ಇದೇ ತಿಂಗಳು 22ರಂದು ಬಿಡುಗಡೆಯಾಗಲಿದೆ ಟೊಯೊಟಾ ಅರ್ಬನ್ ಕ್ರೂಸರ್

ಟೊಯೊಟಾ ಕಂಪನಿಯು ತನ್ನದೆ ಎರಡನೇ ರೀಬ್ಯಾಡ್ಜ್ ಕಾರು ಮಾದರಿಯಾಗಿ ಅರ್ಬನ್ ಕ್ರೂಸರ್ ಮಾದರಿಯನ್ನು ಬಿಡುಗಡೆಗಾಗಿ ಸಿದ್ದವಾಗಿದ್ದು, ಇದೇ ತಿಂಗಳು 22ರಂದು ಅಧಿಕೃತವಾಗಿ ಬಿಡುಗಡೆಯಾಗಲಿರುವ ಹೊಸ ಕಾರು ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಇದೇ ತಿಂಗಳು 22ರಂದು ಬಿಡುಗಡೆಯಾಗಲಿದೆ ಟೊಯೊಟಾ ಅರ್ಬನ್ ಕ್ರೂಸರ್

ಮಾರುತಿ ಸುಜುಕಿ ನಿರ್ಮಾಣದ ವಿಟಾರಾ ಬ್ರೆಝಾ ಪ್ಲ್ಯಾಟ್‍ಫಾರ್ಮ್ ಆಧರಿಸಿರುವ ಟೊಯೊಟಾ ಅರ್ಬನ್ ಕ್ರೂಸರ್ ಮಾದರಿಯು ಟೊಯೊಟಾ ಕಂಪನಿಯ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ಹೊಸ ಬ್ರಾಂಡ್ ಕಾರು ಮಾದರಿಯಲ್ಲೇ ರೀಬ್ಯಾಡ್ಜ್ ಕಾರು ಆವೃತ್ತಿಯು ರಸ್ತೆಗಿಳಿಯಲಿದೆ. ಗ್ಲಾಂಝಾ ರೀಬ್ಯಾಡ್ಜ್ ಕಾರು ಮಾದರಿಯ ನಂತರ ಮತ್ತಷ್ಟು ಹೊಸ ರೀಬ್ಯಾಡ್ಜ್ ಕಾರುಗಳನ್ನು ಬಿಡುಗಡೆ ಮಾಡಲು ಬೃಹತ್ ಯೋಜನೆ ರೂಪಿಸಿರುವ ಟೊಯೊಟಾ ಮತ್ತು ಮಾರುತಿ ಸುಜುಕಿ ಕಂಪನಿಗಳು ಅರ್ಬನ್ ಕ್ರೂಸರ್ ಮೂಲಕ ಕ್ರೆಟಾ ಮತ್ತು ಸೆಲ್ಟೊಸ್ ಕಾರಿಗೆ ಪೈಪೋಟಿ ನೀಡುವ ತವಕದಲ್ಲಿವೆ.

ಇದೇ ತಿಂಗಳು 22ರಂದು ಬಿಡುಗಡೆಯಾಗಲಿದೆ ಟೊಯೊಟಾ ಅರ್ಬನ್ ಕ್ರೂಸರ್

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ವಿಟಾರಾ ಬ್ರೆಝಾ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿರಲಿದ್ದು, ಆರಂಭಿಕವಾಗಿ ರೂ.9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

ಇದೇ ತಿಂಗಳು 22ರಂದು ಬಿಡುಗಡೆಯಾಗಲಿದೆ ಟೊಯೊಟಾ ಅರ್ಬನ್ ಕ್ರೂಸರ್

ಅರ್ಬನ್ ಕ್ರೂಸರ್ ಎನ್ನುವ ಹೆಸರಿನೊಂದಿಗೆ ಬಿಡುಗಡೆಯಾಗಲಿರುವ ಹೊಸ ಕಾರು 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಹೈಬ್ರಿಡ್ ತಂತ್ರಜ್ಞಾನವನ್ನು ಪಡೆದುಕೊಳ್ಳಲಿದ್ದು, ಪರ್ಫಾಮೆನ್ಸ್ ಜೊತೆಗೆ ಉತ್ತಮ ಇಂಧನ ದಕ್ಷತೆಯನ್ನು ಹೊಂದಿರಲಿದೆ.

ಇದೇ ತಿಂಗಳು 22ರಂದು ಬಿಡುಗಡೆಯಾಗಲಿದೆ ಟೊಯೊಟಾ ಅರ್ಬನ್ ಕ್ರೂಸರ್

ಅರ್ಬನ್ ಕ್ರೂಸರ್ ಮಾದರಿಯು ಇತ್ತೀಚೆಗೆ ಜಪಾನ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿರುವ ಟೊಯೊಟಾ ರೈಜ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಕೆಲವು ವಿನ್ಯಾಸಗಳನ್ನು ಸಹ ಎರವಲು ಪಡೆದುಕೊಂಡಿದ್ದು, ಮೂಲ ಮಾದರಿಯಾದ ವಿಟಾರಾ ಬ್ರೆಝಾಗಿಂತಲೂ ತುಸು ವಿಭಿನ್ನವಾದ ಹೋಲಿಕೆಯನ್ನು ಪಡೆದುಕೊಳ್ಳಲಿದೆ.

ಇದೇ ತಿಂಗಳು 22ರಂದು ಬಿಡುಗಡೆಯಾಗಲಿದೆ ಟೊಯೊಟಾ ಅರ್ಬನ್ ಕ್ರೂಸರ್

ಹೊಸ ರೀಬ್ಯಾಡ್ಜ್ ಕಾರಿನಲ್ಲಿ ಟೊಯೊಟಾ ಬ್ಯಾಡ್ಜ್‌ನೊಂದಿಗೆ ಟ್ವಿನ್ ಸ್ಲಾಟ್ ಗ್ರೀಲ್, ಆಕರ್ಷಕ ಫ್ರಂಟ್ ಬಂಪರ್, ಇನ್ ಬಿಲ್ಟ್ ಫ್ಲಕ್ಸ್ ಬುಲ್ ಬಾರ್, ಫ್ಲಕ್ಸ್ ಸ್ಕೀಡ್ ಪ್ಲೇಟ್ ಜೋಡಣೆ ಮಾಡಲಾಗಿದ್ದು, ಕಾರಿನ ಒಳಭಾಗದಲ್ಲೂ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಇದೇ ತಿಂಗಳು 22ರಂದು ಬಿಡುಗಡೆಯಾಗಲಿದೆ ಟೊಯೊಟಾ ಅರ್ಬನ್ ಕ್ರೂಸರ್

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಸೆಲ್ಟೊಸ್, ಕ್ರೆಟಾ ಮತ್ತು ಎಂಜಿ ಹೆಕ್ಟರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ನಿರ್ಮಾಣದ ಹೊಸ ಕಾರು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದೆ.

ಇದೇ ತಿಂಗಳು 22ರಂದು ಬಿಡುಗಡೆಯಾಗಲಿದೆ ಟೊಯೊಟಾ ಅರ್ಬನ್ ಕ್ರೂಸರ್

ಇನ್ನು ಜಾರಿಗೆ ಬಂದಿರುವ ಹೊಸ ಬಿಎಸ್-6 ನಿಯಮದಿಂದಾಗಿ ಕಾರು ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆ ತಂದಿರುವ ಟೊಯೊಟಾ ಕಂಪನಿಯು ಯಾರಿಸ್ ಸೆಡಾನ್‌ಗಿಂತಲೂ ಕೆಳಗಿನ ಬಹುತೇಕ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸಿದ್ದು, ಮಾರುತಿ ಸುಜುಕಿ ಕಾರುಗಳನ್ನೇ ರೀಬ್ಯಾಡ್ಜ್ ಆವೃತ್ತಿಯಾಗಿ ಮಾರಾಟ ಮಾಡಲು ನಿರ್ಧರಿಸಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಇದೇ ತಿಂಗಳು 22ರಂದು ಬಿಡುಗಡೆಯಾಗಲಿದೆ ಟೊಯೊಟಾ ಅರ್ಬನ್ ಕ್ರೂಸರ್

ಸದ್ಯ ಟೊಯೊಟಾ ಕಂಪನಿಯು ಮಾರುತಿ ಸುಜುಕಿಯ ರೀಬ್ಯಾಡ್ಜ್ ಕಾರುಗಳ ಉತ್ಪಾದನೆಗಾಗಿ ಬೆಂಗಳೂರಿನ ಬಿಡದಿ ಘಟಕದಲ್ಲೇ ಅವಕಾಶ ನೀಡಿದ್ದು, ದಕ್ಷಿಣ ಭಾರತದಲ್ಲಿ ಹೊಸ ಕಾರು ಘಟಕ ಸ್ಥಾಪನೆ ಮುಂದಾಗಿದ್ದ ಮಾರುತಿ ಸುಜುಕಿ ಕಂಪನಿಗೆ ತನ್ನದೆ ಘಟಕದಲ್ಲೇ ಅವಕಾಶ ನೀಡುವ ಮೂಲಕ ಜಪಾನ್ ಬ್ರಾಂಡ್‌ಗಳು ಭಾರತದಲ್ಲಿ ಮತ್ತಷ್ಟು ಜನಪ್ರಿಯಗೊಳ್ಳುತ್ತಿವೆ.

Most Read Articles

Kannada
Read more on ಟೊಯೊಟಾ toyota
English summary
Toyota Urban Cruiser India Launch On 22 August; Bookings Open. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X