Just In
Don't Miss!
- Movies
KSRTC ಬಸ್ಸಿನಲ್ಲಿ ನಿರ್ಮಾಣವಾದ ವಿಶೇಷ ಸ್ತ್ರೀ ಶೌಚಾಲಯ ಪರಿಶೀಲಿಸಿದ ನಟಿ ಶ್ರುತಿ
- News
ಕಬ್ಬನ್ ಉದ್ಯಾನ ವ್ಯಾಪ್ತಿಯಲ್ಲಿ ನಿಯಮಬಾಹಿರ ಕಟ್ಟಡ ನಿರ್ಮಾಣ: ನೋಟಿಸ್
- Lifestyle
ಚಳಿಗಾಲದಲ್ಲಿ ಚರ್ಮದ ರಕ್ಷಣೆಗೆ ಈ ಆಹಾರಗಳನ್ನು ಸೇವಿಸುವುದನ್ನು ಮರೆಯಬೇಡಿ..
- Sports
ಹೊಸ ಪರೀಕ್ಷೆಗೆ ಒಳಗಾಗಬೇಕು ಕ್ರಿಕೆಟ್ ತಾರೆಯರು: 8.30 ನಿಮಿಷದಲ್ಲಿ 2 ಕಿ.ಮೀ ಗುರಿ
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮುಂಬರುವ ಸೆಪ್ಟೆಂಬರ್‌ನಲ್ಲಿ ಹೊಸ ಅರ್ಬನ್ ಕ್ರೂಸರ್ ಬಿಡುಗಡೆ ಪಕ್ಕಾ..!
ಟೊಯೊಟಾ ಕಂಪನಿಯು ರೀಬ್ಯಾಡ್ಜ್ ಕಾರು ಮಾದರಿಯಾದ ಅರ್ಬನ್ ಕ್ರೂಸರ್ ಆವೃತ್ತಿಯ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಸೆಪ್ಟೆಂಬರ್ ಮಧ್ಯಂತರದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್ ಕಾರನ್ನು ಗ್ಲಾಂಝಾ ಎನ್ನುವ ಹೆಸರಿನೊಂದಿಗೆ ರೀಬ್ಯಾಡ್ಜ್ ಆವೃತ್ತಿಯಾಗಿ ಮಾರಾಟ ಮಾಡುತ್ತಿರುವ ಟೊಯೊಟಾ ಕಂಪನಿಯು ಮುಂಬರುವ ಮತ್ತಷ್ಟು ಹೊಸ ರೀಬ್ಯಾಡ್ಜ್ ಕಾರುಗಳನ್ನು ಬಿಡುಗಡೆ ಮಾಡಲು ಬೃಹತ್ ಯೋಜನೆ ರೂಪಿಸಿದೆ. ಗ್ಲಾಂಝಾ ನಂತರ ಇದೀಗ ಕ್ರೆಟಾ ಮತ್ತು ಸೆಲ್ಟೊಸ್ ಕಾರಿಗೆ ಪೈಪೋಟಿಯಾಗಿ ಅರ್ಬನ್ ಕ್ರೂಸರ್ ಮಾದರಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಕಾರು ಖರೀದಿಗಾಗಿ ಅಗಸ್ಟ್ ಮಧ್ಯಂತರದಲ್ಲಿ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗುವ ನೀರಿಕ್ಷೆಯಿದೆ.

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ವಿಟಾರಾ ಬ್ರೆಝಾ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿರಲಿದ್ದು, ಆರಂಭಿಕವಾಗಿ ರೂ.9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ಅರ್ಬನ್ ಕ್ರೂಸರ್ ಎನ್ನುವ ಹೆಸರಿನೊಂದಿಗೆ ಬಿಡುಗಡೆಯಾಗಲಿರುವ ಹೊಸ ಕಾರು 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಹೈಬ್ರಿಡ್ ತಂತ್ರಜ್ಞಾನವನ್ನು ಪಡೆದುಕೊಳ್ಳಲಿದ್ದು, ಪರ್ಫಾಮೆನ್ಸ್ ಜೊತೆಗೆ ಉತ್ತಮ ಇಂಧನ ದಕ್ಷತೆಯನ್ನು ಹೊಂದಿರಲಿದೆ.

ಅರ್ಬನ್ ಕ್ರೂಸರ್ ಮಾದರಿಯು ಇತ್ತೀಚೆಗೆ ಜಪಾನ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿರುವ ಟೊಯೊಟಾ ರೈಜ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಕೆಲವು ವಿನ್ಯಾಸಗಳನ್ನು ಸಹ ಎರವಲು ಪಡೆದುಕೊಂಡಿದ್ದು, ಮೂಲ ಮಾದರಿಯಾದ ವಿಟಾರಾ ಬ್ರೆಝಾಗಿಂತಲೂ ತುಸು ವಿಭಿನ್ನ ಹೋಲಿಕೆಯನ್ನು ಪಡೆದುಕೊಳ್ಳಲಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಸೆಲ್ಟೊಸ್, ಕ್ರೆಟಾ ಮತ್ತು ಎಂಜಿ ಹೆಕ್ಟರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ನಿರ್ಮಾಣದ ಹೊಸ ಕಾರು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದೆ.

ಇನ್ನು ಜಾರಿಗೆ ಬಂದಿರುವ ಹೊಸ ಬಿಎಸ್-6 ನಿಯಮದಿಂದಾಗಿ ಕಾರು ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆ ತಂದಿರುವ ಟೊಯೊಟಾ ಕಂಪನಿಯು ಯಾರಿಸ್ ಸೆಡಾನ್‌ಗಿಂತಲೂ ಕೆಳಗಿನ ಬಹುತೇಕ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸಿದ್ದು, ಮಾರುತಿ ಸುಜುಕಿ ಕಾರುಗಳನ್ನೇ ರೀಬ್ಯಾಡ್ಜ್ ಆವೃತ್ತಿಯಾಗಿ ಮಾರಾಟ ಮಾಡಲು ನಿರ್ಧರಿಸಿದೆ.
MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಸದ್ಯ ಟೊಯೊಟಾ ಕಂಪನಿಯು ಮಾರುತಿ ಸುಜುಕಿಯ ರೀಬ್ಯಾಡ್ಜ್ ಕಾರುಗಳ ಉತ್ಪಾದನೆಗಾಗಿ ಬೆಂಗಳೂರಿನ ಬಿಡದಿ ಘಟಕದಲ್ಲೇ ಅವಕಾಶ ನೀಡಿದ್ದು, ದಕ್ಷಿಣ ಭಾರತದಲ್ಲಿ ಹೊಸ ಕಾರು ಘಟಕ ಸ್ಥಾಪನೆ ಮುಂದಾಗಿದ್ದ ಮಾರುತಿ ಸುಜುಕಿ ಕಂಪನಿಗೆ ತನ್ನದೆ ಘಟಕದಲ್ಲೇ ಅವಕಾಶ ನೀಡುವ ಮೂಲಕ ಜಪಾನ್ ಬ್ರಾಂಡ್‌ಗಳು ಭಾರತದಲ್ಲಿ ಮತ್ತಷ್ಟು ಜನಪ್ರಿಯಗೊಳ್ಳುತ್ತಿವೆ.