ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಎಂಪಿವಿ

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಐಷಾರಾಮಿ ಕಾರುಗಳ ಮಾರಾಟವು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಟೊಯೊಟಾ ಸಂಸ್ಥೆಯು ಸಹ ತನ್ನ ಬಹುನೀರಿಕ್ಷಿತ ವೆಲ್‌ಫೈರ್ ಐಷಾರಾಮಿ ಎಂಪಿವಿ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಇನೋವಾ ಕ್ರಿಸ್ಟಾ ಮೂಲಕ ಎಂಪಿವಿ ಕಾರುಗಳ ಮಾರಾಟದಲ್ಲಿ ಪ್ರಾಬಲ್ಯ ಹೊಂದಿರುವ ಟೊಯೊಟಾ ಸಂಸ್ಥೆಯು ಈಗಾಗಲೇ ಹಲವು ಹೊಸ ಮಾದರಿಯ ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ವೆಲ್‌ಫೈರ್ ಹೈಬ್ರಿಡ್ ಎಂಪಿವಿ ಕಾರು ಮಾದರಿಯನ್ನು ಭಾರತಕ್ಕೂ ಪರಿಚಯಿಸಿದೆ. ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ವೆಲ್‌ಫೈರ್ ಕಾರು ಈಗಾಗಲೇ ಖರೀದಿಗೆ ಲಭ್ಯವಿದ್ದು, ಇದೀಗ ಭಾರತದಲ್ಲೂ ಕೂಡಾ ದುಬಾರಿ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಎಂಪಿವಿ ಕಾರುಗಳಲ್ಲೇ ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರುವ ವೆಲ್‌ಫೈರ್ ಕಾರು ಮರ್ಸಿಡಿಸ್ ಬೆಂಝ್ ವಿ-ಕ್ಲಾಸ್ ಮತ್ತು ಕಿಯಾ ಕಾರ್ನಿವಾಲ್ ಮಾದರಿಗಳಿಂತಲೂ ವಿಶೇಷ ವಿನ್ಯಾಸಗಳನ್ನು ಹೊತ್ತುಬಂದಿದ್ದು, ಟೊಯೊಟಾ ನಿರ್ಮಾಣದ ಮತ್ತೊಂದು ಐಷಾರಾಮಿ ಎಂಪಿವಿ ಕಾರು ಮಾದರಿಯಾದ ಆಲ್ಫಾರ್ಡ್ ಕಾರಿಗಿಂತಲೂ ಅತ್ಯಂತ ದುಬಾರಿ ಮಾದರಿಯಾಗಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ವೆಲ್‌ಫೈರ್ ಕಾರು ಸದ್ಯಕ್ಕೆ 'ಎಕ್ಸಿಕ್ಯೂಟಿವ್ ಲೌಂಜ್' ಎನ್ನುವ ಸಿಂಗಲ್ ವೆರಿಯೆಂಟ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ.79.50 ಲಕ್ಷ ಬೆಲೆ ಪಡೆದುಕೊಂಡಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳನ್ನು ಹೊಂದಿರುವ ವೆಲ್‌ಫೈರ್ ಎಂಪಿವಿ ಕಾರು ಟೊಯೊಟಾ ಸಂಸ್ಥೆಗೆ ಮತ್ತಷ್ಟು ಜನಪ್ರಿಯತೆ ತಂದುಕೊಡಲಿದ್ದು, ಅಲ್ಫಾರ್ಡ್ ಲಗ್ಷುರಿ ಮಿನಿ ವ್ಯಾನ್ ಡಿಸೈನ್ ಆಧಾರದ ಮೇಲೆ ಈ ಕಾರನ್ನು ಅಭಿವೃದ್ದಿಗೊಳಿಸಲಾಗಿದೆ. ಹೊಸ ಕಾರನ್ನು ಕೆಲವು ಬದಲಾವಣೆಗಳೊಂದಿಗೆ ಭಾರತದಲ್ಲಿ ಪರಿಚಯಿಸಲಾಗಿದ್ದು, ಬಿಡುಗಡೆಗೂ ಮುನ್ನವೇ 180 ವೆಲ್‌ಫೈರ್ ಯುನಿಟ್‌ಗಳು ಮಾರಾಟಗೊಂಡಿದ್ದು, ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈಗಾಗಲೇ 6 ಲಕ್ಷ ಯುನಿಟ್ ಮಾರಾಟಗೊಂಡಿವೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಇದೀಗ ಭಾರತದಲ್ಲಿ ಬಿಡುಗಡೆಗೊಳ್ಳುವ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿರುವ ವೆಲ್‌ಫೈರ್ ಕಾರು ಐಷಾರಾಮಿ ಕಾರು ಪ್ರಿಯರಿಗೆ ಹೊಸ ಅನುಭವ ನೀಡಲಿದ್ದು, ಬಲಿಷ್ಠ ಎಂಜಿನ್, ಪ್ರೀಮಿಯಂ ಫೀಚರ್ಸ್‌ಗಳು ಹೊಸ ಕಾರಿನ ಪ್ರಮುಖ ಆಕರ್ಷಣೆಯಾಗಿವೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಹೊಸ ಕಾರಿನ ಮುಂಭಾಗದಲ್ಲಿ ಕ್ರೋಮ್ ಪಟ್ಟಿಗಳು, ಬಲಿಷ್ಠವಾದ ಬಂಪರ್, ಸ್ಪ್ಲಿಟ್ ಎಲ್ಇಡಿ ಹೆಡ್‌ಲೈಟ್‌ಗಳು ಮತ್ತು ಹಗಲಿನಲ್ಲಿ ಬೆಳಕು ಹೊರಸೂಸುವ ಗ್ರಿಲ್ ಸಿಸ್ಟಂ ನೀಡಲಾಗಿದ್ದು, 17 ಇಂಚಿನ ಅಲಾಯ್ ಚಕ್ರಗಳು, ಎಲೆಕ್ಟ್ರಿಕ್ ಕಂಟ್ರೊಲ್ ಸ್ಲೈಡಿಂಗ್ ಬಾಗಿಲುಗಳು, ದೊಡ್ಡದಾದ ಟೈಲ್ ಲೈಟ್ ಕ್ಲಸ್ಟರ್‌ಗಳು ಬಹಳ ಆಕರ್ಷಕವಾಗಿವೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಹಾಗೆಯೇ ಹೊಸ ಕಾರಿನ ಒಳಭಾಗವು ಕೂಡಾ ಸಾಕಷ್ಟು ಐಷಾರಾಮಿ ಫೀಚರ್ಸ್‌ಗಳನ್ನು ಹೊಂದಿದ್ದು, 7 ಸೀಟರ್ ಸೌಲಭ್ಯದೊಂದಿಗೆ 10-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಚ್‌ಡಿಎಂಐನೊಂದಿಗ ವೈ-ಪೈ ಸೌಲಭ್ಯವನ್ನು ಹೊಂದಿರುವ 13-ಇಂಚಿನ ಎಂಟರ್‌ಟೈನ್‌ಮೆಂಟ್ ಸ್ಕ್ರೀನ್‌ಗಳು, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ತ್ರೀ ಜೋನ್ ಕ್ಲೈಮೆಟ್ ಕಂಟ್ರೋಲ್, ಆಂಬಿಯೆಂಟ್ ರೂಫ್ ಲೈಟ್ ಸಿಸ್ಟಂ ಮತ್ತು 17-ಸ್ಪೀಕರ್ಸ್ ಹೊಂದಿರುವ ಜೆಬಿಎಲ್ ಆಡಿಯೋ ಸಿಸ್ಟಂ ಹೊಂದಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಇದರಲ್ಲಿ ಕ್ಯಾಪ್ಟನ್ ಸೀಟುಗಳು ಪ್ರಮುಖ ಆಕರ್ಷಣೆಯಾಗಿದ್ದು, ಪುಷ್‌ಬ್ಯಾಕ್ ಸೌಲಭ್ಯವಲ್ಲದೆ ಆರ್ಮ್‌ರೆಸ್ಟ್ ಮತ್ತು ಲೆಗ್ ರೆಸ್ಟ್ ಒದಗಿಸುತ್ತದೆ. ಜೊತೆಗೆ ಕ್ಯಾಪ್ಟನ್ ಸೀಟುಗಳ ಮತ್ತೊಂದು ವೈಶಿಷ್ಟ್ಯತೆ ಅಂದರೆ ಚಳಿಗಾಲದಲ್ಲಿ ಬಿಸಿಯಾಗುತ್ತವೆ ಮತ್ತು ಬಿಸಿಯಾದ ವಾತಾವರಣವಿದ್ದಲ್ಲಿ ತಂಪು ಹೊರಸೂಸುವ ತಂತ್ರಜ್ಞಾನವನ್ನು ಹೊಂದಿವೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಸುರಕ್ಷತಾ ವೈಶಿಷ್ಟ್ಯತೆಗಳು

ಐಷಾರಾಮಿ ವೆಲ್‌ಫೈರ್ ಕಾರಿನಲ್ಲಿ ವೆಹಿಕಲ್ ಡೈನಾಮಿಕ್ ಇಂಟೆಗ್ರೆಟೆಡ್ ಮ್ಯಾನೆಜ್‌ಮೆಂಟ್ ತಂತ್ರಜ್ಞಾನವನ್ನು(ವಿಡಿಐಎಂ) ಬಳಕೆ ಮಾಡಲಾಗಿದ್ದು, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, 7 ಏರ್‌ಬ್ಯಾಗ್‌ಗಳು, ಹಿಲ್ ಸ್ಟಾರ್ಟ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ವೆಹಿಕಲ್ ಸ್ಟ್ಯಾಬಿಲಿಟಿ ಕಂಟ್ರೋಲ್, ಆಲ್ ವೀಲ್ಹ್ ಡ್ರೈವ್ ಸಿಸ್ಟಂ ಸೇರಿದಂತೆ ಹಲವು ಭದ್ರತಾ ವೈಶಿಷ್ಟ್ಯತೆಗಳಿವೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಎಂಜಿನ್ ಸಾಮರ್ಥ್ಯ

ವಿದೇಶಿ ಮಾರುಕಟ್ಟೆಗಳಲ್ಲಿ ವೆಲ್‌ಫೈರ್ ಕಾರು 2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 3.5-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಭಾರತದಲ್ಲಿ ಬಿಡುಗಡೆಯಾಗಿರುವ ಹೊಸ ಕಾರಿನಲ್ಲಿ ಸದ್ಯಕ್ಕೆ 2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ವರ್ಷನ್(ಸೆಲ್ಫ್ ಚಾರ್ಜಿಂಗ್ ಹೈಬ್ರಿಡ್ ಪವರ್‌ಟ್ರೈನ್) ಮಾತ್ರವೇ ಬಿಡುಗಡೆ ಮಾಡಲಾಗಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಹೊಸ ಎಂಜಿನ್ ಮಾದರಿಯು 115-ಬಿಎಚ್‌ಪಿ ಮತ್ತು 198-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಮುಂಭಾಗ ಚಕ್ರಗಳಿಗೆ ಎಲೆಕ್ಟ್ರಿಕ್ ಮೋಟಾರ್ ಒದಗಿಸುವ ಮೂಲಕ ಪ್ರತಿ ಲೀಟರ್ ಪೆಟ್ರೋಲ್‌ಗೆ 16.35 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಉದ್ದಳತೆ ಮತ್ತು ಲಭ್ಯವಿರುವ ಬಣ್ಣಗಳು

ಹೊಸ ವೆಲ್‌ಫೈರ್ ಕಾರು 4,935-ಎಂಎಂ ಉದ್ದ, 1,850-ಎಂಎಂ ಅಗಲ, 1,895-ಎಂಎಂ ಎತ್ತರ ಮತ್ತು 3,000-ಎಂಎಂ ವೀಲ್ಹ್ ಬೆಸ್‌ನೊಂದಿಗೆ 2,815 ಕೆಜಿ ತೂಕ ಹೊಂದಿದ್ದು, ಗ್ರಾಹಕರ ತಮ್ಮ ಬೇಡಿಕೆಗೆ ಅನುಗುಣವಾಗಿ ಬರ್ನಿಂಗ್ ಬ್ಲ್ಯಾಕ್, ವೈಟ್ ಪರ್ಲ್, ಗ್ರಾಫೈಟ್ ಮತ್ತು ಬ್ಲ್ಯಾಕ್ ಬಣ್ಣಗಳನ್ನು ಆಯ್ಕೆ ಮಾಡಬಹುದಾಗಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಇನ್ನು 2019ರಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ಆಮದು ನೀತಿಯಿಂದಾಗಿ ವೆಲ್‌ಫೈರ್ ಕಾರು ಭಾರತದಲ್ಲಿ ಬಿಡುಗಡೆಗೊಂಡಿದ್ದು, ಹೊಸ ಆಮದು ನೀತಿ ಅಡಿ ವಿದೇಶಿ ಆಟೋ ಉತ್ಪಾದನಾ ಸಂಸ್ಥೆಗಳು ಭಾರತಕ್ಕೆ ವಾರ್ಷಿಕವಾಗಿ 2,500 ವಾಹನಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ಆಮದು ಮಾಡಿಕೊಳ್ಳುವ ಅವಕಾಶವನ್ನು ನೀಡಲಾಗಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಗೊಂಡ ಟೊಯೊಟಾ ವೆಲ್‌ಫೈರ್ ಬಿಡುಗಡೆ

ಈ ಹಿನ್ನಲೆಯಲ್ಲಿ ಟೊಯೊಟಾ ಸೇರಿದಂತೆ ಹಲವು ಆಟೋ ಉತ್ಪಾದನಾ ಸಂಸ್ಥೆಗಳು ವಿದೇಶಿ ಮಾರುಕಟ್ಟೆಯಲ್ಲಿರುವ ತಮ್ಮ ಜನಪ್ರಿಯ ವಾಹನಗಳನ್ನು ಭಾರತದಲ್ಲೂ ಮಾರಾಟ ಮಾಡಲು ಸಿದ್ದವಾಗುತ್ತಿದ್ದು, ಲಗ್ಷುರಿ ಎಂಪಿವಿ ವಿಭಾಗದಲ್ಲಿ ಬಿಡುಗಡೆಯಾಗಿರುವ ವೆಲ್‌ಫೈರ್ ಕಾರು ಹಲವು ವಿಶೇಷತೆಗಳೊಂದಿಗೆ ಬಿಡುಗಡೆಯಾಗಿದೆ.

Most Read Articles

Kannada
Read more on ಟೊಯೊಟಾ toyota
English summary
Toyota Vellfire Premium MPV Launched In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X