Just In
Don't Miss!
- News
ಪೊಲೀಸ್ ಠಾಣೆಯಲ್ಲಿ ಬಗೆಹರಿದ ಒಂದು ಕೋಣದ ವಿವಾದ!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದೀಪಾವಳಿ ಸಂಭ್ರಮದ ವೇಳೆ ಭರ್ಜರಿ ಕಾರು ಮಾರಾಟ ಮಾಡಿದ ಟೊಯೊಟಾ
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ನವೆಂಬರ್ ಅವಧಿಯ ಕಾರು ಮಾರಾಟ ವರದರಿಯನ್ನು ಪ್ರಕಟಿಸಿದ್ದು, ಕಂಪನಿಯು ದೀಪಾವಳಿ ಸಂಭ್ರಮಾಚರಣೆಯ ವೇಳೆ ಭಾರೀ ಪ್ರಮಾಣದ ಕಾರು ಮಾರಾಟದೊಂದಿಗೆ ಶೇ.2.4 ರಷ್ಟು ಬೆಳವಣಿಗೆ ಸಾಧಿಸಿದೆ.

ದೇಶಿಯ ಮಾರುಕಟ್ಟೆಯಲ್ಲಿ ಟೊಯೊಟೊ ಕಂಪನಿಯು ನವೆಂಬರ್ ಅವಧಿಯಲ್ಲಿ ಒಟ್ಟು 8,508 ಯುನಿಟ್ ಕಾರು ಮಾರಾಟ ಮಾಡಿದ್ದು, ಕಳೆದ ವರ್ಷದ ನವೆಂಬರ್ ಅವಧಿಯಲ್ಲಿ ಕಾರು ಮಾರಾಟಕ್ಕೆ ಹೋಲಿಕೆ ಮಾಡಿದ್ದಲ್ಲಿ ಶೇ.2.4ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ಕಳೆದ ವರ್ಷದ ನವೆಂಬರ್‌ನಲ್ಲಿ 8,312 ಯುನಿಟ್ ಮಾರಾಟ ಮಾಡಿದ್ದ ಟೊಯೊಟಾ ಕಂಪನಿಯು ಇದೀಗ ಹೊಸ ಕಾರು ಮಾದರಿಗಳ ಮೂಲಕ ಗ್ರಾಹಕರ ಬೇಡಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ದಸರಾ ಮತ್ತು ದೀಪಾವಳಿ ಸಂಭ್ರಮದಲ್ಲಿ ವಾಹನಗಳ ಮಾರಾಟವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಟೊಯೊಟಾ ಕಂಪನಿಯು ಕೂಡಾ ವಿವಿಧ ಕಾರು ಮಾದರಿಗಳ ಮೂಲಕ ಕಾರು ಮಾರಾಟದಲ್ಲಿ ಮುನ್ನಡೆ ಸಾಧಿಸಿದೆ.

ಬಿಎಸ್-6 ಜಾರಿ ಹಿನ್ನಲೆಯಲ್ಲಿ ಇಟಿಯಾಸ್ ಸರಣಿ ಕಾರುಗಳ ಮಾರಾಟವನ್ನು ಸ್ಥಗಿತಗೊಳಿದ ನಂತರ ಕಾರು ಮಾರಾಟದಲ್ಲಿ ಸಾಕಷ್ಟು ಇಳಿಕೆ ಕಂಡಿದ್ದ ಟೊಯೊಟಾ ಕಂಪನಿಯು ರೀಬ್ಯಾಡ್ಜ್ ಕಾರು ಮಾದರಿಗಳಾದ ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್ ಮಾದರಿಗಳ ಮೂಲಕ ಮಾರಾಟ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ.

ಟೊಯೊಟಾ ಕಾರು ಮಾರಾಟದಲ್ಲಿ ಸದ್ಯ ಇನೋವಾ ಕ್ರಿಸ್ಟಾ ಎಂಪಿವಿ ಮಾದರಿಯೇ ಅಗ್ರಸ್ಥಾನದಲ್ಲಿದ್ದು, ತದನಂತರ ಗ್ಲಾಂಝಾ, ಅರ್ಬನ್ ಕ್ರೂಸರ್, ಯಾರಿಸ್, ಫಾರ್ಚೂನರ್, ಕರೊಲ್ಲಾ ಹೈಬ್ರಿಡ್ ಕಾರು ಮಾದರಿಗಳೊಂದಿಗೆ ಐಷಾರಾಮಿ ಮಾದರಿಯಾದ ವೆಲ್‌ಫೈರ್ ಕೂಡಾ ಉತ್ತಮ ಬೇಡಿಕೆ ಪಡೆದುಕೊಂಡಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸದ್ಯ ಇನೋವಾ ಕ್ರಿಸ್ಟಾ ಕಾರು ಮಾದರಿಯು ಫೇಸ್‌ಲಿಫ್ಟ್ ಮಾದರಿಯೊಂದಿಗೆ ಬಿಡುಗಡೆಯಾಗಿದ್ದು, ಹೊಸ ಕಾರು ಮಾದರಿಯು ಕಂಪನಿಯ ಕಾರು ಮಾರಾಟ ಹೆಚ್ಚಳದಲ್ಲಿ ಪ್ರಮುಖ ಪಾತ್ರವಹಿಸಲಿದೆ. ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಬೇಕಿದ್ದ ಫೇಸ್‌ಲಿಫ್ಟ್ ಮಾದರಿಯು ಕಾರಣಾಂತರಗಳಿಂದ ನವೆಂಬರ್ ಕೊನೆಯಲ್ಲಿ ಬಿಡುಗಡೆಯಾಗಿದೆ.

2005ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಇನೋವಾ ಕಾರು ಮಾದರಿಯು ಕಳೆದ 2016ರಲ್ಲಿ ನ್ಯೂ ಜನರೇಷನ್ ಫೀಚರ್ಸ್‌ಗಳೊಂದಿಗೆ ಇನೋವಾ ಕ್ರಿಸ್ಟಾ ಮಾದರಿಯಾಗಿ ಬಿಡುಗಡೆಗೊಂಡಿತ್ತು. ಇದೀಗ ಹೊಸ ಬದಲಾವಣೆಯೊಂದಿಗೆ 2021ರ ಫೇಸ್‌ಲಿಫ್ಟ್ ಮಾದರಿಯನ್ನು ಬಿಡಗಡೆ ಮಾಡಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.26 ಲಕ್ಷದಿಂದ ಟಾಪ್ ಎಂಡ್ ಮಾದರಿಯು 24.33 ಲಕ್ಷ ಬೆಲೆ ಪಡೆದುಕೊಂಡಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಮಾದರಿಯು ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಫೀಚರ್ಸ್ ಅಳವಡಿಕೆ ನಂತರ ಕಾರಿನ ಬೆಲೆಯು ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 60 ಸಾವಿರದಿಂದ ರೂ.70 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದೆ. ಪ್ರೀಮಿಯಂ ಫೀಚರ್ಸ್ ಹೊರತಾಗಿ ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.