ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಾಗಿ ಆಕ್ಸೆಸರಿಸ್ ಬಿಡುಗಡೆ ಮಾಡಿದ ಟೊಯೊಟಾ

ಟೊಯೊಟಾ ಕಂಪನಿಯು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಅರ್ಬನ್ ಕ್ರೂಸರ್ ಕಾರು ಆವೃತ್ತಿಯು ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗಾಗಿ ಆಕ್ಸೆಸರಿಸ್ ಬಿಡುಗಡೆ

ಹೊಸ ರೀಬ್ಯಾಡ್ಜ್ ಕಾರು ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಪ್ರೀಮಿಯಂ ಫೀಚರ್ಸ್‌ಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿರುವ ಟೊಯೊಟಾ ಕಂಪನಿಯು ಇದೀಗ ಹೊಸ ಕಾರಿಗೆ ಆಕ್ಸೆಸರಿಸ್ ಬಿಡುಗಡೆ ಮಾಡಿದ್ದು, ಆಸಕ್ತ ಗ್ರಾಹಕರು ಹೊಸ ಕಾರಿನಲ್ಲಿ ಮತ್ತಷ್ಟು ಪ್ರೀಮಿಯಂ ಲುಕ್ ಹೆಚ್ಚಿಸಲು ಆಕ್ಸೆಸರಿಸ್‌ಗಳನ್ನು ಪ್ರತ್ಯೇಕ ಪ್ಯಾಕೇಜ್‌ನಲ್ಲಿ ಖರೀದಿ ಮಾಡಬಹುದಾಗಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗಾಗಿ ಆಕ್ಸೆಸರಿಸ್ ಬಿಡುಗಡೆ

ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿರುವ ಬಿಡಿಭಾಗಗಳು ಸ್ಟ್ಯಾಂಡರ್ಡ್ ಕಾರು ಮಾದರಿಗಳಲ್ಲಿರುವ ತಾಂತ್ರಿಕ ಅಂಶಗಳನ್ನು ಹೊರತುಪಡಿಸಿ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದು, ಸುಮಾರು ರೂ. 52 ಸಾವಿರದಷ್ಟು ಮೌಲ್ಯದ ಆಕ್ಸೆಸರಿಸ್‌ಗಳನ್ನು ಬಿಡುಗಡೆ ಮಾಡಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗಾಗಿ ಆಕ್ಸೆಸರಿಸ್ ಬಿಡುಗಡೆ

ಆಕ್ಸೆಸರಿಸ್ ಸೌಲಭ್ಯಗಳು ಕಾರಿನ ಪ್ರೀಮಿಯಂ ಲುಕ್ ಹೆಚ್ಚಿಸಲು ಅನುಕೂಲಕರವಾಗಿದ್ದು, ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಪ್ರಮುಖವಾಗಿ ಪಿವಿಸಿ 3ಡಿ ಮ್ಯಾಟ್, 3ಡಿ ಬೂಟ್ ಮ್ಯಾಟ್, ಫಾಗ್ ಲ್ಯಾಂಪ್ ಗಾರ್ನಿಶ್, ಟೈಲ್ ಲ್ಯಾಂಪ್ ಕ್ರೋಮ್ ಗಾರ್ನಿಶ್, ಬಂಪರ್ ಗಾರ್ನಿಶ್, ಸೈಡ್ ಸ್ಕರ್ಟ್, ವೀಲ್ಹ್ ಆರ್ಚ್, ಕಾರ್ಬನ್ ಫೈಬರ್ ಸೇರಿದಂತೆ ಹಲವಾರು ಆಕ್ಸೆಸರಿಸ್ ಖರೀದಿಗೆ ಲಭ್ಯವಿವೆ.

ಆಕ್ಸೆಸರಿಸ್ ಬೆಲೆ
ಪಿವಿಸಿ 3ಡಿ ಮ್ಯಾಟ್ ರೂ.3,392
3ಡಿ ಬೂಟ್ ಮ್ಯಾಟ್ ರೂ.1,498
ಮಡ್ ಫ್ಲಾಪ್ ಸೆಟ್ ರೂ.794
ಬಂಪರ್ ಕಾರ್ನರ್ ಪ್ರೊಟೆಕ್ಟರ್ ರೂ.896
ಫಾಗ್ ಲ್ಯಾಂಪ್ ಗಾರ್ನಿಶ್ ರೂ.2,893
ಫ್ರಂಟ್ ಗ್ರೀಲ್ ಆಕ್ಸೆಂಟ್ ರೂ.2,099
ಮಿಡ್ ಗಾರ್ನಿಶ್ ರೂ.806
ಟೈಲ್ ಲ್ಯಾಂಪ್ ಕ್ರೋಮ್ ಗಾರ್ನಿಶ್ ರೂ.1,267
ವೀಂಡೋ ಫ್ರೇಮ್ ಕಿಟ್ ರೂ.1,574
ರಿಯರ್ ಬಂಪರ್ ಗಾರ್ನಿಶ್ ರೂ.3,443
ನಂಬರ್ ಪ್ಲೇಟ್ ಕ್ರೋಮ್ ಗಾರ್ನಿಶ್ ರೂ.845
ಡೋರ್ ವಿಸರ್ ಕ್ರೋಮ್ ಇನ್ಸರ್ಟ್ ರೂ.3,174
ಸೈಡ್ ಸ್ಕರ್ಟ್ ರೂ.5,818
ಹಿಂಬದಿಯಲ್ಲಿ ಆರ್ಮರೆಸ್ಟ್ ರೂ.3,264
ಸ್ಪಾಯ್ಲರ್ ಎಕ್ಸೆಂಟೆಷನ್ ಬ್ಲ್ಯಾಕ್ ರೂ.3,597
ಸೈಡ್ ಡೋರ್ ಕ್ಲಾಡಿಂಗ್ ಬ್ಲ್ಯಾಕ್ ರೂ.3,546
ವೀಲ್ಹ್ ಆರ್ಚ್ ಕ್ಲಾಡಿಂಗ್ಸ್ ರೂ.6,912
ಡೋರ್ ಸಿಲ್ಲ್ ಗಾರ್ಡ್ ರೂ.909
ಕ್ರೋಮ್ ಡೋರ್ ಹ್ಯಾಂಡಲ್ಸ್ ರೂ.1,510
ಕಾರ್ಬನ್ ಫೈಬರ್ ಒಳಗೊಂಡಿರುವ (ಒಆರ್‌ವಿಎಂ + ಸಿ ಪಿಲ್ಲರ್ + ಐಆರ್‌ವಿಎಂ) ರೂ.5,312
ಒಟ್ಟು ರೂ.52,749
ಅರ್ಬನ್ ಕ್ರೂಸರ್ ಕಾರು ಮಾದರಿಗಾಗಿ ಆಕ್ಸೆಸರಿಸ್ ಬಿಡುಗಡೆ

ಇನ್ನು ಹೊಸ ಅರ್ಬನ್ ಕ್ರೂಸರ್ ಕಾರು ಮಾದರಿಯು ಮಿಡ್, ಹೈ ಮತ್ತು ಪ್ರೀಮಿಯಂ ಎಂಬ ಮೂರು ರೂಪಾಂತರ ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.40 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.11.30 ಲಕ್ಷ ಬೆಲೆ ಪಡೆದುಕೊಂಡಿದೆ. ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆ ಹೊಂದಿರುವ ಹೊಸ ಅರ್ಬನ್ ಕ್ರೂಸರ್ ಕಾರು ಮಾದರಿಯು ಎರಡು ಸ್ಲಾಟ್ ಹೊಂದಿರುವ ಫ್ರಂಟ್ ಗ್ರಿಲ್, ಎರಡು ತುದಿಗಳಲ್ಲೂ ದಪ್ಪದಾದ ಕ್ರೊಮ್ ಮೂಲಕ ಆವೃತ್ತವಾಗಿದೆ. ಹೆಡ್‌ಲ್ಯಾಂಪ್‌ಗಳು ಗ್ರಿಲ್‌ನ ಎರಡೂ ಬದಿಯಲ್ಲಿವೆ ಮತ್ತು ಎಲ್‌ಇಡಿ ಪ್ರೊಜೆಕ್ಟರ್ ಘಟಕಗಳನ್ನು ಹೊಂದಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗಾಗಿ ಆಕ್ಸೆಸರಿಸ್ ಬಿಡುಗಡೆ

ಹಾಗೆಯೇ ಇಂಟಿಗ್ರೇಟೆಡ್ ಟರ್ನ್ ಸಿಗ್ನಲ್‌ಗಳೊಂದಿಗೆ ಸ್ಟೈಲಿಶ್ ಆಗಿರುವ 16-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಹ್ ಮತ್ತು ಬಾಡಿ ಕಲರ್ ಒಳಗೊಂಡಿರುವ ಒಆರ್‌ವಿಎಂಗಳು ಪ್ರಮುಖ ತಾಂತ್ರಿಕ ಅಂಶಗಳಾಗಿವೆ.

ಅರ್ಬನ್ ಕ್ರೂಸರ್ ಕಾರು ಮಾದರಿಗಾಗಿ ಆಕ್ಸೆಸರಿಸ್ ಬಿಡುಗಡೆ

ಇನ್ನು ಟೊಯೊಟಾ ಅರ್ಬನ್ ಕ್ರೂಸರ್ ಕಾರಿನಲ್ಲಿ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ಡ್ಯಾಶ್‌ಬೋರ್ಡ್ ಮತ್ತು ಕ್ಯಾಬಿನ್ ವಿನ್ಯಾಸವು ಗಮನಸೆಳೆಯುತ್ತದೆ. ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೆಂಟರ್ ಕನ್ಸೋಲ್‌ನಲ್ಲಿರುವ ದೊಡ್ಡ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಇತರ ಹೆಚ್ಚಿನ ತಾಂತ್ರಿಕ ಅಂಶಗಳನ್ನು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯಲ್ಲಿರುವಂತೆಯೆ ಮುಂದುವರಿಸಲಾಗಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗಾಗಿ ಆಕ್ಸೆಸರಿಸ್ ಬಿಡುಗಡೆ

ಟೊಯೊಟಾ ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯಂತೆ ಎಂಜಿನ್ ಆಯ್ಕೆ ಹೊಂದಿದೆ. ಬಿಎಸ್-6 ಪ್ರೇರಿತ ಕೆ-ಸೀರಿಸ್ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 104-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಅರ್ಬನ್ ಕ್ರೂಸರ್ ಕಾರು ಮಾದರಿಗಾಗಿ ಆಕ್ಸೆಸರಿಸ್ ಬಿಡುಗಡೆ

ಪೆಟ್ರೋಲ್ ಎಂಜಿನ್ ಮಾದರಿಯು ಆರಂಭಿಕ ಆವೃತ್ತಿಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ. ಅರ್ಬನ್ ಕ್ರೂಸರ್ 1.5-ಲೀಟರ್ ಪೆಟ್ರೋಲ್ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 17.3ಕಿ.ಮೀ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18.76 ಕಿ.ಮೀ ಮೈಲೇಜ್ ನೀಡುತ್ತದೆ.

Most Read Articles

Kannada
Read more on ಟೊಯೊಟಾ toyota
English summary
Toyota Urban Cruiser Accessories List Revealed. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X