Just In
Don't Miss!
- News
ಜನಸೇವಕ್ ಸಮಾವೇಶದಲ್ಲಿ ಅಮಿತ್ ಶಾ ಭಾಷಣ; ಮುಖ್ಯಾಂಶಗಳು
- Movies
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
16 ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಮುಂದಾದ ಟೊಯೊಟಾ
ಜಪಾನಿನ ಕಾರು ಕಂಪನಿಯಾದ ಟೊಯೊಟಾ ದೇಶಿಯ ಕಾರು ಮಾರುಕಟ್ಟೆಯಲ್ಲಿರುವ ಅತ್ಯಂತ ವಿಶ್ವಾಸಾರ್ಹ ಕಂಪನಿಗಳಲ್ಲಿ ಒಂದಾಗಿದೆ. ಇನೋವಾ ಕ್ರಿಸ್ಟಾ ಹಾಗೂ ಫಾರ್ಚೂನರ್ ಟೊಯೊಟಾ ಕಂಪನಿಯ ಜನಪ್ರಿಯ ವಾಹನಗಳಾಗಿವೆ.

ಈಗ ಟೊಯೊಟಾ ಕಂಪನಿಯು ತನ್ನ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸಲು ಬಯಸಿದೆ. ಈ ಕಾರಣಕ್ಕೆ ದೇಶಿಯ ಮಾರುಕಟ್ಟೆಯಲ್ಲಿ 16 ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಮುಂದಾಗಿದೆ. ಮುಂದಿನ 3 ವರ್ಷಗಳಲ್ಲಿ ಟೊಯೊಟಾ ಕಂಪನಿಯು 9 ಹೊಸ ಕಾರು ಮಾದರಿಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿದೆ ಎಂದು ವರದಿಯಾಗಿದೆ.

ಎಲ್ಲಾ ರೂಪಾಂತರಗಳಲ್ಲಿಯೂ ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಮೂಲಕ ಮಾರುಕಟ್ಟೆಯನ್ನು ಮತ್ತಷ್ಟು ಬಲಪಡಿಸುವ ಯೋಜನೆಯಲ್ಲಿದೆ. ಟೊಯೊಟಾ ಕಂಪನಿಯು ಸದ್ಯಕ್ಕೆ ಭಾರತದಲ್ಲಿ 7 ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

2023ರ ವೇಳೆಗೆ ಟೊಯೊಟಾ ಕಂಪನಿಯು 9 ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲಿದೆ. ಟೀಮ್ ಬಿಹೆಚ್‌ಪಿ ವರದಿಗಳ ಪ್ರಕಾರ ಟೊಯೊಟಾ 2023ರ ವೇಳೆಗೆ ಭಾರತದಲ್ಲಿ 16 ಕಾರು ಮಾದರಿಗಳನ್ನು ಮಾರಾಟ ಮಾಡಲಿದೆ.

ಹೊಸ ಮಾದರಿಗಳಲ್ಲಿ ಹಿಲಕ್ಸ್ ಪಿಕಪ್ ಟ್ರಕ್, ಆರ್ ಎವಿ 4 ಹಾಗೂ ಕೊರೊಲ್ಲಾ ಕ್ರಾಸ್ ಗಳು ಸೇರಿರಲಿವೆ. ಇವುಗಳ ಜೊತೆಗೆ ಫಾರ್ಚೂನರ್ ಹಾಗೂ ಯಾರಿಸ್ ಕಾರುಗಳ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಸಹ ಬಿಡುಗಡೆಗೊಳಿಸಲಾಗುವುದು.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಟೊಯೊಟಾ ಕಂಪನಿಯು ಸದ್ಯಕ್ಕೆ ಯಾರಿಸ್, ಇನೋವಾ ಕ್ರಿಸ್ಟಾ, ಫಾರ್ಚೂನರ್, ಕ್ಯಾಮ್ರಿ ಹಾಗೂ ವೆಲ್ ಫೈರ್ ವಾಹನಗಳನ್ನು ಮಾರಾಟ ಮಾಡುತ್ತಿದೆ. ಇವುಗಳ ಜೊತೆಗೆ ಮಾರುತಿ ಸುಜುಕಿ ಕಂಪನಿಯ ಬಲೆನೊ ಕಾರನ್ನು ಗ್ಲಾಂಜಾ ಹೆಸರಿನಲ್ಲಿ ಮಾರಾಟ ಮಾಡುತ್ತಿದೆ. ಶೀಘ್ರದಲ್ಲಿಯೇ ಅರ್ಬನ್ ಕ್ರೂಸರ್ ಕಾರನ್ನು ಬಿಡುಗಡೆಗೊಳಿಸಲಿದೆ.

ಟೊಯೊಟಾ ಕಂಪನಿಯು ಮುಂಬರುವ ದಿನಗಳಲ್ಲಿ ಮಾರುತಿ ಸುಜುಕಿ ಕಂಪನಿಯ ಸಹಭಾಗಿತ್ವದಲ್ಲಿ ಸಿಯಾಜ್ ಕಾರಿನ ರೀಬ್ರಾಂಡೆಡ್ ಮಾದರಿ ಹಾಗೂ ಹ್ಯುಂಡೈ ಕ್ರೆಟಾದಂತಹ ಹೊಸ ಎಸ್ ಯುವಿಯನ್ನು ಬಿಡುಗಡೆಗೊಳಿಸಲಿದೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಟೊಯೊಟಾ ಕಂಪನಿಯು 2023ರಿಂದ ಹೊಸ ಕಾರು ಮಾದರಿಗಳೊಂದಿಗೆ ಭಾರತದ ಪ್ರಬಲ ಕಾರು ಕಂಪನಿಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ. ಇದಕ್ಕಾಗಿ ಎಲ್ಲಾ ಯೋಜನೆಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ.