ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಸಜ್ಜುಗೊಂಡ ಟೊಯೊಟಾ

ರೀಬ್ಯಾಡ್ಜ್ ಕಾರು ಮಾದರಿಯಾದ ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಟೊಯೊಟಾ ಕಂಪನಿಯು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಈಗಾಗಲೇ ಪ್ರಮುಖ ಕಾರು ಮಾರಾಟ ಮಳಿಗೆಗಳಲ್ಲಿ ವಿತರಣೆಗೆ ಸಜ್ಜುಗೊಳಿಸಲಾಗುತ್ತಿದೆ.

ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಸಜ್ಜುಗೊಂಡ ಟೊಯೊಟಾ

ಅರ್ಬನ್ ಕ್ರೂಸರ್ ಕಾರು ಮಾದರಿಯು ಟೊಯೊಟಾ ಕಂಪನಿಯು ಬಿಡುಗಡೆ ಮಾಡಿರುವ ಹೊಸ ಕಾರ್ ಬ್ರಾಂಡ್ ಮಾದರಿಯಾಗಿದೆ. ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಈ ಹೊಸ ಕಾರು ಮಾರುತಿ-ಸುಜುಕಿ ಜೊತೆಗೂಡಿ ವಿಟಾರಾ ಬ್ರೆಝಾ ಮಾದರಿಯನ್ನು ಆಧರಿಸಿ ಟೊಯೊಟಾ ಕಂಪನಿಯು ನಿರ್ಮಾಣ ಮಾಡಲಾದ ಎರಡನೇ ರೀಬ್ಯಾಡ್ಜ್ ಕಾರು ಮಾದರಿಯಾಗಿದೆ. ಮಿಡ್, ಹೈ ಮತ್ತು ಪ್ರೀಮಿಯಂ ಎಂಬ ಮೂರು ರೂಪಾಂತರ ಹೊಂದಿರುವ ಅರ್ಬನ್ ಕ್ರೂಸರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.40 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.11.30 ಲಕ್ಷ ಬೆಲೆ ಹೊಂದಿದೆ.

ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಸಜ್ಜುಗೊಂಡ ಟೊಯೊಟಾ

ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆ ಹೊಂದಿರುವ ಹೊಸ ಅರ್ಬನ್ ಕ್ರೂಸರ್ ಕಾರು ಮಾದರಿಯು ಎರಡು ಸ್ಲಾಟ್ ಹೊಂದಿರುವ ಫ್ರಂಟ್ ಗ್ರಿಲ್, ಎರಡು ತುದಿಗಳಲ್ಲೂ ದಪ್ಪದಾದ ಕ್ರೊಮ್ ಮೂಲಕ ಆವೃತ್ತವಾಗಿದೆ. ಹೆಡ್‌ಲ್ಯಾಂಪ್‌ಗಳು ಗ್ರಿಲ್‌ನ ಎರಡೂ ಬದಿಯಲ್ಲಿವೆ ಮತ್ತು ಎಲ್‌ಇಡಿ ಪ್ರೊಜೆಕ್ಟರ್ ಘಟಕಗಳನ್ನು ಹೊಂದಿದ್ದು, ಇಂಟಿಗ್ರೇಟೆಡ್ ಎಲ್‌ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ. ಮುಂಭಾಗದ ಬಂಪರ್ ಕೆಳಭಾಗದಲ್ಲಿ ಬ್ಲ್ಯಾಕ್ ಕ್ಲ್ಯಾಡಿಂಗ್‌ನೊಂದಿಗೆ ವಿನ್ಯಾಸಗೊಂಡಿದ್ದು, ಏರ್ ಇನ್‌ಕೆಟ್ ಮತ್ತು ಫಾಗ್ ಲ್ಯಾಂಪ್‌ಗಳು ಎರಡೂ ತುದಿಯಲ್ಲಿರುತ್ತವೆ.

ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಸಜ್ಜುಗೊಂಡ ಟೊಯೊಟಾ

ಅರ್ಬನ್ ಕ್ರೂಸರ್ ಕಾರಿನ ಸೈಡ್ ಪ್ರೊಫೈಲ್ ಮತ್ತು ಹಿಂಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ಕನಿಷ್ಠ ಮಟ್ಟದ ವಿನ್ಯಾಸ ಗುಣಲಕ್ಷಣಗಳಿದ್ದರೂ ಅಚ್ಚುಕಟ್ಟಾದ ವಿನ್ಯಾಸ ಹೊಂದಿದೆ. ಹಾಗೆಯೇ ಇಂಟಿಗ್ರೇಟೆಡ್ ಟರ್ನ್ ಸಿಗ್ನಲ್‌ಗಳೊಂದಿಗೆ ಸ್ಟೈಲಿಶ್ ಆಗಿರುವ 16-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಹ್ ಮತ್ತು ಬಾಡಿ ಕಲರ್ ಒಳಗೊಂಡಿರುವ ಒಆರ್‌ವಿಎಂಗಳು ಪ್ರಮುಖ ತಾಂತ್ರಿಕ ಅಂಶಗಳಾಗಿವೆ.

ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಸಜ್ಜುಗೊಂಡ ಟೊಯೊಟಾ

ಕಾರಿನ ಹಿಂಭಾಗದಲ್ಲಿ ಎಲ್‌ಇಡಿ ಟೈಲ್ ಲೈಟ್‌ಗಳು, ಅದರ ಮೇಲೆ ಆಕರ್ಷಕವಾಗಿರುವ ‘ಅರ್ಬನ್ ಕ್ರೂಸರ್' ಹೆಸರಿನ ಬೋಲ್ಡ್ ಕ್ರೋಮ್ ಸ್ಟ್ರಿಪ್, ಸ್ಟಾಪ್ ಲ್ಯಾಂಪ್ ಹೊಂದಿರುವ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಹಿಂಭಾಗದ ಬಂಪರ್‌ನಲ್ಲಿ ಪ್ರತಿಫಲಕಗಳೊಂದಿಗೆ ಬರುತ್ತದೆ. ಕೆಳಭಾಗದಲ್ಲಿ ಸಿಲ್ವರ್ ಸ್ಕಿಡ್ ಪ್ಲೇಟ್ ಸಹ ಇದ್ದು, ಇದು ಎಸ್‌ಯುವಿ ಹೊರ ನೋಟದ ಬಲಿಷ್ಠತೆಯನ್ನು ಹೆಚ್ಚಿಸುತ್ತದೆ.

ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಸಜ್ಜುಗೊಂಡ ಟೊಯೊಟಾ

ಇನ್ನು ಟೊಯೊಟಾ ಅರ್ಬನ್ ಕ್ರೂಸರ್ ಕಾರಿನಲ್ಲಿ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ಡ್ಯಾಶ್‌ಬೋರ್ಡ್ ಮತ್ತು ಕ್ಯಾಬಿನ್ ವಿನ್ಯಾಸವು ಗಮನಸೆಳೆಯುತ್ತದೆ. ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೋಲ್‌ನಲ್ಲಿರುವ ದೊಡ್ಡ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಇತರ ಹೆಚ್ಚಿನ ತಾಂತ್ರಿಕ ಅಂಶಗಳನ್ನು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯಲ್ಲಿರುವಂತೆಯೆ ಮುಂದುವರಿಸಲಾಗಿದೆ.

ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಸಜ್ಜುಗೊಂಡ ಟೊಯೊಟಾ

ಟೊಯೊಟಾ ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯಂತೆ ಎಂಜಿನ್ ಆಯ್ಕೆ ಹೊಂದಿದೆ. ಬಿಎಸ್-6 ಪ್ರೇರಿತ ಕೆ-ಸೀರಿಸ್ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 104-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ. ಪೆಟ್ರೋಲ್ ಎಂಜಿನ್ ಮಾದರಿಯು ಆರಂಭಿಕ ಆವೃತ್ತಿಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಸಜ್ಜುಗೊಂಡ ಟೊಯೊಟಾ

ಅರ್ಬನ್ ಕ್ರೂಸರ್ 1.5-ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 17.3ಕಿ.ಮೀ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18.76 ಕಿ.ಮೀ ಮೈಲೇಜ್ ನೀಡಲಿದ್ದು, ಮೈಲೇಜ್ ಅಂಕಿ-ಅಂಶಗಳು ಆಟೋಮೋಟಿವ್ ರಿಸರ್ಚ್ ಅಸೋಸಿಯೇಶನ್ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣೀಕರಿಸಲಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಸಜ್ಜುಗೊಂಡ ಟೊಯೊಟಾ

ಅರ್ಬನ್ ಕ್ರೂಸರ್ ಕಾರು ಮಾದರಿಯಲ್ಲಿ ಟೊಯೊಟಾ ಕಂಪನಿಯು ಹಲವಾರು ಬೆಸ್ಟ್ ಇನ್ ಸೆಗ್ಮೆಂಟ್ ಫೀಚರ್ಸ್ ನೀಡಿದ್ದು, ಹೊಸ ಕಾರಿನಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಫಾಗ್ ಲ್ಯಾಂಪ್ಸ್, 16-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಹ್, ಎಲ್ಇಡಿ ಟೈಲ್ ಲೈಟ್ಸ್, 7-ಇಂಚಿನ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡ್ಯುಯಲ್-ಟೋನ್ ಇಂಟಿರಿಯರ್ಸ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಸ್ಟ್ರೀರಿಂಗ್ ಮೌಂಟೆಡ್ ಕಂಟ್ರೋಲ್, ಕೀ ಲೆಸ್ ಇಗ್ನಿಷನ್, ಹಿಂಬದಿಯ ಆಸನದಲ್ಲಿ 60:40 ಅನುಪಾತದ ಸ್ಪ್ಲಿಟ್ ಸೀಟ್, ಆಟೋ ರೈನ್ ಸೆನ್ಸಿಂಗ್ ವೈಪರ್, ವಿದ್ಯುಮಾನ ಪ್ರೇರಿತ ರಿಯಲ್ ವ್ಯೂ ಮಿರರ್ ಮತ್ತು ಇಂಟ್ರಾಗ್ರೆಟೆಡ್ ಟರ್ನ್ ಸಿಗ್ನಲ್ಸ್ ಸೌಲಭ್ಯವಿದೆ.

ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಸಜ್ಜುಗೊಂಡ ಟೊಯೊಟಾ

ಸುರಕ್ಷಾ ಸೌಲಭ್ಯಗಳು

ಹೊಸ ಕಾರಿನಲ್ಲಿ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಹಿಲ್-ಹೋಲ್ಡ್ ಅಸಿಸ್ಟ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವ್ಯೂ ಮಿರರ್ ಜೊತೆ ಪಾರ್ಕಿಂಗ್ ಗೈಡ್‌ಲೆನ್ಸ್, ಸೀಟ್-ಬೆಲ್ಟ್ ಪ್ರಿಟೆನ್ಷನರ್‌ಗಳು ಮತ್ತು ಹೈ-ಸ್ಪೀಡ್ ವಾರ್ನಿಂಗ್ ಸೇರಿ ಹಲವಾರು ಸುರಕ್ಷಾ ಸೌಲಭ್ಯಗಳಿವೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆಗೆ ಸಜ್ಜುಗೊಂಡ ಟೊಯೊಟಾ

ಪ್ರವೇಶ ಮಟ್ಟದ ಎಸ್‌ಯುವಿ ಆವೃತ್ತಿಯಾಗಿರುವ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ನಿರ್ಮಾಣದ ವಿಟಾರಾ ಬ್ರೆಝಾ ಆಧರಿಸಿ ನಿರ್ಮಾಣವಾದ ಕಾರು ಮಾದರಿಯಾಗಿದೆ. ಮೂಲ ಕಾರು ಮಾದರಿಗಿಂತಲೂ ಹಲವಾರು ಹೊಸ ಫೀಚರ್ಸ್ ಹೊಂದಿರುವ ಅರ್ಬನ್ ಕ್ರೂಸರ್ ಕಾರು ಮಾದರಿಯು ಅತ್ಯುತ್ತಮ ಎಂಜಿನ್ ಪರ್ಫಾಮೆನ್ಸ್, ಹಲವಾರು ಹೊಸ ವೈಶಿಷ್ಟ್ಯತೆಯ ಫೀಚರ್ಸ್‌ಗಳೊಂದಿಗೆ ದಿನನಿತ್ಯದ ಚಾಲನೆಗೆ ಅತ್ಯಂತ ವಿಶ್ವಾಸಾರ್ಹ ಕಾರು ಮಾದರಿಯಾಗಲಿದೆ ಎನ್ನಬಹುದು.

Article Published On: Tuesday, October 13, 2020, 17:14 [IST]
English summary
Toyota Urban Cruiser Deliveries To Commence From Later October. Read in Kannada.
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+