Just In
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
50 ಹೊಸ ಸಿಎನ್‌ಜಿ ಬಸ್‌ಗಳನ್ನು ರಸ್ತೆಗಿಳಿಸಲಿದೆ ಸಾರಿಗೆ ಇಲಾಖೆ
ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಹಲವು ರಾಜ್ಯ ಸರ್ಕಾರಗಳು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿವೆ. ಈಗ ಬಿಹಾರದ ರಾಜ್ಯ ಸಾರಿಗೆ ಇಲಾಖೆಯು ಸಹ ಬಿಹಾರದ ರಾಜಧಾನಿ ಪಾಟ್ನಾದಲ್ಲಿ 50 ಹೊಸ ಸಿಎನ್‌ಜಿ ಬಸ್‌ಗಳನ್ನು ರಸ್ತೆಗಿಳಿಸುತ್ತಿದೆ.

ಈ ಹೊಸ ಸಿಎನ್‌ಜಿ ಬಸ್‌ಗಳು ಜನವರಿಯಿಂದ ಕಾರ್ಯಾಚರಣೆಯನ್ನು ಆರಂಭಿಸಲಿವೆ. ಈ ಹೊಸ ಸಿಎನ್‌ಜಿ ಬಸ್‌ಗಳು ಯಾವ ಮಾರ್ಗದಲ್ಲಿ ಚಲಿಸಲಿವೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಸದ್ಯಕ್ಕೆ ಬಿಹಾರ ರಾಜ್ಯ ರಸ್ತೆ ಸಾರಿಗೆ ನಿಗಮವು ಪಾಟ್ನಾದಲ್ಲಿ 20 ಸಿಎನ್‌ಜಿ ಬಸ್‌ಗಳನ್ನು ನಿರ್ವಹಿಸುತ್ತಿದೆ. ಇವೆಲ್ಲವನ್ನೂ ಡೀಸೆಲ್‌ನಿಂದ ಸಿಎನ್‌ಜಿಗೆ ಬದಲಿಸಲಾಗುವುದು.

ಈ ಬಸ್ಸುಗಳು ಬೈಲಿ - ದಾನಾಪುರ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಇವುಗಳ ಜೊತೆಗೆ ಹೆಚ್ಚುವರಿಯಾಗಿ ಜನವರಿಯಲ್ಲಿ 50 ಹೊಸ ಸಿಎನ್‌ಜಿ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುವುದು.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಹಾರ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳು, ಈ ಹೊಸ ಸಿಎನ್‌ಜಿ ಬಸ್‌ಗಳು ದಕ್ಷವಾಗಿರಲಿವೆ. ಪಾಟ್ನಾದಲ್ಲಿನ ವಾಯುಮಾಲಿನ್ಯ ಸಮಸ್ಯೆಯನ್ನು ನಿಯಂತ್ರಿಸಲು ಈ ಬಸ್ಸುಗಳು ನೆರವಾಗಲಿವೆ. ದೆಹಲಿಯಲ್ಲಿರುವಂತೆ ಪಾಟ್ನಾದಲ್ಲಿಯೂ ಸಿಎನ್‌ಜಿ ಬಸ್‌ಗಳನ್ನು ಪರಿಚಯಿಸಲಾಗುವುದು ಎಂದು ಹೇಳಿದರು.

ಇದರ ಜೊತೆಗೆ ಡೀಸೆಲ್ ಚಾಲಿತ ಕಾರುಗಳನ್ನು ಸಿಎನ್‌ಜಿಗೆ ಪರಿವರ್ತಿಸಲು ಸಾರಿಗೆ ಇಲಾಖೆಯು ಸಲಹೆ ನೀಡುತ್ತಿದೆ. ಅಧಿಕಾರಿಗಳ ಪ್ರಕಾರ ಡೀಸೆಲ್ ಚಾಲಿತ ಕಾರುಗಳನ್ನು ಸಿಎನ್‌ಜಿಗೆ ಪರಿವರ್ತಿಸಲು ಅಥವಾ ಅವುಗಳ ಬದಲಿಗೆ ಹೊಸ ಕಾರುಗಳನ್ನು ಖರೀದಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಪಾಟ್ನಾದಲ್ಲಿ ಸದ್ಯಕ್ಕೆ ಸುಮಾರು 5,000 ಸಿಎನ್‌ಜಿ ಆಟೋಗಳು ಚಾಲನೆಯಲ್ಲಿವೆ ಎಂಬುದು ಗಮನಾರ್ಹ. ಆದರೆ ಸಿಎನ್‌ಜಿ ಕೇಂದ್ರಗಳ ಕೊರತೆ ಎದುರಾಗಿದೆ. ಈ ಕಾರಣಕ್ಕೆ ಸಿಎನ್‌ಜಿ ಸುಲಭವಾಗಿ ಲಭ್ಯವಾಗುವುದನ್ನು ಖಚಿತಪಡಿಸಿಕೊಳ್ಳಲು ಪಾಟ್ನಾದಲ್ಲಿ 12 ಹೊಸ ಸಿಎನ್‌ಜಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಪಾಟ್ನಾ ವಿಶ್ವದ ಅತ್ಯಂತ ಕಲುಷಿತ ನಗರಗಳಲ್ಲಿ ಒಂದಾಗಿದೆ. ವಾಹನಗಳ ಹೊರಸೂಸುವಿಕೆ ಇದಕ್ಕೆ ಪ್ರಮುಖ ಕಾರಣವಾಗಿದೆ. ಆದ್ದರಿಂದ ವಾಯುಮಾಲಿನ್ಯ ಸಮಸ್ಯೆಯನ್ನು ಕಡಿಮೆ ಮಾಡಲು ಪಾಟ್ನಾದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಆದ್ಯತೆ ನೀಡಲಾಗುತ್ತಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಪಾಟ್ನಾದಲ್ಲಿ ಮಾತ್ರವಲ್ಲದೆ ಭಾರತದಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ, ಅವುಗಳ ಬದಲಿಗೆ ಎಲೆಕ್ಟ್ರಿಕ್ ಹಾಗೂ ಸಿಎನ್‌ಜಿಯಂತಹ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಹಾಗೂ ದೆಹಲಿಯಂತಹ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿಯನ್ನು ನೀಡುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವುದರಿಂದ ಕಚ್ಚಾ ತೈಲ ಆಮದು ಪ್ರಮಾಣವು ಕಡಿಮೆಯಾಗುತ್ತದೆ ಎಂಬುದು ಗಮನಾರ್ಹ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.