ಅರ್ಬನ್ ಕ್ರೂಸರ್ ಕಾರಿನ ಅಧಿಕೃತ ಮಾಹಿತಿ ಬಹಿರಂಗಪಡಿಸಿದ ಟೊಯೊಟಾ

ಟೊಯೊಟೊ ಕಂಪನಿಯು ತನ್ನ ಬಹುನೀರಿಕ್ಷಿತ ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಮುಂದಿನ ತಿಂಗಳು ಸೆಪ್ಟೆಂಬರ್ ಆರಂಭದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನ ಡಿಸೈನ್ ಮತ್ತು ಇತರೆ ತಾಂತ್ರಿಕ ಅಂಶಗಳ ಕುರಿತಾಗಿ ಅಧಿಕೃತ ಮಾಹಿತಿ ಬಹಿರಂಗವಾಗಿದೆ.

ಅರ್ಬನ್ ಕ್ರೂಸರ್ ಕಾರಿನ ಅಧಿಕೃತ ಮಾಹಿತಿ ಬಹಿರಂಗ ಪಡಿಸಿದ ಟೊಯೊಟಾ

ಅರ್ಬನ್ ಕ್ರೂಸರ್ ಕಾರು ವಿಟಾರಾ ಬ್ರೆಝಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಪಡೆದುಕೊಂಡಿರಲಿದ್ದು, ಗ್ಲಾಂಝಾ ರೀಬ್ಯಾಡ್ಜ್ ಕಾರು ಮಾದರಿಯ ನಂತರ ಮತ್ತಷ್ಟು ಹೊಸ ರೀಬ್ಯಾಡ್ಜ್ ಕಾರುಗಳನ್ನು ಬಿಡುಗಡೆ ಮಾಡಲು ಬೃಹತ್ ಯೋಜನೆ ರೂಪಿಸಿರುವ ಟೊಯೊಟಾ ಮತ್ತು ಮಾರುತಿ ಸುಜುಕಿ ಕಂಪನಿಗಳು ಅರ್ಬನ್ ಕ್ರೂಸರ್ ಮೂಲಕ ಕ್ರೆಟಾ ಮತ್ತು ಸೆಲ್ಟೊಸ್ ಕಾರಿಗೆ ಪೈಪೋಟಿ ನೀಡುವ ತವಕದಲ್ಲಿವೆ.

ಅರ್ಬನ್ ಕ್ರೂಸರ್ ಕಾರಿನ ಅಧಿಕೃತ ಮಾಹಿತಿ ಬಹಿರಂಗ ಪಡಿಸಿದ ಟೊಯೊಟಾ

ಟೊಯೊಟಾ ಹೊಸ ಕಾರು ಮಾದರಿಯು ಇತ್ತೀಚೆಗೆ ಜಪಾನ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾದ ರೈಜ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಿಂದಲೂ ಕೆಲವು ವಿನ್ಯಾಸಗಳನ್ನು ಸಹ ಎರವಲು ಪಡೆದುಕೊಂಡಿದ್ದು, ಮೂಲ ಕಾರು ಮಾದರಿಯಾದ ವಿಟಾರಾ ಬ್ರೆಝಾಗಿಂತಲೂ ತುಸು ವಿಭಿನ್ನವಾದ ಹೋಲಿಕೆಯನ್ನು ಪಡೆದುಕೊಳ್ಳಲಿದೆ.

ಅರ್ಬನ್ ಕ್ರೂಸರ್ ಕಾರಿನ ಅಧಿಕೃತ ಮಾಹಿತಿ ಬಹಿರಂಗ ಪಡಿಸಿದ ಟೊಯೊಟಾ

ಹೊಸ ರೀಬ್ಯಾಡ್ಜ್ ಕಾರಿನಲ್ಲಿ ಟೊಯೊಟಾ ಬ್ಯಾಡ್ಜ್‌ನೊಂದಿಗೆ ಟ್ವಿನ್ ಸ್ಲಾಟ್ ಗ್ರೀಲ್, ಆಕರ್ಷಕ ಫ್ರಂಟ್ ಬಂಪರ್, ಇನ್ ಬಿಲ್ಟ್ ಫ್ಲಕ್ಸ್ ಬುಲ್ ಬಾರ್, ಫ್ಲಕ್ಸ್ ಸ್ಕೀಡ್ ಪ್ಲೇಟ್ ಜೋಡಣೆ ಮಾಡಲಾಗಿದ್ದು, ಕಾರಿನ ಒಳಭಾಗದಲ್ಲೂ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಅರ್ಬನ್ ಕ್ರೂಸರ್ ಕಾರಿನ ಅಧಿಕೃತ ಮಾಹಿತಿ ಬಹಿರಂಗ ಪಡಿಸಿದ ಟೊಯೊಟಾ

ಹಾಗೆಯೇ ಎಲ್ಇಡಿ ಪ್ರೋಜೆಕ್ಟರ್ ಯನಿಟ್‌ನಲ್ಲಿ ಡಿಆರ್‌ಎಲ್ಎಸ್, ಟರ್ನ್ ಇಂಡಿಕೇಟರ್, 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ರೂಫ್ ಸ್ಪಾಯ್ಲರ್, ಹೈ ಮೌಂಟೆಡ್ ಸ್ಟಾಪ್ ಲ್ಯಾಂಪ್ ನೀಡಲಾಗಿದ್ದು, ಒಳಭಾಗದಲ್ಲಿ 7-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ರೈನ್ ಸೆನ್ಸಿಂಗ್ ವೈಪರ್, ಕೀ ಲೆಸ್ ಎಂಟ್ರಿ ನೀಡಲಾಗಿದೆ.

ಅರ್ಬನ್ ಕ್ರೂಸರ್ ಕಾರಿನ ಅಧಿಕೃತ ಮಾಹಿತಿ ಬಹಿರಂಗ ಪಡಿಸಿದ ಟೊಯೊಟಾ

ಪ್ರಯಾಣಿಕ ಸುರಕ್ಷತೆಗಾಗಿ ವಿಟಾರಾ ಬ್ರೆಝಾ ಮಾದರಿಯಲ್ಲೇ ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಲೋಡ್ ಲಿಮಿಟ್ ಅಲರ್ಟ್, ಓವರ್ ಸ್ಪೀಡ್ ವಾರ್ನಿಂಗ್ ಸಿಸ್ಟಂ ನೀಡಲಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಒಟ್ಟು ಒಂಬತ್ತು ಬಣ್ಣಗಳ ಆಯ್ಕೆ(6 ಸಿಂಗಲ್ ಟೋನ್ ಮತ್ತು 3 ಡ್ಯುಯಲ್ ಟೋನ್) ನೀಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಅರ್ಬನ್ ಕ್ರೂಸರ್ ಕಾರಿನ ಅಧಿಕೃತ ಮಾಹಿತಿ ಬಹಿರಂಗ ಪಡಿಸಿದ ಟೊಯೊಟಾ

ಎಂಜಿನ್ ವೈಶಿಷ್ಟ್ಯತೆ

ಹೊಸ ಅರ್ಬನ್ ಕ್ರೂಸರ್ ಕಾರು ವಿಟಾರಾ ಬ್ರೆಝಾದಲ್ಲಿ ಜೋಡಣೆ ಮಾಡಲಾಗಿರುವ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಹೈಬ್ರಿಡ್ ತಂತ್ರಜ್ಞಾನವನ್ನು ಪಡೆದುಕೊಳ್ಳಲಿದ್ದು, ಪರ್ಫಾಮೆನ್ಸ್ ಜೊತೆಗೆ ಉತ್ತಮ ಇಂಧನ ದಕ್ಷತೆಯನ್ನು ಹೊಂದಿರಲಿದೆ.

ಅರ್ಬನ್ ಕ್ರೂಸರ್ ಕಾರಿನ ಅಧಿಕೃತ ಮಾಹಿತಿ ಬಹಿರಂಗ ಪಡಿಸಿದ ಟೊಯೊಟಾ

ಇನ್ನು ಜಾರಿಗೆ ಬಂದಿರುವ ಹೊಸ ಬಿಎಸ್-6 ನಿಯಮದಿಂದಾಗಿ ಕಾರು ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆ ತಂದಿರುವ ಟೊಯೊಟಾ ಕಂಪನಿಯು ಯಾರಿಸ್ ಸೆಡಾನ್‌ಗಿಂತಲೂ ಕೆಳಗಿನ ಬಹುತೇಕ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸಿದ್ದು, ಮಾರುತಿ ಸುಜುಕಿ ಕಾರುಗಳನ್ನೇ ರೀಬ್ಯಾಡ್ಜ್ ಆವೃತ್ತಿಯಾಗಿ ಮಾರಾಟ ಮಾಡಲು ನಿರ್ಧರಿಸಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಅರ್ಬನ್ ಕ್ರೂಸರ್ ಕಾರಿನ ಅಧಿಕೃತ ಮಾಹಿತಿ ಬಹಿರಂಗ ಪಡಿಸಿದ ಟೊಯೊಟಾ

ಸದ್ಯ ಟೊಯೊಟಾ ಕಂಪನಿಯು ಮಾರುತಿ ಸುಜುಕಿಯ ರೀಬ್ಯಾಡ್ಜ್ ಕಾರುಗಳ ಉತ್ಪಾದನೆಗಾಗಿ ಬೆಂಗಳೂರಿನ ಬಿಡದಿ ಘಟಕದಲ್ಲೇ ಅವಕಾಶ ನೀಡಿದ್ದು, ದಕ್ಷಿಣ ಭಾರತದಲ್ಲಿ ಹೊಸ ಕಾರು ಘಟಕ ಸ್ಥಾಪನೆ ಮುಂದಾಗಿದ್ದ ಮಾರುತಿ ಸುಜುಕಿ ಕಂಪನಿಗೆ ತನ್ನದೆ ಘಟಕದಲ್ಲೇ ಅವಕಾಶ ನೀಡುವ ಮೂಲಕ ಜಪಾನ್ ಬ್ರಾಂಡ್‌ಗಳು ಭಾರತದಲ್ಲಿ ಮತ್ತಷ್ಟು ಜನಪ್ರಿಯಗೊಳ್ಳುತ್ತಿವೆ.

Most Read Articles

Kannada
Read more on ಟೊಯೊಟಾ toyota
English summary
Toyota Urban Cruiser Interiors Officially Revealed Ahead Of Launch. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X