ಲಾಕ್‌ಡೌನ್ ಸಂಕಷ್ಟ: ಹೈಬ್ರಿಡ್ ಕಾರುಗಳ ಬೆಲೆ ಹೆಚ್ಚಿಸಿದ ಟೊಯೊಟಾ
ಟೊಯೊಟಾ ಕಂಪನಿಯು ಈಗಾಗಲೇ ಬಿಎಸ್-6 ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಬಿಎಸ್-6 ಮಾದರಿಗಳ ಬಿಡುಗಡೆಯ ನಂತರ ಇದೀಗ ಎರಡನೇ ಬಾರಿಗೆ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಜೊತೆಗೆ ಹೈಬ್ರಿಡ್ ಕಾರು ಮಾದರಿಗಳ ಬೆಲೆಯಲ್ಲೂ ಹೆಚ್ಚಳ ಮಾಡಲಾಗುತ್ತಿದ್ದು, ಟೊಯೊಟಾ ನಿರ್ಮಾಣದ ಹ ಕ್ಯಾಮ್ರಿ ಮತ್ತು ವೆಲ್‌ಫೈರ್ ಕಾರು ಮಾದರಿಗಳು ಸಹ ಭಾರೀ ಹೆಚ್ಚಳ ಪಡೆದುಕೊಂಡಿವೆ. ಮಾಹಿತಿಗಳ ಪ್ರಕಾರ ಹೊಸ ಕಾರುಗಳು ರೂ.93 ಸಾವಿರದಷ್ಟು ಹೆಚ್ಚುವರಿ ಪಡೆದುಕೊಂಡಿದ್ದು, ಬಿಎಸ್-6 ಎಂಜಿನ್ ಅಪ್‌ಡೆಟ್ ನಂತರ ಇದು ಎರಡನೇ ಬಾರಿ ಬೆಲೆ ಹೆಚ್ಚಳವಾಗಿದೆ.

ಕ್ಯಾಮ್ರಿ ಹೈಬ್ರಿಡ್ ಸೆಡಾನ್ ಮಾದರಿಯು ಸದ್ಯ ಎಕ್ಸ್‌ಶೋರೂಂ ಪ್ರಕಾರ ರೂ. 37.88 ಲಕ್ಷ ಬೆಲೆ ಹೊಂದಿದ್ದು, ಇತ್ತೀಚೆಗೆ ಬಿಎಸ್-6 ಎಂಜಿನ್ ಪಡೆದುಕೊಂಡಿರುವ ಈ ಕಾರು ಇದೀಗ ಮತ್ತಷ್ಟು ದುಬಾರಿಯಾಗಿದೆ.

ವೆಲ್‌ಫೈರ್ ಹೈಬ್ರಿಡ್ ಎಂಪಿವಿ ಕಾರು ಕಳೆದ ಫೆಬ್ರುವರಿಯಲ್ಲಿ ಮಾರುಕಟ್ಟೆಗೆ ಪ್ರವೇಶಿಸಿದ್ದು, ಈ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.79.50 ಲಕ್ಷ ಪಡೆದುಕೊಂಡಿದ್ದು, ಇದೀಗ ಹೊಸ ಬೆಲೆ ಪಟ್ಟಿಯ ಪ್ರಕಾರ ಮತ್ತಷ್ಟು ದುಬಾರಿಯಾಗಿದೆ.

ಲಾಕ್‌ಡೌನ್ ಸಂಕಷ್ಟದಿಂದಾಗಿ ವಾಹನಗಳ ಬಿಡಿಭಾಗಗಳ ವೆಚ್ಚ ನಿರ್ವಹಣೆಯು ಹೆಚ್ಚುತ್ತಿದ್ದು, ಈ ಹಿನ್ನಲೆಯಲ್ಲಿ ಟೊಯೊಟಾ ಸೇರಿದಂತೆ ಬಹುತೇಕ ಆಟೋ ಕಂಪನಿಗಳು ಬಿಎಸ್-6 ವಾಹನಗಳ ಬೆಲೆಯಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ ಮಾಡಿವೆ.

ಟೊಯೊಟಾ ಕಾರುಗಳ ಹೊಸ ದರ ಪಟ್ಟಿಯಲ್ಲಿ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ಇನೋವಾ ಕ್ರಿಸ್ಟಾ ಮಾದರಿಯು ಕೂಡಾ ಹೆಚ್ಚುವರಿಯಾಗಿ ರೂ.61 ಸಾವಿರ ಹೆಚ್ಚುವರಿ ಬೆಲೆ ಪಡೆದುಕೊಂಡಿದ್ದು, ಬಿಎಸ್-6 ಎಂಜಿನ್ ಉನ್ನತೀಕರಿಸಿದ ನಂತರ ಇದು ಕೂಡಾ 2ನೇ ಬಾರಿಯ ಬೆಲೆ ಹೆಚ್ಚಳವಾಗಿದೆ.

ವಿವಿಧ ಮಾದರಿಗಳಿಗೆ ಅನುಗುಣವಾಗಿ ರೂ.25 ಸಾವಿರದಿಂದ ಗರಿಷ್ಠ ರೂ.61 ಸಾವಿರ ಬೆಲೆ ಹೆಚ್ಚಳ ಮಾಡಲಾಗಿದ್ದು, ಹೊಸ ದರ ಪಟ್ಟಿಯಂತೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.15.66 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.24.67 ಲಕ್ಷ ಬೆಲೆ ಹೊಂದಿದೆ.

ಬಿಎಸ್-6 ಎಮಿಷನ್ ಜಾರಿ ನಂತರ ಇನೋವಾ ಕ್ರಿಸ್ಟಾದಲ್ಲಿ 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಮಾತ್ರವೇ ಮಾರಾಟ ಮಾಡಲಾಗುತ್ತಿದ್ದು, ಈ ಹಿಂದಿನ 2.8-ಲೀಟರ್ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಹೊಸ ಎಮಿಷನ್ ಪ್ರಕಾರ ಸ್ಥಗಿತಗೊಳಿಸಲಾಗಿದೆ.

ಹೊಸ ಎಮಿಷನ್ ಜೊತೆಗೆ ಇನೋವಾ ಕ್ರಿಸ್ಟಾ ಕಾರಿನಲ್ಲಿ ಈ ಬಾರಿ ಹಿಲ್ ಸ್ಟಾರ್ಟ್ ಅಸಿಸ್ಟ್, ಸ್ಟ್ಯಾಬಿಲಿಟಿ ಕಂಟ್ರೋಲ್ ಮತ್ತು ಎಮರ್ಜೆನ್ಸಿ ಬ್ರೇಕಿಂಗ್ ಸಿಗ್ನಲ್ ಸೌಲಭ್ಯಗಳನ್ನು ಪ್ರತಿ ವೆರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಈ ಹಿಂದಿಗಿಂತಲೂ ಹೊಸ ಕಾರು ಹೆಚ್ಚು ಬಲಶಾಲಿಯಾಗಿರುವುದಲ್ಲದೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡಲಿದೆ.


Click it and Unblock the Notifications