ಲಾಕ್‌ಡೌನ್ ಸಡಿಲಿಕೆ: ಇಂದಿನಿಂದ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ ಟೊಯೊಟಾ
ಕರೋನಾ ವೈರಸ್ ತಗ್ಗಿಸಲು ಕೇಂದ್ರ ಸರ್ಕಾರವು 3ನೇ ಹಂತದ ಲಾಕ್‌ಡೌನ್ ಅನ್ನು ಮುಂದುವರಿಸಿದ್ದರೂ ಪರಿಸ್ಥಿತಿಗೆ ಅನುಗುಣವಾಗಿ ಕೈಗಾರಿಕಾ ವಲಯಕ್ಕೆ ಕೆಲವು ವಿನಾಯ್ತಿಗಳನ್ನು ಘೋಷಣೆ ಮಾಡಿದ್ದು, ಟೊಯೊಟಾ ಕಿರ್ಲೋಸ್ಕರ್ ಕಂಪನಿಯು ಕೂಡಾ ಹೊಸ ಮಾರ್ಗಸೂಚಿ ಅನುಸಾರವಾಗಿ ವಾಹನಗಳ ಉತ್ಪಾದನೆಯನ್ನು ಇಂದಿನಿಂದ ಪುನಾರಂಭಿಸಿದೆ.

3ನೇ ಹಂತದ ಲಾಕ್‌ಡೌನ್ ಅನ್ನು ಮುಂದುವರಿಸಿಕೊಂಡೆ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿರುವ ಕೈಗಾರಿಕೆಗಳ ಉತ್ಪಾದನಾ ಚಟುವಟಿಕೆಗಳಿಗೆ ಷರತ್ತುಬದ್ಧ ಅವಕಾಶ ನೀಡಲಾಗಿದ್ದು, ದೇಶಾದ್ಯಂತ ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಕಳೆದ ಒಂದೂವರೆ ತಿಂಗಳ ನಂತರ ವಾಹನ ಉತ್ಪಾದನೆಯನ್ನು ಪುನಾರಂಭಿಸಿವೆ. ಟೊಯೊಟಾ ಕೂಡಾ ಇದೀಗ ಕಾರು ಉತ್ಪಾದನೆಗೆ ಮರುಚಾಲನೆ ನೀಡಿದ್ದು, ಸೋಂಕು ಹರಡದಂತೆ ಹಲವಾರು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಬೆಂಗಳೂರಿನ ಹೊರವಲಯದಲ್ಲಿರುವ ಬಿಡದಿ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಕಾರುಗಳ ಉತ್ಪಾದನೆ ಆರಂಭಿಸಿರುವ ಟೊಯೊಟಾ ಕಂಪನಿಯು ಶೇ.33 ಉದ್ಯೋಗಿಗಳೊಂದಿಗೆ ಉತ್ಪಾದನಾ ಪ್ರಕ್ರಿಯೆಗೆ ಮರುಚಾಲನೆ ನೀಡಿದೆ.
MOST READ: ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..

ಕೇಂದ್ರ ಸರ್ಕಾರ ನೀಡಿರುವ ಹೊಸ ಗೈಡ್‌ಲೆನ್ಸ್ ಪ್ರಕಾರ, ಹಸಿರು ಮತ್ತು ಕಿತ್ತಳೆ ವಲಯದಲ್ಲಿರುವ ಮುನ್ಸಿಪಲ್ ಕಾರ್ಪೊರೇಶನ್ ಮಿತಿ ಹೊರಗಿನ ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸಲು ಅನುಮತಿ ನೀಡಲಾಗುತ್ತಿದ್ದು, ಗರಿಷ್ಠ ಪ್ರಮಾಣದ ಸುರಕ್ಷಾ ಸಾಧನಗಳನ್ನು ಬಳಕೆ ಮಾಡುವುದು ಕಡ್ಡಾಯವಾಗಿದೆ.

ಸದ್ಯ ಉತ್ಪಾದನೆಗೆ ಅನುಮತಿ ಪಡೆದುಕೊಂಡಿರುವ ಕೈಗಾರಿಕಾ ಸಂಸ್ಥೆಗಳು ಕೇವಲ ಶೇ.33 ರಷ್ಟು ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದ್ದು, ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರದ ಜೊತೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಮತ್ತು ಹ್ಯಾಂಡ್ ಗ್ಲೌಸ್ ಬಳಕೆಯು ಕಡ್ಡಾಯವಾಗಿರಲಿದೆ.

ಒಟ್ಟಿನಲ್ಲಿ ಇಷ್ಟು ದಿನಗಳ ಕಾಲ ಯಾವುದೇ ಉತ್ಪಾದನಾ ಚಟುವಟಿಕೆಗಳಿಲ್ಲದೆ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದ ಆಟೋ ಕಂಪನಿಗಳಿಗೆ ಇದೀಗ ನೀಡಿರುವ ಕೆಲವು ವಿನಾಯ್ತಿಗಳಿಂದ ಉತ್ಪಾದನೆಗೆ ಮತ್ತೆ ಚಾಲನೆ ಸಿಕ್ಕಿರುವುದು ತುಸು ಸಮಾಧಾನ ತಂದಿದೆ.
MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಆದರೆ ಉತ್ಪಾದನಾ ಸ್ಥಳದಲ್ಲಿ ಗರಿಷ್ಠ ಪ್ರಮಾಣದ ಸುರಕ್ಷತೆಯನ್ನು ತೆಗೆದುಕೊಳ್ಳಬೇಕಿರುವುದು ಆಯಾ ಕಂಪನಿಗಳ ಆದ್ಯ ಕರ್ತವ್ಯವಾಗಿದ್ದು, ಆಟೋ ಉತ್ಪಾದನಾ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಗರಿಷ್ಠ ಸುರಕ್ಷತೆ ನೀಡುವ ಖಾತ್ರಿ ವ್ಯಕ್ತಪಡಿಸಿವೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಇನ್ನು ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡುತ್ತಿವೆ.

ಆಟೋ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆ ಹೆಚ್ಚಿನ ಒತ್ತುನೀಡಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ದೇಣಿಗೆ ಜೊತೆಗೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ‍್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೇಟರ್ ಉತ್ಪನ್ನಗಳನ್ನು ತಯಾರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಂಚಿಕೆ ಮಾಡುತ್ತಿವೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಇದರಲ್ಲಿ ಟೊಯೊಟಾ ಕೂಡಾ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಾಕಷ್ಟು ನೆರವು ನೀಡಿದ್ದು, ರಾಜ್ಯ ಸರ್ಕಾರಕ್ಕೆ ರೂ.2 ಕೋಟಿ ದೇಣಿಗೆಯ ಜೊತೆಗೆ ಸಹಭಾಗಿತ್ವ ಸಂಸ್ಥೆಗಳ ಜೊತೆಗೂಡಿ ಪರ್ಸನಲ್ ಪ್ರೋಟೆಕ್ಟಿವ್ ಇಕ್ವಿಪ್‌ಮೆಂಟ್(ಪಿಪಿಇ) ಕಿಟ್ ಉತ್ಪಾದನೆಗೆ ಚಾಲನೆ ನೀಡಿದೆ.


Click it and Unblock the Notifications