಯೊಟಾ ಕಂಪನಿಯು ಶೇ.50ಕ್ಕಿಂತಲೂ ಕಡಿಮೆ ಉದ್ಯೋಗಿಗಳೊಂದಿಗೆ ಉತ್ಪಾದನಾ ಪ್ರಕ್ರಿಯೆಗೆ ಮರುಚಾಲನೆ ನೀಡಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಕಾರು ಉತ್ಪಾದನೆ ಜೊತೆಗೆ ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಪುನಾರಂಭಿಸಿದ ಟೊಯೊಟಾ

ಹಾಗೆಯೇ ಮಾರಾಟ ಮಳಿಗೆಗಳಲ್ಲೂ ಗರಿಷ್ಠ ಸುರಕ್ಷಾ ಮಾರ್ಗಸೂಚಿಗಳೊಂದಿಗೆ ಮಾರಾಟ ತಂತ್ರಗಳನ್ನು ರೂಪಿಸಿದ್ದು, ಗ್ರಾಹಕರ ಆದ್ಯತೆ ಮೇರೆಗೆ ಮನೆ ಬಾಗಿಲಿಗೆ ಸೇವೆಗಳನ್ನು ನೀಡುತ್ತಿದೆ.

ಕಾರು ಉತ್ಪಾದನೆ ಜೊತೆಗೆ ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಪುನಾರಂಭಿಸಿದ ಟೊಯೊಟಾ

ಇನ್ನು ಕೇಂದ್ರ ಸರ್ಕಾರ ನೀಡಿರುವ ಹೊಸ ಗೈಡ್‌ಲೆನ್ಸ್ ಪ್ರಕಾರ, ಹಸಿರು ಮತ್ತು ಕಿತ್ತಳೆ ವಲಯದಲ್ಲಿರುವ ಮುನ್ಸಿಪಲ್ ಕಾರ್ಪೊರೇಶನ್ ಮಿತಿ ಹೊರಗಿನ ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸಲು ಅನುಮತಿ ನೀಡಲಾಗುತ್ತಿದ್ದು, ಗರಿಷ್ಠ ಪ್ರಮಾಣದ ಸುರಕ್ಷಾ ಸಾಧನಗಳನ್ನು ಬಳಕೆ ಮಾಡುವುದು ಕಡ್ಡಾಯವಾಗಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಕಾರು ಉತ್ಪಾದನೆ ಜೊತೆಗೆ ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಪುನಾರಂಭಿಸಿದ ಟೊಯೊಟಾ

ಸದ್ಯ ಉತ್ಪಾದನೆಗೆ ಅನುಮತಿ ಪಡೆದುಕೊಂಡಿರುವ ಆಟೋ ಕಂಪನಿಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದ್ದು, ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರದ ಜೊತೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಮತ್ತು ಹ್ಯಾಂಡ್ ಗ್ಲೌಸ್ ಬಳಕೆಯು ಕಡ್ಡಾಯವಾಗಿರಲಿದೆ.

ಕಾರು ಉತ್ಪಾದನೆ ಜೊತೆಗೆ ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಪುನಾರಂಭಿಸಿದ ಟೊಯೊಟಾ

ಒಟ್ಟಿನಲ್ಲಿ ಇಷ್ಟು ದಿನಗಳ ಕಾಲ ಯಾವುದೇ ಉತ್ಪಾದನಾ ಚಟುವಟಿಕೆಗಳಿಲ್ಲದೆ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದ ಆಟೋ ಕಂಪನಿಗಳಿಗೆ ಇದೀಗ ನೀಡಿರುವ ಕೆಲವು ವಿನಾಯ್ತಿಗಳಿಂದ ಉತ್ಪಾದನೆಗೆ ಮತ್ತೆ ಚಾಲನೆ ಸಿಕ್ಕಿರುವುದು ತುಸು ಸಮಾಧಾನ ತಂದಿದೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಕಾರು ಉತ್ಪಾದನೆ ಜೊತೆಗೆ ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಪುನಾರಂಭಿಸಿದ ಟೊಯೊಟಾ

ಆದರೆ ಉತ್ಪಾದನಾ ಸ್ಥಳದಲ್ಲಿ ಗರಿಷ್ಠ ಪ್ರಮಾಣದ ಸುರಕ್ಷತೆಯನ್ನು ತೆಗೆದುಕೊಳ್ಳಬೇಕಿರುವುದು ಆಯಾ ಕಂಪನಿಗಳ ಜವಾಬ್ದಾರಿಯಾಗಿದ್ದು, ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರ ಜೊತೆಗೆ ಉದ್ಯೋಗಿಗಳಿಗೆ ಗರಿಷ್ಠ ಸುರಕ್ಷತೆ ನೀಡುವ ಖಾತ್ರಿ ವ್ಯಕ್ತಪಡಿಸಿವೆ.

Most Read Articles

Kannada
Read more on ಟೊಯೊಟಾ toyota
English summary
Toyota Kirloskar Motor India Ltd has announced decision to open selected dealerships and vehicle service centres across the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X