ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲೂ ಕುಸಿತ ಕಂಡ ಟೊಯೊಟಾ

ಕರೋನಾ ವೈರಸ್ ಪರಿಣಾಮ ತೀವ್ರವಾಗಿ ಕುಸಿತ ಕಂಡಿದ್ದ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಕೆಲವೇ ಕೆಲವು ಆಟೋ ಕಂಪನಿಗಳ ವಾಹನ ಮಾರಾಟದಲ್ಲಿ ಬೆಳವಣಿಗೆಯನ್ನು ಹೊರತುಪಡಿಸಿ ಹಲವು ಆಟೋ ಕಂಪನಿಗಳ ವಾಹನ ಮಾರಾಟವು ಇನ್ನು ಕೂಡಾ ಕುಸಿತ ಅನುಭವಿಸುತ್ತಿವೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲೂ ಕುಸಿತ ಕಂಡ ಟೊಯೊಟಾ

ಹೊಸ ಕಾರುಗಳ ನೋಂದಣಿಯು 2020ರ ಸೆಪ್ಟೆಂಬರ್ ಅವಧಿಯಲ್ಲಿ ಶೇ.31 ರಷ್ಟು ಬೆಳವಣಿಗೆ ಕಂಡುಬಂದಿದ್ದು, ಟೊಯೊಟಾ ಸೇರಿದಂತೆ ವಿವಿಧ ಕಾರು ಕಂಪನಿಗಳು ಒಟ್ಟು 2,92,894 ಯನಿಟ್ ಕಾರುಗಳನ್ನು ಮಾರಾಟ ಮಾಡಿವೆ. ಇದರಲ್ಲಿ ಕೆಲವು ಹೊಸ ಕಾರು ಕಂಪನಿಗಳ ಮಾರಾಟದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದರೆ ಟೊಯೊಟಾ ಸೇರಿದಂತೆ ಹಲವು ಕಂಪನಿಗಳು ಕಳೆದ ವರ್ಷದ ಸೆಪ್ಟೆಂಬರ್ ಅವಧಿಗಿಂತಲೂ ಹೆಚ್ಚಿನ ಮಟ್ಟದ ಕುಸಿತ ಕಂಡಿವೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲೂ ಕುಸಿತ ಕಂಡ ಟೊಯೊಟಾ

ಟೊಯೊಟಾ ಕಂಪನಿಯು 2020ರ ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟು 8,116 ಯನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ 10,203 ಯುನಿಟ್ ಕಾರುಗಳನ್ನು ಮಾರಾಟ ಮಾಡಿತ್ತು.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲೂ ಕುಸಿತ ಕಂಡ ಟೊಯೊಟಾ

ಕಳೆದ ವರ್ಷಕ್ಕಿಂತ ಈ ವರ್ಷ ಶೇ.20 ರಷ್ಟು ಕಾರು ಮಾರಾಟದಲ್ಲಿ ಕುಸಿತ ಕಂಡಿರುವ ಟೊಯೊಟಾ ಕಂಪನಿಯು ಮುಂಬರುವ ದಿನಗಳಲ್ಲಿನ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುವ ತವಕದಲ್ಲಿದ್ದು, ಹೊಸದಾಗಿ ಬಿಡುಗಡೆಯಾಗಿರುವ ಅರ್ಬನ್ ಕ್ರೂಸರ್ ಕಾರು ಟೊಯೊಟಾ ಕಾರುಗಳ ಮಾರಾಟ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಲ್ಲಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲೂ ಕುಸಿತ ಕಂಡ ಟೊಯೊಟಾ

ಕಳೆದ ವಾರವಷ್ಟೇ ಬಿಡುಗಡೆಯಾಗಿರುವ ಟೊಯೊಟಾ ರೀಬ್ಯಾಡ್ಜ್ ಕಾರು ಮಾದರಿಯಾದ ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಕಂಪನಿಯು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಈಗಾಗಲೇ ಪ್ರಮುಖ ಕಾರು ಮಾರಾಟ ಮಳಿಗೆಗಳಲ್ಲಿ ವಿತರಣೆಗೆ ಸಜ್ಜುಗೊಳಿಸಲಾಗುತ್ತಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲೂ ಕುಸಿತ ಕಂಡ ಟೊಯೊಟಾ

ಅರ್ಬನ್ ಕ್ರೂಸರ್ ಕಾರು ಮಾದರಿಯು ಟೊಯೊಟಾ ಕಂಪನಿಯು ಬಿಡುಗಡೆ ಮಾಡಿರುವ ಹೊಸ ಕಾರ್ ಬ್ರಾಂಡ್ ಮಾದರಿಯಾಗಿದೆ. ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಈ ಹೊಸ ಕಾರು ಮಾರುತಿ-ಸುಜುಕಿ ಜೊತೆಗೂಡಿ ವಿಟಾರಾ ಬ್ರೆಝಾ ಮಾದರಿಯನ್ನ ಆಧರಿಸಿ ಟೊಯೊಟಾ ಕಂಪನಿಯು ನಿರ್ಮಾಣ ಮಾಡಲಾದ ಎರಡನೇ ಕಾರು ಮಾದರಿಯಾಗಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲೂ ಕುಸಿತ ಕಂಡ ಟೊಯೊಟಾ

ಮಿಡ್, ಹೈ ಮತ್ತು ಪ್ರೀಮಿಯಂ ಎಂಬ ಮೂರು ರೂಪಾಂತರ ಹೊಂದಿರುವ ಅರ್ಬನ್ ಕ್ರೂಸರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.40 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.11.30 ಲಕ್ಷ ಬೆಲೆ ಹೊಂದಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲೂ ಕುಸಿತ ಕಂಡ ಟೊಯೊಟಾ

ಟೊಯೊಟಾ ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯಂತೆ ಎಂಜಿನ್ ಆಯ್ಕೆ ಹೊಂದಿದೆ. ಬಿಎಸ್-6 ಪ್ರೇರಿತ ಕೆ-ಸೀರಿಸ್ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 104-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ. ಪೆಟ್ರೋಲ್ ಎಂಜಿನ್ ಮಾದರಿಯು ಆರಂಭಿಕ ಆವೃತ್ತಿಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲೂ ಕುಸಿತ ಕಂಡ ಟೊಯೊಟಾ

ಅರ್ಬನ್ ಕ್ರೂಸರ್ 1.5-ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 17.3ಕಿ.ಮೀ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18.76 ಕಿ.ಮೀ ಮೈಲೇಜ್ ನೀಡಲಿದ್ದು, ಮೈಲೇಜ್ ಅಂಕಿ-ಅಂಶಗಳು ಆಟೋಮೋಟಿವ್ ರಿಸರ್ಚ್ ಅಸೋಸಿಯೇಶನ್ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣೀಕರಿಸಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸೆಪ್ಟೆಂಬರ್ ತಿಂಗಳ ಕಾರು ಮಾರಾಟದಲ್ಲೂ ಕುಸಿತ ಕಂಡ ಟೊಯೊಟಾ

ಪ್ರವೇಶ ಮಟ್ಟದ ಎಸ್‌ಯುವಿ ಆವೃತ್ತಿಯಾಗಿರುವ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ನಿರ್ಮಾಣದ ವಿಟಾರಾ ಬ್ರೆಝಾ ಆಧರಿಸಿ ನಿರ್ಮಾಣವಾದ ಕಾರು ಮಾದರಿಯಾಗಿದೆ. ಮೂಲ ಕಾರು ಮಾದರಿಗಿಂತಲೂ ಹಲವಾರು ಹೊಸ ಫೀಚರ್ಸ್ ಹೊಂದಿರುವ ಅರ್ಬನ್ ಕ್ರೂಸರ್ ಕಾರು ಮಾದರಿಯು ಅತ್ಯುತ್ತಮ ಎಂಜಿನ್ ಪರ್ಫಾಮೆನ್ಸ್, ಹಲವಾರು ಹೊಸ ವೈಶಿಷ್ಟ್ಯತೆಯ ಫೀಚರ್ಸ್‌ಗಳೊಂದಿಗೆ ದಿನನಿತ್ಯದ ಚಾಲನೆಗೆ ಅತ್ಯಂತ ವಿಶ್ವಾಸಾರ್ಹ ಕಾರು ಮಾದರಿಯಾಗಲಿದೆ ಎನ್ನಬಹುದು.

Article Published On: Friday, October 2, 2020, 8:45 [IST]
English summary
Toyota releases September sales report sold 8,116 units details.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+