ಕ್ಯಾಬ್ ಸೇವೆಗಾಗಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ ಉಬರ್

ವ್ಯಯಕ್ತಿಕ ಬಳಕೆಗೆ ಮಾತ್ರವಲ್ಲದೇ ಟ್ಯಾಕ್ಸಿ ಸೇವೆಗಳಿಗೂ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಕ್ಯಾಬ್ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ಉಬರ್ ಸೇರಿದಂತೆ ಹಲವು ಸಂಸ್ಥೆಗಳು ಡೀಸೆಲ್ ಎಂಜಿನ್ ಕಾರುಗಳ ಬದಲಿಗೆ ಎಲೆಕ್ಟ್ರಿಕ್ ಕಾರುಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿವೆ.

ಕ್ಯಾಬ್ ಸೇವೆಗಾಗಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ ಉಬರ್

ದೇಶಾದ್ಯಂತ ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲಾಗುತ್ತಿದ್ದು, ಕ್ಯಾಬ್ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ಉಬರ್ ಕೂಡಾ ಎಲೆಕ್ಟ್ರಿಕ್ ಕಾರುಗಳ ಬಳಕೆಯನ್ನು ಹೆಚ್ಚಿಸಲು ಹೊಸ ಯೋಜನೆಯೊಂದನ್ನು ರೂಪಿಸಿದೆ. ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಕ್ಯಾಬ್ ಸೇವೆ ಹೊಂದಿರುವ ಉಬರ್ ಸಂಸ್ಥೆಯು ವರ್ಷಾಂತ್ಯಕ್ಕೆ 1,500 ಎಲೆಕ್ಟ್ರಿಕ್ ಕಾರುಗಳನ್ನು ರಸ್ತೆಗಿಳಿಸುವ ಯೋಜನೆ ಹೊಂದಿದ್ದು, ಯಾವ ಮಾದರಿಯನ್ನು ಖರೀದಿ ಮಾಡಲಿದೆ ಎನ್ನುವ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಕ್ಯಾಬ್ ಸೇವೆಗಾಗಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ ಉಬರ್

ಹಂತವಾಗಿ ಡೀಸೆಲ್ ಕಾರುಗಳನ್ನು ತಗ್ಗಿಸುವ ಗುರಿಯೊಂದಿಗೆ ಎಲೆಕ್ಟ್ರಿಕ್ ಕಾರುಗಳನ್ನು ವಾಣಿಜ್ಯ ಬಳಕೆಗಾಗಿ ಪರಿಚಯಿಸುತ್ತಿರುವುದಾಗಿ ಹೇಳಿಕೊಂಡಿರುವ ಉಬರ್ ಸಂಸ್ಥೆಯು ಕ್ಯಾಬ್ ಮತ್ತು ಸೆಲ್ಪ್ ಡ್ರೈವ್ ಸೇವೆಗಳಿಗೂ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸುವುದಾಗಿ ಹೇಳಿಕೊಂಡಿದೆ.

ಕ್ಯಾಬ್ ಸೇವೆಗಾಗಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ ಉಬರ್

ಇನ್ನು ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೇಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ.

ಕ್ಯಾಬ್ ಸೇವೆಗಾಗಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ ಉಬರ್

ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಮುನ್ನ ದೇಶದ ಪ್ರಮುಖ ನಗರಗಳಲ್ಲಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳನ್ನು ಹೆಚ್ಚಿಸುತ್ತಿದ್ದು, ಕೇಂದ್ರ ಸರ್ಕಾರವು ಸಹ ಫೇಮ್ 2 ಯೋಜನೆ ಅಡಿ ಸರ್ಕಾರಿ ಮತ್ತು ಖಾಸಗಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿರ್ಮಾಣ ಮಾಡುತ್ತಿರುವುದು ಮಹತ್ವದ ಬದಲಾವಣೆಗೆ ಕಾರಣವಾಗಿದೆ.

ಕ್ಯಾಬ್ ಸೇವೆಗಾಗಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ ಉಬರ್

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.

ಕ್ಯಾಬ್ ಸೇವೆಗಾಗಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ ಉಬರ್

ಇದಕ್ಕಾಗಿ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮತ್ತು ಮಾರಾಟ ಹೆಚ್ಚಿಸಲು ಜಾರಿಗೆ ತರಲಾಗಿರುವ ಫೇಮ್ 2 ಯೋಜನೆಯಡಿಯಲ್ಲೇ ಹೊಸದಾಗಿ 2,600 ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿರ್ಮಾಣವಾಗಲಿದ್ದು, ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ ಮತ್ತು ಪ್ರಮುಖ ಜನದಟ್ಟಣೆ ಪ್ರದೇಶಗಳಲ್ಲಿ ಹೊಸ ಚಾರ್ಜಿಂಗ್ ಸ್ಟೇಷನ್‌ಗಳು ತಲೆ ಎತ್ತಲಿವೆ.

ಕ್ಯಾಬ್ ಸೇವೆಗಾಗಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ ಉಬರ್

ಫಾಸ್ಟ್‌ ಚಾರ್ಜಿಂಗ್ ಸ್ಟೇಷನ್‌ಗಳಲ್ಲಿ ಅತಿ ಕಡಿಮೆ ಅವಧಿಯಲ್ಲಿ ಚಾರ್ಜಿಂಗ್ ಮಾಡಿಕೊಳ್ಳಬಹುದಾಗಿದ್ದು, 40 ನಿಮಿಷದಿಂದ 50 ನಿಮಿಷ ಅವಧಿಯಲ್ಲಿ ಶೇ.80 ರಷ್ಟು ಚಾರ್ಜಿಂಗ್ ಮಾಡಿಕೊಳ್ಳಬಹುದಾಗಿದೆ.

ಕ್ಯಾಬ್ ಸೇವೆಗಾಗಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ ಉಬರ್

ಇದಲ್ಲದೇ ಎಲೆಕ್ಟ್ರಿಕ್ ವಾಹನಗಳ ಪ್ರಮುಖ ತಾಂತ್ರಿಕ ಅಂಶವಾಗಿರುವ ಲೀಥಿಯಂ ಅಯಾನ್ ಬ್ಯಾಟರಿ ಬಳಕೆಯ ಬೆಲೆ ತಗ್ಗಿಸಲು ಸಹ ಮಹತ್ವದ ಕ್ರಮ ಕೈಗೊಳ್ಳಲಾಗುತ್ತಿದ್ದು, ಶೇ.100 ರಷ್ಟು ವಿದೇಶಿ ಮಾರುಕಟ್ಟೆಗಳಿಂದಲೇ ಆಮದುಗೊಳ್ಳುತ್ತಿರುವ ಲೀಥಿಯಂ ಬ್ಯಾಟರಿ ಸಾಧನವನ್ನ ಭಾರತದಲ್ಲೇ ಉತ್ಪಾದನೆ ಮಾಡಲು ಈಗಾಗಲೇ ಹಲವು ಆಟೋ ಉತ್ಪಾದನಾ ಸಂಸ್ಥೆಗಳು ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿವೆ.

ಕ್ಯಾಬ್ ಸೇವೆಗಾಗಿ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ ಉಬರ್

ಹೊಸ ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಸದ್ಯ ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಪ್ರೇರಿತ ವಾಹನಗಳನ್ನು ಕೂಡಾ ಎಲೆಕ್ಟ್ರಿಕ್‌ನತ್ತ ಬದಲಾಯಿಸುವ ಬಗ್ಗೆಯು ನೀತಿ ಆಯೋಗವು ಗಂಭೀರ ಚಿಂತನೆ ನಡೆಸುತ್ತಿದ್ದು, ಮಾಲಿನ್ಯ ಪ್ರಮಾಣವನ್ನು ತಗ್ಗಿಸುವುದಕ್ಕಾಗಿ ಸರ್ಕಾರಿ ಮತ್ತು ಖಾಸಗಿ ವಲಯದಲ್ಲೂ ಸಾಕಷ್ಟು ಬದಲಾವಣೆಗಳನ್ನು ತರಲಾಗುತ್ತಿದೆ.

Most Read Articles

Kannada
English summary
Uber India to introduce electric fleet with 1500 Evs planned by year end details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X