ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಮಹತ್ವದ ನಿರ್ಧಾರ ತೆಗೆದುಕೊಂಡ ಯುಕೆ

ವಿಶ್ವದ ಪ್ರಮುಖ ರಾಷ್ಟ್ರಗಳು ಮಾಲಿನ್ಯ ಸಮಸ್ಯೆ ಎದುರಿಸುತ್ತಿದ್ದು, ಮಾಲಿನ್ಯ ಉತ್ಪಾದನೆಗೆ ಇಂಧನ ಆಧರಿತ ವಾಹನಗಳೇ ಪ್ರಮುಖ ಕಾರಣವಾಗಿದೆ. ಹೀಗಾಗಿ ವಿಶ್ವದ ಪ್ರಮುಖ ರಾಷ್ಟ್ರಗಳು 2030ರ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ನಿಷೇಧಿಸಲು ಮುಂದಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸುತ್ತಿವೆ.

ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಹೊಸ ನಿರ್ಧಾರ ತೆಗೆದುಕೊಂಡ ಯುಕೆ

ಮಾಲಿನ್ಯ ಪ್ರಮಾಣಕ್ಕೆ ಕಡಿವಾಣ ಹಾಕಲು ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಈಗಾಗಲೇ ಹಲವಾರು ಎಲೆಕ್ಟ್ರಿಕ್ ವಾಹನ ನೀತಿ ಮೂಲಕ ಇಂಧನ ಆಧರಿತ ವಾಹನಗಳ ಬಳಕೆಗೆ ಕಡಿವಾಣ ಹಾಕಲಾಗುತ್ತಿದ್ದು, ಯುರೋಪ್ ಒಕ್ಕೂಟದಲ್ಲೂ ಈಗಾಗಲೇ ಹಲವು ರಾಷ್ಟ್ರಗಳಲ್ಲಿ 2030ಕ್ಕೆ ಇಂಧನ ಆಧರಿತ ವಾಹನ ಮಾರಾಟವನ್ನು ನಿಷೇಧಿಸುವುದಾಗಿ ಸುಗ್ರೀವಾಜ್ಞೆ ಹೊರಡಿಸಿವೆ. ಇದಕ್ಕೆ ಪೂರಕವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಸೆಳೆಯಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ.

ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಹೊಸ ನಿರ್ಧಾರ ತೆಗೆದುಕೊಂಡ ಯುಕೆ

ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಈಗಾಗಲೇ ಡೀಸೆಲ್ ಎಂಜಿನ್ ವಾಹನಗಳ ಮಾರಾಟವು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಪೂರ್ಣಪ್ರಮಾಣದ ಎಲೆಕ್ಟ್ರಿಕ್ ವಾಹನ ಬಳಕೆ ಹೆಚ್ಚಿನ ಪ್ರಮಾಣದಲ್ಲಿದೆ.

ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಹೊಸ ನಿರ್ಧಾರ ತೆಗೆದುಕೊಂಡ ಯುಕೆ

ಮುಂಬರುವ ದಿನಗಳಲ್ಲಿ ಡೀಸೆಲ್ ಜೊತೆಗೆ ಪೆಟ್ರೋಲ್ ವಾಹನಗಳ ಬಳಕೆಯನ್ನು ನಿರ್ಬಂಧಿಸುವತ್ತ ಹಲವಾರು ಹೊಸ ನೀತಿಗಳನ್ನು ಜಾರಿಗೆ ತರಲಾಗುತ್ತಿದ್ದು, ಗ್ರೇಟ್ ಬ್ರಿಟನ್, ಐರ್ಲೆಂಡ್‌ನಲ್ಲೂ ಕೂಡಾ 2030ರ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಹೊಸ ನಿರ್ಧಾರ ತೆಗೆದುಕೊಂಡ ಯುಕೆ

ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮಾರಾಟವನ್ನು ನಿಷೇಧಿಸುವುದಕ್ಕೂ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೂಡಾ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು, ಎಲೆಕ್ಟ್ರಿಕ್ ವಾಹನ ಖರೀದಿ ಮೇಲೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ. ಹಾಗೆಯೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕಂಪನಿಗಳಿಗೂ ಪ್ರೋತ್ಸಾಹ ಧನ ಮತ್ತು ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಗರಿಷ್ಠ ಪ್ರಮಾಣದ ಸಬ್ಸಡಿ ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಹೊಸ ನಿರ್ಧಾರ ತೆಗೆದುಕೊಂಡ ಯುಕೆ

ಭಾರತದಲ್ಲೂ ಈಗಾಗಲೇ ಎಲೆಕ್ಟ್ರಿಕ್ ವಾಹನಗಳನ್ನು ಪ್ರೋತ್ಸಾಹಿಸಲು ಫೇಮ್ 2 ಯೋಜನೆಯನ್ನು ಜಾರಿಗೆ ತರಲಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಹೊಸ ನಿರ್ಧಾರ ತೆಗೆದುಕೊಂಡ ಯುಕೆ

ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯನ್ನು ಹೊರತುಪಡಿಸಿ ದೆಹಲಿ ಸರ್ಕಾರವು ತನ್ನದೇ ಆದ ಎಲೆಕ್ಟ್ರಿಕ್ ವಾಹನ ನೀತಿ ಮೂಲಕ ಮಹತ್ವದ ಬದಲಾವಣೆಯತ್ತ ಹೆಜ್ಜೆಯಿರಿಸಿದ್ದು, ಫೇಮ್ 2 ಯೋಜನೆಗಿಂತಲೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ.

ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಹೊಸ ನಿರ್ಧಾರ ತೆಗೆದುಕೊಂಡ ಯುಕೆ

ದೆಹಲಿ ಸರ್ಕಾರವು ಹೊಸ ಇವಿ ಪಾಲಿಸಿ ಅಡಿ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ನೋಂದಣಿ ಶುಲ್ಕ ವಿನಾಯ್ತಿ, ರಸ್ತೆ ತೆರಿಗೆ ವಿನಾಯ್ತಿ ಸೇರಿದಂತೆ ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಕೇಂದ್ರ ಸರ್ಕಾರ ಫೇಮ್ 2 ಯೋಜನೆ ಅಡಿಯಲ್ಲಿ ಜಿಎಸ್‌ಟಿ ವಿನಾಯ್ತಿ ಕೂಡಾ ಲಭ್ಯವಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಹೊಸ ನಿರ್ಧಾರ ತೆಗೆದುಕೊಂಡ ಯುಕೆ

ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ಫೇಮ್ 2 ಜೊತೆ ದೆಹಲಿ ಮಾದರಿಯ ಇವಿ ಪಾಲಿಸಿಯು ಇತರೆ ರಾಜ್ಯಗಳು ಅಳವಡಿಸಿಕೊಳ್ಳುವ ಅವಶ್ಯಕತೆಯಿದ್ದು, ಭವಿಷ್ಯ ದೃಷ್ಠಿಯಿಂದ ಎಲೆಕ್ಟ್ರಿಕ್ ವಾಹನಗಳ ಬಳಕೆಯು ಸಾಕಷ್ಟು ಪ್ರಯೋಜನಕಾರಿಯಾಗಲಿದೆ.

Article Published On: Monday, November 16, 2020, 21:49 [IST]
English summary
England To Ban Sale Of New Petrol And Diesel Cars From 2030.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+