ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

ಟೊಯೊಟಾ ಬಹುನೀರಿಕ್ಷಿತ ವೆಲ್‌ಫೈರ್ ಐಷಾರಾಮಿ ಕಾರು ಮಾದರಿಯು ಕಳೆದ ಆರು ತಿಂಗಳಿನಿಂದ ಬಿಡುಗಡೆಯ ನೀರಿಕ್ಷೆಯಲ್ಲಿದ್ದು, ಇದೀಗ ಹೊಸ ಕಾರು ಬಿಡುಗಡೆಗೆ ಅಂತಿಮವಾಗಿ ದಿನಾಂಕ ನಿಗದಿಪಡಿಸಲಾಗಿದೆ.

ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

ಇದೇ ತಿಂಗಳು 26ಕ್ಕೆ ಟೊಯೊಟಾ ವೆಲ್‌ಫೈರ್ ಕಾರು ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಪ್ರವೇಶಿಸಲಿದ್ದು, ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳನ್ನು ಹೊಂದಿರುವ ವೆಲ್‌ಫೈರ್ ಕಾರು ಟೊಯೊಟಾ ಸಂಸ್ಥೆಗೆ ಮತ್ತಷ್ಟು ಜನಪ್ರಿಯತೆ ತಂದುಕೊಡಲಿದೆ. ಅಲ್ಫಾರ್ಡ್ ಲಗ್ಷುರಿ ಮಿನಿ ವ್ಯಾನ್ ಡಿಸೈನ್ ಆಧಾರದ ಮೇಲೆ ಈ ಕಾರನ್ನು ಅಭಿವೃದ್ದಿಗೊಳಿಸಲಾಗಿದ್ದು, ಅಂತರ್‍‍ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈಗಾಗಲೇ ಮಾರಾಟಗೊಳ್ಳುತ್ತಿರುವ ಹೊಸ ಕಾರನ್ನು ಕೆಲವು ಬದಲಾವಣೆಗಳೊಂದಿಗೆ ಭಾರತದಲ್ಲೂ ಪರಿಚಯಿಸಲಾಗುತ್ತಿದೆ.

ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

ಮಲ್ಟಿ ಪ್ಯಾಸೆಂಜರ್ ವೆಹಿಕಲ್ ಮಾದರಿಯಾಗಿರುವ ವೆಲ್‌ಫೈರ್ ಕಾರು ಟೊಯೊಟಾ ನಿರ್ಮಾಣದ ಐಷಾರಾಮಿ ಕಾರು ಆವೃತ್ತಿಗಳಲ್ಲಿ ಮುಂಚೂಣಿಯಲ್ಲಿದ್ದು, ಕೇಂದ್ರ ಸರ್ಕಾರವು ಜಾರಿಗೆ ಜಾರಿಗೆ ತಂದಿರುವ ಹೊಸ ಆಮದು ನೀತಿಯ ಪರಿಣಾಮ ವೆಲ್‌ಫೈರ್ ಭಾರತದಲ್ಲಿ ಬಿಡುಗಡೆಯಾಗುತ್ತಿದೆ.

ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

2109ರಲ್ಲಿ ಕೇಂದ್ರ ಸರ್ಕಾರವು ಬದಲಾವಣೆ ಮಾಡಿರುವ ಆಮದು ನೀತಿಯು ವಿದೇಶಿ ಆಟೋ ಉತ್ಪಾದನಾ ಸಂಸ್ಥೆಗಳಿಗೆ ವರವಾಗಿ ಪರಿಣಮಿಸಿದ್ದು, ವಾರ್ಷಿಕವಾಗಿ 2,500 ವಾಹನಗಳನ್ನು ವಿದೇಶಿ ಮಾರುಕಟ್ಟೆಯಿಂದ ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ಆಮದು ಮಾಡಿಕೊಳ್ಳುವ ಅವಕಾಶ ನೀಡಿದೆ.

ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

ಈ ಹಿನ್ನಲೆಯಲ್ಲಿ ಜಪಾನ್ ಆಟೋ ದಿಗ್ಗಜ ಸಂಸ್ಥೆಯಾದ ಟೊಯೊಟಾ ಸೇರಿದಂತೆ ಹಲವು ಆಟೋ ಉತ್ಪಾದನಾ ಸಂಸ್ಥೆಗಳು ವಿದೇಶಿ ಮಾರುಕಟ್ಟೆಯಲ್ಲಿರುವ ತಮ್ಮ ಜನಪ್ರಿಯ ವಾಹನಗಳನ್ನು ಭಾರತದಲ್ಲೂ ಮಾರಾಟ ಮಾಡಲು ಸಿದ್ದವಾಗುತ್ತಿದ್ದು, ಲಗ್ಷುರಿ ಎಂಪಿವಿ ವಿಭಾಗದಲ್ಲಿ ಬಿಡುಗಡೆಯಾಗುತ್ತಿರುವ ವೆಲ್‌ಫೈರ್ ಕಾರು ಹಲವು ವಿಶೇಷತೆಗಳೊಂದಿಗೆ ದೇಶಿಯ ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗುತ್ತಿದೆ.

ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

ಟೊಯೊಟಾ ವೆಲ್‌ಫೈರ್ ಕಾರು ಈಗಾಗಲೇ ಆಯ್ದ ಡೀಲರ್ಸ್‌ಗಳಲ್ಲಿ ಸ್ಟಾಕ್ ಮಾಡಲಾಗುತ್ತಿದ್ದು, ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ಹೊಸ ಕಾರು 4,935-ಎಂಎಂ ಉದ್ದ, 1,850-ಎಂಎಂ ಅಗಲ ಮತ್ತು-1,935 ಎಂಎಂ ಎತ್ತರದೊಂದಿಗೆ ಉತ್ತಮ ಸ್ಥಳಾವಕಾಶ ಹೊಂದಿದೆ.

ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

ಆರು ಆಸನ ಸೌಲಭ್ಯವಿರುವ ವೆಲ್‌ಫೈರ್‌ನಲ್ಲಿ ಪ್ರತಿ ಆಸನವು ಪ್ರತ್ಯೇಕ ಕಂಟ್ರೋಲ್ ಬೋರ್ಡ್ ಹೊಂದಿದ್ದು, ಆರಾಮದಾಯಕವಾಗಿ ಪ್ರಯಾಣಿಸುವಂತೆ ವಿನ್ಯಾಸಗೊಳಿಸಲಾಗಿದೆ. ಹೀಗಾಗಿ ಇದು ಐಷಾರಾಮಿ ಪ್ರಯಾಣವನ್ನು ಬಯಸುವ ಗ್ರಾಹಕರಿಗೆ ವಿಶೇಷವಾಗಿ ನಿರ್ಮಾಣ ಮಾಡಲಾಗಿದ್ದು, ಬೆರಳತುದಿಯಲ್ಲೇ ಹಲವು ತಾಂತ್ರಿಕ ಸೌಲಭ್ಯಗಳು ಲಭ್ಯವಿರಲಿವೆ.

ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

ಎಂಜಿನ್ ಸಾಮರ್ಥ್ಯ

ವಿದೇಶಿ ಮಾರುಕಟ್ಟೆಗಳಲ್ಲಿ ವೆಲ್‌ಫೈರ್ ಕಾರು 2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 3.5-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿನಲ್ಲಿ ಕೇವಲ 2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ವರ್ಷನ್(ಸೆಲ್ಫ್ ಚಾರ್ಜಿಂಗ್ ಹೈಬ್ರಿಡ್ ಪವರ್‌ಟ್ರೈನ್) ಮಾತ್ರವೇ ಬಿಡುಗಡೆ ಮಾಡಲಾಗುತ್ತಿದೆ.

ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮಾದರಿಯು 180-ಬಿ‍‍ಹೆಚ್‍‍ಪಿ ಮತ್ತು 235-ಎನ್‍ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ನಾಲ್ಕು ಚಕ್ರಗಳಿಗೂ ಪ್ರತ್ಯೇಕವಾಗಿ ಪವರ್ ಒದಗಿಸುವ ಎಲೆಕ್ಟ್ರಿಕ್ ಸಿ‍‍ವಿ‍‍ಟಿ ಗೇರ್‍‍ಬಾಕ್ಸ್ ತಂತ್ರಜ್ಞಾನವನ್ನು ಈ ಕಾರಿನಲ್ಲಿ ಅಳವಡಿಸಲಾಗಿದೆ.

ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳಾದ ಎಲ್‍ಇ‍‍ಡಿ ಹೆಡ್‍‍ಲೈಟ್, ಕಾರ್ನರಿಂಗ್ ಲೈಟ್, ಇನ್‍‍ಕ್ಯಾಂಡಿಸೆಂಟ್ ಲೈಟ್, ಇಂಡಿಕೇಟರ್ ಲೈಟ್, ವೆಂಟಿಲೇಟೆಡ್ ಸೀಟಿಂಗ್, ಇನ್ಫೋಟೈನ್‌ಮೆಂಟ್ ಸಿಸ್ಟಂ, 360 ಡಿಗ್ರಿ ಕ್ಯಾಮರಾ, ಡ್ಯುಯಲ್ ಎಲೆಕ್ಟ್ರಿಕ್ ಸನ್‌ರೂಫ್ ಸೇರಿದಂತೆ ಹಲವಾರು ಸೌಲಭ್ಯಗಳಿವೆ.

ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

ಹಾಗೆಯೇ ಪ್ರಯಾಣಿಕ ಸುರಕ್ಷತೆಗಾಗಿ 7 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಹಿಲ್ ಅಸಿಸ್ಟ್, ತ್ರಿ ಜೋನ್ ಆಟೋ ಕ್ಲೈಮೆಟ್ ಕಂಟ್ರೊಲ್, ಸ್ಟ್ಯಾಬಿಲಿಟಿ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಫ್ರಂಟ್ ಅಂಡ್ ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿ ಹಲವು ಸೆಫ್ಟಿ ಫೀಚರ್ಸ್‌ಗಳಿದ್ದು, ಭಾರತದಲ್ಲಿ ಬೆಲೆ ಕಡಿತಗೊಳಿಸುವುದಕ್ಕಾಗಿ ಕೆಲವು ಹೈ ಎಂಡ್ ಫೀಚರ್ಸ್‌ಗಳನ್ನು ಕೈಬಿಡಲಾಗಿದೆ.

ಟೊಯೊಟಾ ದುಬಾರಿ ಬೆಲೆಯ ವೆಲ್‌ಫೈರ್ ಬಿಡುಗಡೆ ಮಾಹಿತಿ ಬಹಿರಂಗ

ಒಟ್ಟಿನಲ್ಲಿ ಹೊಸ ಟೊಯೊಟಾ ವೆಲ್‍‍ಫೈರ್ ಲಗ್ಷುರಿಯ ಎಂ‍ಪಿವಿಯ ಭಾರತದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದ್ದು, ಸದ್ಯ ಮಾರುಕಟ್ಟೆರುವ ಮರ್ಸಿಡಿಸ್ ಬೆಂಝ್ ವಿ-ಕ್ಲಾಸ್‌ಗೆ ಪೈಪೋಟಿ ನೀಡಲಿರುವ ಹೊಸ ಕಾರು ಎಕ್ಸ್ ಲಾಂಜ್ ಎನ್ನುವ ಒಂದೇ ವೆರಿಯೆಂಟ್ ಮೂಲಕ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.70 ಲಕ್ಷದಿಂದ ರೂ.75 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
Read more on ಟೊಯೊಟಾ toyota
English summary
Toyota is all set to launch Vellfire luxury MPV car in India on February, 26. Read in Kannada.
Story first published: Wednesday, February 12, 2020, 16:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X