Just In
Don't Miss!
- News
ಹುಣಸೋಡು ಜಿಲೆಟಿನ್ ಸ್ಪೋಟ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
- Sports
ಯುವರಾಜ್ ಸಿಂಗ್ ಕೋಚಿಂಗ್ ಬಹಳ ಉಪಯೋಗಕ್ಕೆ ಬಂತು: ಗಿಲ್
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಥಗಿತವಾಗಲಿದೆ ಜನಪ್ರಿಯ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ
ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಟೊಯೊಟಾ ತನ್ನ ಹೊಸ ತಲೆಮಾರಿನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಭರ್ಜರಿಯಾಗಿ ಸಜ್ಜಾಗುತ್ತಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಹಲವಾರು ದಶಕಗಳಿಂದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಸ್‍ಯುವಿಯಾಗಿದೆ.

ಟೊಯೊಟಾ ಕಂಪನಿಯು ಮಾರಾಟಗೊಳಿಸುತ್ತಿರುವ ಪ್ರಸ್ತುತ ಮಾದರಿಯ ಲ್ಯಾಂಡ್ ಕ್ರೂಸರ್ ಅನ್ನು ಅಮೆರಿಕಾದ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸಲು ಮುಂದಾಗಿದೆ ಎಂದು ವರದಿಯಾಗಿದೆ. ಪಸ್ತುತ ತಲೆಮಾರಿನ ಲ್ಯಾಂಡ್ ಕ್ರೂಸರ್ ಸುಮಾರು 13 ವರ್ಷಗಳಿಂದ ಲಭ್ಯವಿರುವ ಮಾದರಿಯಾಗಿದೆ. ಲ್ಯಾಂಡ್ ಕ್ರೂಸರ್ ಎಸ್‍ಯುವಿಯು 2007ರಿಂದ ಅದೇ ವಿನ್ಯಾಸದಲ್ಲಿ ಮಾರಾಟವಾಗುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ತೀವ್ರವಾದ ಪೈಪೋಟಿಯಿಂದಾಗಿ ಹೊಸ ವಿನ್ಯಾಸದಲ್ಲಿ ಹೊಸ ತಲೆಮಾರಿನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು ಟೊಯೊಟಾ ಬಿಡುಗಡೆಗೊಳಿಸಬಹುದು.

ಪ್ರಸ್ತುತ ತಲೆಮಾರಿನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಮುಂದಿನ ವರ್ಷದಲ್ಲಿ ಸ್ಥಗಿತವಾಗಲಿದೆ. ಬಹುದೀರ್ಘ ಕಾಲದಿಂದಲೂ ಟೊಯೊಟಾ ಲ್ಯಾಂಡ್ ಕ್ರೂಸರ್ ಜನಪ್ರಿಯ ಎಸ್‍ಯುವಿಯಾಗಿದೆ. ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಜನಪ್ರಿಯತೆ ಮತ್ತು ಬೇಡಿಕೆಯು ಕಡಿಮೆಯಾಗಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಒಂದು ಕಾಲದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದ ಎಸ್‍ಯುವಿಯಾಗಿದೆ.

ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು 3.3-ಲೀಟರ್ ವಿ6 ಟರ್ಬೊ-ಡೀಸೆಲ್ ಎಂಜಿನ್ ಮತ್ತು 3.5-ಲೀಟರ್ ಟ್ವಿನ್-ಟರ್ಬೊ ವಿ6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ ಎಂದು ಕೆಲವು ವರದಿಗಳಾಗಿದೆ. ಇದರೊಂದಿಗೆ 4.5 ಲೀಟರ್ ವಿ6 ಡೀಸೆಲ್ ಟರ್ಬೂ ಎಂಜಿನ್ ಅನ್ನು ಒಳಗೊಂಡಿರುವ 6 ಸಿಲಿಂಡರ್ ಎಂಜಿನ್ ಅನ್ನು ಹೊಂದಿರುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಪ್ರಸ್ತುತ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿನಲ್ಲಿ ಇರುವ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಬದಲಾಯಿಸುತ್ತದೆ. ಹೊಸ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿನಲ್ಲಿ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಬಹುದು.

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಅನ್ನು ಕಂಪನಿಯ ಟಿಎನ್‌ಜಿಎ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಹೊಸ ಲ್ಯಾಂಡ್ ರೋವರ್ ಲ್ಯಾಡರ್-ಆನ್-ಫ್ರೇಮ್ ಚಾಸಿಸ್ ಅನ್ನು ಹೊಂದಿದೆ. ಹೊಸ ಪ್ಲಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸುತ್ತಿರುವ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ತೂಕದಲ್ಲಿ ಗಮನಾರ್ಹವಾಗಿ ಇಳಿಕೆಯಾಗಬಹುದು. ಇನ್ನು ಪವರ್ ಮತ್ತು ಟಾರ್ಕ್ ಅಂಕಿ ಅಂಶದಲ್ಲಿ ಕೂಡ ಇಳಿಕೆಯಾಗುವ ಸಾಧ್ಯತೆಗಳಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ ಹೊಸ ವಿನ್ಯಾಸವನ್ನು ಹೊಂದಿರುತ್ತದೆ. ಈ ಎಸ್‍ಯುವಿಯಲ್ಲಿ ಹೊಸ ಟ್ರೆಪೆಜಾಯಿಡಲ್ ಗ್ರಿಲ್ ಅನ್ನು ಅಳವಡಿಸಬಹುದು. ಇನ್ನು ಇಂಟಿರಿಯರ್ ನಲ್ಲಿ ಹೊಸ ಫೀಚರ್ಸ್‍ಗಳನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೆಚ್ಚು ಐಷಾರಾಮಿಯಾಗಿಲಿದೆ ಮತ್ತು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ. ಹಿಂದಿನ ತಲೆಮಾರಿಯಂತೆ ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ ಅಸಾಧಾರಣ ಆಫ್-ರೋಡಿಂಗ್ ಸಾಮರ್ಥ್ಯವನ್ನು ಹೊಂದಿರಬಹುದು.

ಹೊಸ ತಲೆಮಾರಿನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಭವಿಷ್ಯದಲ್ಲಿ ಟೊಯೊಟಾ ಕಂಪನಿ ಬಿಡುಗಡೆಗೊಳಿಸಬಹುದು. ಆದರೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷದಲ್ಲಿ ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಬಹುದು.